ಇದು ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ; ಸುಮಲತಾ
ನವದೆಹಲಿ, ಡಿಸೆಂಬರ್ 10: ನವದೆಹಲಿಯ ಸಂಸದ್ ಮಾರ್ಗದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನದ ಕಾರ್ಯಕ್ಕೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಿದ್ದಾರೆ. ಕೇಂದ್ರ ಸಂಪುಟ ಸಚಿವರು, ರಾಜ್ಯ ಸಚಿವರು, ಸಂಸದರು, ಕಾರ್ಯದರ್ಶಿಗಳು, ರಾಯಭಾರಿಗಳು ಸೇರಿದಂತೆ ಸುಮಾರು 200 ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಕರ್ನಾಟಕದಿಂದ ಸಂಸದೆ ಸುಮಲತಾ ಅವರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಭೂಮಿ ಪೂಜೆ ಸಂದರ್ಭ ಸುಮಲತಾ ಅವರೂ ಉಪಸ್ಥಿತರಿದ್ದರು.
ಈ ಕುರಿತು ಟ್ವೀಟ್ ಮಾಡಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ ಸುಮಲತಾ. "ಇಂದು ದೆಹಲಿಯಲ್ಲಿ ನೂತನ ಸಂಸತ್ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ 200 ಜನರನ್ನು ಆಹ್ವಾನಿಸಲಾಗಿದೆ. ಈ 200 ಜನ ಆಹ್ವಾನಿತರಲ್ಲಿ ಒಬ್ಬಳಾಗಿ ಪಾಲ್ಗೊಂಡ ಭಾಗ್ಯ ನನ್ನದು, ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ" ಎಂದು ಟ್ವೀಟ್ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರೂ ಪಾಲ್ಗೊಂಡಿದ್ದಾರೆ.
ನೂತನ ಸಂಸತ್ ಭವನ ಕಟ್ಟಡಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದ ನೇರ ಪ್ರಸಾರ ವಿಡಿಯೋ :












Click it and Unblock the Notifications