ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನಪ್ರತಿನಿಧಿಗಳು ಗಾಂಧಿ ತತ್ವವನ್ನು ಪಾಲಿಸಬೇಕು: ರಾಷ್ಟ್ರಪತಿ ರಾಮನಾಥ್ ಕೋವಿಂದ್

|
Google Oneindia Kannada News

ನವದೆಹಲಿ, ಜುಲೈ 23: ಪಕ್ಷದ ರಾಜಕೀಯಕ್ಕಿಂತ ರಾಷ್ಟ್ರದ ಹಿತಾಸಕ್ತಿಯನ್ನು ಕಾಪಾಡುವುದು ಮುಖ್ಯ, ಜನರ ಕಲ್ಯಾಣಕ್ಕಾಗಿ ಏನು ಅಗತ್ಯ ಎನ್ನುವುದನ್ನು ನಿರ್ಧರಿಸಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂಡ್ ರಾಜಕೀಯ ಪಕ್ಷಗಳಿಗೆ ಒತ್ತಾಯಿಸಿದರು. ಶನಿವಾರ ಅವರು ತಮ್ಮ ವಿದಾಯ ಭಾಷಣದಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಸಂದೇಶ ನೀಡಿದರು.

ಸಂಸತ್ತನ್ನು "ಪ್ರಜಾಪ್ರಭುತ್ವದ ದೇವಾಲಯ" ಎಂದು ಕರೆದ ರಾಷ್ಟ್ರಪತಿ ಕೋವಿಂದ್, ಸಂಸತ್ತಿನಲ್ಲಿ ಚರ್ಚೆ ಮತ್ತು ಭಿನ್ನಾಭಿಪ್ರಾಯದ ಹಕ್ಕುಗಳನ್ನು ಚಲಾಯಿಸುವಾಗ ಸಂಸದರು ಯಾವಾಗಲೂ ಗಾಂಧಿ ತತ್ವವನ್ನು ಅನುಸರಿಸಬೇಕು ಎಂದು ಅವರು ಎಲ್ಲಾ ಪಕ್ಷಗಳಿಗೆ ಕರೆ ನೀಡಿದರು.

ಭಾರತದ ರಾಷ್ಟ್ರಪತಿಗಳ ಪಟ್ಟಿ:ಡಾ. ರಾಜೇಂದ್ರ ಪ್ರಸಾದ್ -ದ್ರೌಪದಿ ಮುರ್ಮುಭಾರತದ ರಾಷ್ಟ್ರಪತಿಗಳ ಪಟ್ಟಿ:ಡಾ. ರಾಜೇಂದ್ರ ಪ್ರಸಾದ್ -ದ್ರೌಪದಿ ಮುರ್ಮು

"ನಾವು ಭಾರತವನ್ನು ದೊಡ್ಡ ಕುಟುಂಬವಾಗಿ ನೋಡಿದಾಗ ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಪರಿಹರಿಸಲು ಹಲವಾರು ಮಾರ್ಗಗಳು ಸಿಗುತ್ತವೆ. ಮಹಾತ್ಮಾ ಗಾಂಧಿಯವರ ಶಾಂತಿ ಮತ್ತು ಅಹಿಂಸೆಯು ಸಾಮರಸ್ಯವನ್ನು ಹುಟ್ಟುಹಾಕುವ ಸಾಧನವಾಗಿದೆ ನಾವು ಅವರ ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು" ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.

MPs Should Follow Gandhian Philosophy In Parliament:President Ram Nath Kovind

"ನನಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ದೇಶದ ನಾಗರಿಕರಿಗೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ" ಎಂದು ಅವರು ಹೇಳಿದರು.

"ನನ್ನ ಅಧಿಕಾರಾವಧಿಯಲ್ಲಿ ಬೆಂಬಲ ನೀಡಿದ ಪ್ರಧಾನಿ ಮೋದಿ ಅವರ ಮಂತ್ರಿ ಮಂಡಳಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ." ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿಳಿಸಿದರು.

ದ್ರೌಪದಿ ಮುರ್ಮುಗೆ ಅಭಿನಂದನೆ ಸಲ್ಲಿಸಿದ ಕೋವಿಂದ್

ಸಂಸತ್ತಿನಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ಸಾಂಕ್ರಾಮಿಕ ಸಮಯದಲ್ಲಿ ಹೋರಾಟವನ್ನು ರಾಮನಾಥ್ ಕೋವಿಂದ್ ನೆನಪಿಸಿಕೊಂಡರು. "ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಜಗತ್ತು ಹೆಣಗಾಡುತ್ತಿದೆ. ಸಾಂಕ್ರಾಮಿಕ ರೋಗದಿಂದ ನಾವು ಪಾಠಗಳನ್ನು ಕಲಿಯುತ್ತೇವೆ ಎಂದು ನಾನು ಭಾವಿಸುತ್ತೇನೆ, ನಾವೆಲ್ಲರೂ ಪ್ರಕೃತಿಯ ಭಾಗ ಎಂಬುದನ್ನು ನಾವು ಮರೆತಿದ್ದೇವೆ. ಕಷ್ಟದ ಸಮಯದಲ್ಲಿ, ಭಾರತದ ಪ್ರಯತ್ನಗಳನ್ನು ಪ್ರಪಂಚದಾದ್ಯಂತ ಪ್ರಶಂಸಿಸಲಾಯಿತು," ಎಂದು ಅವರು ಹೇಳಿದರು.

MPs Should Follow Gandhian Philosophy In Parliament:President Ram Nath Kovind

"ಮುಂದಿನ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ, ಅವರ ಮಾರ್ಗದರ್ಶನದಿಂದ ದೇಶಕ್ಕೆ ಪ್ರಯೋಜನವಾಗಲಿದೆ" ಎಂದು ನಿರ್ಗಮಿತ ರಾಷ್ಟ್ರಪತಿ ಕೋವಿಂದ್ ಹೇಳಿದ್ದಾರೆ.

ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು, ಸೋಮವಾರ ಸೋಮವಾರ ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ರಾಷ್ಟ್ರಪತಿ ಕೋವಿಂದ್ ಅವರಿಗೆ ಬೀಳ್ಕೊಡುಗೆ ನೀಡುವ ಸಮಾರಂಭದಲ್ಲಿ ಹಾಜರಿದ್ದರು.

English summary
President Ram Nath Kovind urged the political parties that safeguarding the interest of the nation is more important than party politics and decide what is necessary for the welfare of the people. He gave a message to all political parties in his farewell address on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X