ಇಡಿ ಸಂಕಷ್ಟ: ವಿಚಾರಣೆಗೆ ಹಾಜರಾದ ಸಂಸದ ಡಿ.ಕೆ.ಸುರೇಶ್

ನವದೆಹಲಿ, ಅಕ್ಟೋಬರ್ 03: ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಇಂದು ಇಡಿ ವಿಚಾರಣೆಗೆ ಹಾಜರಾದರು. ಸುರೇಶ್ ಅವರ ಅಣ್ಣ ಡಿ.ಕೆ.ಶಿವಕುಮಾರ್ ಅವರ ಪ್ರಕರಣ ಸಂಬಂಧ ಇಡಿಯು ಡಿ.ಕೆ.ಸುರೇಶ್ ಅವರಿಗೆ ನೊಟೀಸ್ ಜಾರಿ ಮಾಡಿತ್ತು.

ಸೆಪ್ಟೆಂಬರ್ 30 ರಂದು ಇಡಿಯು ಡಿ.ಕೆ.ಸುರೇಶ್ ಅವರಿಗೆ ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು, ಅಂತೆಯೇ ಇಂದು ದೆಹಲಿಯ ಇಡಿ ಕಚೇರಿಗೆ ಡಿ.ಕೆ.ಸುರೇಶ್ ಹಾಜರಾಗಿದ್ದರು.

ಡಿ.ಕೆ.ಶಿವಕುಮಾರ್ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಇಡಿ ಯಿಂದ ಬಂಧನಕ್ಕೆ ಒಳಗಾಗಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಸುರೇಶ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

MP DK Suresh Attend ED Office For Inquiry

ಈ ಹಿಂದೆ ಇಡಿಯು ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯಾ ಅವರನ್ನೂ ವಿಚಾರಣೆಗೆ ಒಳಪಡಿಸಿತ್ತು. ಆ ನಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನೂ ವಿಚಾರಣೆ ಮಾಡಿತ್ತು. ಈಗ ಡಿ.ಕೆ.ಸುರೇಶ್ ಅವರನ್ನು ವಿಚಾರಣೆ ಮಾಡಲಾಗುತ್ತಿದೆ.

ಐಶ್ವರ್ಯ ಅವರಿಗೆ ಡಿ.ಕೆ.ಸುರೇಶ್ ಅವರು ಸಾಲ ನೀಡಿದ್ದಾಗಿ ಚುನಾವಣಾ ಆಯೋಗಕ್ಕೆ ನೀಡಿದ್ದ ಮಾಹಿತಿಯಲ್ಲಿ ದಾಖಲಾಗಿತ್ತು. ಅದರ ಬಗ್ಗೆಯೂ ಪ್ರಶ್ನೆ ಮಾಡುವ ಜೊತೆಗೆ, ಡಿ.ಕೆ.ಶಿವಕುಮಾರ್ ಮತ್ತು ಐಶ್ವರ್ಯ ಅವರೊಂದಿಗೆ ಹಣಕಾಸು ವ್ಯವಹಾರದ ಬಗ್ಗೆಯೂ ಇಡಿ ಅಧಿಕಾರಿಗಳು ಪ್ರಶ್ನೆ ಕೇಳುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+