• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಂಸದ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ ಕರೆ

|

ನವದೆಹಲಿ, ಡಿಸೆಂಬರ್ 22: ತಮಗೆ ಜೀವ ಬೆದರಿಕೆ ಕರೆ ಬಂದಿದ್ದು, ಸೂಕ್ತ ಭದ್ರತೆ ಒದಗಿಸಿ ಎಂದು ಮಾಜಿ ಕ್ರಿಕೆಟಿಗ , ಸಂಸದ ಗೌತಮ್ ಗಂಭೀರ್ ಪೊಲೀಸರಿಗೆ ಮನವಿ ಮಾಡಿದ್ದಾರೆ.

ನನಗೆ ಹಾಗೂ ನನ್ನ ಕುಟುಂಬಕ್ಕೆ ಅಂತಾರಾಷ್ಟ್ರೀಯ ದೂರವಾಣಿ ಸಂಖ್ಯೆಯೊಂದರಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಈ ವಿಷಯ ಸಂಬಂಧ ಎಫ್​ಐಆರ್ ದಾಖಲಿಸಿ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ' ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ತಮಗೆ ಜೀವ ಬೆದರಿಕೆ ಇದ್ದು, ಸೂಕ್ತ ಭದ್ರತೆ ಒದಗಿಸುವಂತೆ ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಶಹದರಾ ಪೊಲೀಸ್ ಉಪ ಆಯುಕ್ತರಿಗೆ ಶನಿವಾರ ಮನವಿ ಮಾಡಿದ್ದಾರೆ.

ಕಳೆದ ಶುಕ್ರವಾರ ಸಿಎಎ ಪ್ರತಿಭಟನೆ ಬಗ್ಗೆ ಟ್ವೀಟ್ ಮಾಡಿದ್ದ ಗಂಭೀರ್, ಎಲ್ಲ ಮಾನವ ಹಕ್ಕು ಹೋರಾಟಗಾರರು, ಬಾಲಿವುಡ್ ಗಮನಸೆಳೆಯುವವರು ಮತ್ತು ಹುಸಿ ಉದಾರವಾದಿ ಪತ್ರಕರ್ತರು ಪೊಲೀಸರಿಗೆ ಮಾನವ ಹಕ್ಕುಗಳು ಇವೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಲು ವಿಶ್ವಸಂಸ್ಥೆಗೆ ಹೋಗಿದ್ದಾರೆ ಎಂದು ಹೇಳಿದ್ದರು.

ಕೆಲ ದಿನಗಳ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿರುವ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಂಸದೀಯ ಸಮಿತಿ ಸಭೆಗೆ ಸಂಸದ ಗೌತಮ್ ಗಂಭೀರ್ ಹಾಜರಾಗಿದ್ದ ಬಳಿಕ ಗಂಭೀರ್ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್‌ಗಳು ರಾರಾಜಿಸಿದ್ದವು.

ಇವರನ್ನು ಎಲ್ಲಾದರೂ ನೀವು ನೋಡಿರುವಿರಾ ಇಂದೋರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಕೊನೆಯ ಬಾರಿ ಜಿಲೇಬಿ ಸವಿಯುತ್ತಾ ಕಾಣಿಸಿಕೊಂಡಿದ್ದರು. ಇಡೀ ದೆಹಲಿಯೇ ಇವರಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ಬರೆದಿರುವ ಪೋಸ್ಟರ್‌ಗಳು ಕಾಣಿಸಿಕೊಂಡಿದ್ದವು.

English summary
Cricketer-turned-politician and BJP East Delhi MP Gautam Gambhir on Saturday wrote to Delhi Police after he allegedly received death threats to him and his family members from an international number.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X