ಅರವಿಂದ ಕೇಜ್ರಿವಾಲ್ ಪದಗ್ರಹಣಕ್ಕೆ ವಿಶೇಷ ಅತಿಥಿಗೆ ಆಹ್ವಾನ!
ನವದೆಹಲಿ, ಫೆಬ್ರವರಿ 13 : ದೆಹಲಿ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದೆ. ಫೆಬ್ರವರಿ 16ರಂದು ಅರವಿಂದ ಕೇಜ್ರಿವಾಲ್ 3ನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಅರವಿಂದ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮತ್ತೊಮ್ಮೆ ಅಧಿಕಾರ ನಡೆಸಲು ಅವಕಾಶ ನೀಡಿದ ದೆಹಲಿ ಜನರ ಸಮ್ಮುಖದಲ್ಲಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಅರವಿಂದ ಕೇಜ್ರಿವಾಲ್ ಪದಗ್ರಹಣ ಸಮಾರಂಭಕ್ಕೆ ಮುಖ್ಯ ಅತಿಥಿಯೊಬ್ಬರನ್ನು ಆಹ್ವಾನಿಸಲಾಗಿದೆ. ಅವರು ದೇಶದ ಪ್ರಧಾನಿಯಲ್ಲ, ಯಾವುದೇ ರಾಜ್ಯದ ಮುಖ್ಯಮಂತ್ರಿಯೂ ಅಲ್ಲ. ರಾಜಕೀಯ ಎಂದರೇನು? ಎಂದು ತಿಳಿಯದ ಒಂದು ವರ್ಷದ ಮಗು.
ದೆಹಲಿ ಚುನಾವಣೆ ಫಲಿತಾಂಶ ಪ್ರಕಟಗೊಂಡ ದಿನ ಆಮ್ ಆದ್ಮಿ ಪಕ್ಷದ ಕಚೇರಿ ಮುಂದೆ ಇದ್ದ ಮಗು ಎಲ್ಲರ ಗಮನ ಸೆಳೆದಿತ್ತು. ಕೇಜ್ರಿವಾಲ್ ರೀತಿ ಮಫ್ಲರ್ ಸುತ್ತಿಕೊಂಡು ಎಎಪಿ ಟೋಪಿ ಧರಿಸಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿದ್ದವು.

1 ವರ್ಷದ ಕಂದಮ್ಮ ಅತಿಥಿ
ಅರವಿಂದ ಕೇಜ್ರಿವಾಲ್ ಪ್ರಮಾಣ ವಚನ ಸಮಾರಂಭಕ್ಕೆ 1 ವರ್ಷದ ಕಂದಮ್ಮ ಮುಖ್ಯ ಅತಿಥಿ. ಈ ಕುರಿತು ಟ್ವಿಟರ್ ಮೂಲಕ ಎಎಪಿ ಮಾಹಿತಿ ನೀಡಿದೆ. ಕೇಜ್ರಿವಾಲ್‌ರಂತೆ ವೇಷ ಧರಿಸಿದ್ದ ಕಂದಮ್ಮನನ್ನು ಪಕ್ಷ 'Baby Mufflerman' ಎಂದು ಕರೆದಿದೆ.

ಗಮನ ಸೆಳೆದಿದ್ದ ಮುದ್ದು ಕಂದಮ್ಮ
ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ದಿನ 1 ವರ್ಷದ ಮಗು ಅರವಿಂದ ಕೇಜ್ರಿವಾಲ್ ರೀತಿ ವೇಷ ಧರಿಸಿಕೊಂಡು ಎಎಪಿ ಕಚೇರಿ ಮುಂದೆ ಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ಕಂದಮ್ಮನ ಚಿತ್ರ ವೈರಲ್ ಆಗಿತ್ತು.

10 ಗಂಟೆಗೆ ಪ್ರಮಾಣ ವಚನ
ಫೆಬ್ರವರಿ 16ರಂದು ಬೆಳಗ್ಗೆ 10ಗಂಟೆಗೆ ರಾಮ್ ಲೀಲಾ ಮೈದಾನದಲ್ಲಿ ಅರವಿಂದ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ದೆಹಲಿಯ ಜನರು ಸಾಕ್ಷಿಯಾಗಲಿದ್ದಾರೆ.

ಯಾವ ಗಣ್ಯರಿಗೂ ಆಹ್ವಾನವಿಲ್ಲ
ಎಎಪಿಯ ಹಿರಿಯ ನಾಯಕ ಗೋಪಾಲ್ ರೈ ಪ್ರಮಾಣ ವಚನ ಸಮಾರಂಭದ ಬಗ್ಗೆ ಹೇಳಿಕೆ ನೀಡಿದ್ದಾರೆ. "ಯಾವುದೇ ರಾಜ್ಯದ ಮುಖ್ಯಮಂತ್ರಿಗಳು, ರಾಜಕೀಯ ನಾಯಕರನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ. ದೆಹಲಿ ಜನರೇ ನಮ್ಮ ಗಣ್ಯರು" ಎಂದು ಹೇಳಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications