ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಕಾಯ್ದೆ ವಾಪಸ್: ರೈತರ ಶಾಂತಿಯುತ ಸತ್ಯಾಗ್ರಹಕ್ಕೆ ಸಂದ ಜಯ ಎಂದ ಸುಬ್ರಮಣಿಯನ್ ಸ್ವಾಮಿ

|
Google Oneindia Kannada News

ನವದೆಹಲಿ, ನವೆಂಬರ್ 19: ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಘೋಷಣೆಯನ್ನು ಸಂಸದ ಸುಬ್ರಮಣಿಯನ್ ಸ್ವಾಮಿ ಸ್ವಾಗತಿಸಿದ್ದಾರೆ.

"ಕಳೆದ ಒಂದು ವರ್ಷಗಳ ಕಾಲ ಬಿಸಿಲು ಹಾಗೂ ಮೈಕೊರೆಯುವ ಚಳಿ ನಡುವೆ ಶಾಂತಿಯುತ ಸತ್ಯಾಗ್ರಹ ನಡೆಸಿದ ರೈತರ ಸಂಕಷ್ಟಗಳನ್ನು ನಿವಾರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಧಾರದಿಂದ ನನಗೆ ತುಂಬಾ ಸಂತೋಷವಾಗುತ್ತಿದೆ. ಆದರೆ ಎನ್‌ಇಸಿಯಲ್ಲಿ ನಿರ್ಣಯವನ್ನು ಅಂಗೀಕರಿಸದಿರಲು ಬಿಜೆಪಿ ಪ್ರಾಯಶ್ಚಿತ್ತ ಪಡಬೇಕಾಗಿದೆ," ಎಂದು ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಕೂ ಮಾಡಿದ್ದಾರೆ.

Breaking: 3 ಕೃಷಿ ಕಾನೂನು ಹಿಂಪಡೆದ ಕೇಂದ್ರ ಸರ್ಕಾರBreaking: 3 ಕೃಷಿ ಕಾನೂನು ಹಿಂಪಡೆದ ಕೇಂದ್ರ ಸರ್ಕಾರ

ಇದರ ಮಧ್ಯೆ "ಕೃಷಿ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಸದಸ್ಯಕ್ಕೆ ಹಿಂಪಡೆಯುವುದಿಲ್ಲ. ಸಂಸತ್ತಿನಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ. ಎಂಎಸ್‌ಪಿ ಹೊರತುಪಡಿಸಿ ರೈತರ ಇತರ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಮಾತನಾಡಬೇಕು," ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಟ್ವೀಟ್ ಮಾಡಿದ್ದಾರೆ.

MP Subramanian Swamy Reaction after Controversial Farm Laws Withdrawn

ರೈತರ ಪರವಾಗಿ ಮೊಳಗಿದ ಜಯಘೋಷ:

ಕಳೆದ 2020ರ ನವೆಂಬರ್ 26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಡೆಸಿದ ನಿರಂತರ ಪ್ರತಿಭಟನೆ ನಡೆಸಿದ್ದರು. ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಹೊರ ಬೀಳುತ್ತಿದ್ದಂತೆ ದೆಹಲಿಯ ಗಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಸಂತಸ ಮುಗಿಲು ಮುಟ್ಟಿತ್ತು. ರೈತ ಹೋರಾಟದ ಪರ "ಕಿಸಾನ್ ಜಿಂದಾಬಾದ್" ಜಯಘೋಷ ವಾಕ್ಯವನ್ನು ಮೊಳಗಿತು.

ಕೃಷಿ ಕಾಯ್ದೆ ವಾಪಸ್ ಬಗ್ಗೆ ಪ್ರಧಾನಿ ಹೇಳಿದ್ದೇನು?:

ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗಿರುವ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದರು. ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, "ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ , ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೆವು. ಆದರೆ ಅಂತಹ ಪವಿತ್ರವಾದ, ಸಂಪೂರ್ಣ ಶುದ್ಧವಾದ ರೈತರ ಅನುಕೂಲಕ್ಕಾಗಿ ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ," ಎಂದು ಹೇಳಿದ್ದಾರೆ.

ವಿವಾದಿತ ಕೃಷಿ ಕಾಯ್ದೆಗಳು ಯಾವುವು?

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಇದೀಗ ಸಮ್ಮತಿ ಸೂಚಿಸಿದೆ.

English summary
MP Subramanian Swamy Reaction after Controversial Farm Laws Withdrawn.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X