ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಎದುರೇ ಕೇಂದ್ರದ ವೈಫಲ್ಯಗಳ ಬಗ್ಗೆ ಧ್ವನಿ ಎತ್ತಿದ ಡಿ.ಕೆ. ಸುರೇಶ್

|
Google Oneindia Kannada News

ಬೆಂಗಳೂರು, ಸೆ. 20: ರೈತ ವಿರೋಧಿ ಕಾಯ್ದೆಗಳು, ಕೊರೋನಾ ನಿರ್ವಹಣೆ ವೈಫಲ್ಯ, ರಾಜ್ಯದ ಆರ್ಥಿಕ ದುಸ್ಥಿತಿ, ಸಾಲದ ಹೊರೆ, ರಸಗೊಬ್ಬರ ಕೊರತೆ, ಜಿಡಿಪಿ ಕುಸಿತ, ನಿರುದ್ಯೋಗ, ಖಾಸಗೀಕರಣ ಸೇರಿದಂತೆ ರಾಜ್ಯದ ಸಮಸ್ಯೆಗಳು ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್. ಲೋಕಸಭೆಯಲ್ಲಿ ಮಾತನಾಡಿದರು.

2020-21ನೇ ಸಾಲಿನ ಬಜೆಟ್ ಅನುದಾನದ ಮೇಲಿನ ಚರ್ಚೆ ವೇಳೆ ಮಾತನಾಡಿದ ಸಂಸದ ಸುರೇಶ್ ಅವರು ರಾಜ್ಯದ ವಿಚಾರಗಳನ್ನು ಮಂಡಿಸಿದರು. ಕೇಂದ್ರ ಸರ್ಕಾರ ದೇಶದ ಆರ್ಥಿಕತೆ ನಿರ್ವಹಣೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಸಾಲದ ಹೊರೆ ಮತ್ತಷ್ಟು ಹೆಚ್ಚಿಸುವಂತಹ ನಿರ್ದೇಶನಗಳನ್ನು ನೀಡುತ್ತಿರುವುದನ್ನು ನಾವು ಗಮನಿಸಿದ್ದೇವೆ. ಅವೈಜ್ಞಾನಿಕ ಆರ್ಥಿಕ ನೀತಿ, ಕೋವಿಡ್, ನೆರೆ ನಿರ್ವಹಣೆ ವೈಫಲ್ಯ, ಜಿಡಿಪಿ ಶೇ. -23ಕ್ಕೆ ಕುಸಿದಿದೆ.

ಎಪಿಎಂಸಿ ತಿದ್ದುಪಡಿ ಕಾಯ್ದೆ: ಲೋಕಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರೋಧಎಪಿಎಂಸಿ ತಿದ್ದುಪಡಿ ಕಾಯ್ದೆ: ಲೋಕಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರೋಧ

ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ.3ಕ್ಕೆ ಕುಸಿದಿದ್ದು, ಬಿಜೆಪಿ ಹೊಗಳುವಂತಹ ಸಾಧನೆ ಏನೂ ಮಾಡಿಲ್ಲ. ಇಂತಹ ಪರಿಸ್ಥಿತಿ ನಡುವೆ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆ ತರಲು ಮುಂದಾಗಿದೆ. ನಿನ್ನೆಯಷ್ಟೇ ಎರಡು ರೈತ ವಿರೋಧಿ ಮಸೂದೆ ಮಂಡಿಸಲಾಗಿದೆ.

MP DK Suresh on anti-farmer laws unemployment and privatization Spoken in the Parliment

ಕೃಷಿ ಪ್ರಧಾನ ದೇಶಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ ಮೂಲಕ ಸಾಲ ನೀಡಲು ಆತ್ಮನಿರ್ಭರ ಯೋಜನೆಯಲ್ಲಿ 5 ಲಕ್ಷ ಕೋಟಿ ಕೃಷಿ ಕ್ಷೇತ್ರಕ್ಕೆ ತೊಡಗಿಸುವುದಾಗಿ ತಿಳಿಸಿದ್ದಾರೆ. ಈಗಾಗಲೇ ನೀಡಿರುವ ಸಾಲವನ್ನು ಸೇರಿಸಿ ರೈತರಿಗೆ 5 ಲಕ್ಷ ಕೋಟಿ ಸಾಲ ನೀಡುವುದಾಗಿ ಹೇಳಿಕೆ ನೀಡಿ ಕೇಂದ್ರ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ.

MP DK Suresh on anti-farmer laws unemployment and privatization Spoken in the Parliment

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಚಿನ್ನಾಭರಣದ ಸಾಲದ ಮೇಲಿನ ಸಬ್ಸಿಡಿಯನ್ನು ನರೇಂದ್ರ ಮೋದಿ ಸರ್ಕಾರ ತೆಗೆದುಹಾಕಿರುವುದು ರೈತ ವಿರೋಧಿ ಕ್ರಮವಲ್ಲವೇ? ಇದಕ್ಕೆ ಪ್ರಧಾನಮಂತ್ರಿಗಳು ಹಾಗೂ ವಿತ್ತ ಸಚಿವರು ಉತ್ತರಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಹಕಾರಿ ಬ್ಯಾಂಕ್ ಗಳ ವ್ಯವಸ್ಥೆ ಹಾಳು ಮಾಡಲು ಪ್ರಯತ್ನಿಸಿದೆ. ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಹೆಚ್ಚಾಗುತ್ತಿದೆ. ಇನ್ನು ಇಂಧನ ತೈಲಗಳ ಬೆಲೆ ಏರಿಕೆ ಮಾಡಿದೆ. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕ ವಲಯ ಕ್ಷೇತ್ರಗಳಾದ ವಿಮೆ, ವಿಮಾನಯಾನ, ರೈಲ್ವೆ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಇದು ಉದ್ಯೋಗ ಸೃಷ್ಟಿಗೆ ಭಾರಿ ಹೊಡೆತ ನೀಡಿಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

English summary
Bengaluru Rural Parliamentarian DK Suresh on anti-farmer laws, corona management failure, state's financial woes, debt burden, shortage of fertilizer, GDP collapse, unemployment and privatization Spoken in the Lok Sabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X