ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿರ್ಭಯ ಪ್ರಕರಣ; ಜೈಲಿನಲ್ಲಿ ಮುಕೇಶ್ ಸಿಂಗ್ ಮೇಲೆ ಅತ್ಯಾಚಾರ

|
Google Oneindia Kannada News

ನವದೆಹಲಿ, ಜನವರಿ 28 : ದೆಹಲಿಯ ತಿಹಾರ್ ಜೈಲಿನಲ್ಲಿ ಮುಕೇಶ್ ಸಿಂಗ್ ಮೇಲೆ ಅತ್ಯಾಚಾರ ನಡೆದಿತ್ತು ಎಂದು ವಕೀಲರು ಸುಪ್ರೀಂಕೋರ್ಟ್‌ ಮುಂದೆ ವಾದ ಮಂಡಿಸಿದರು. ನಿರ್ಭಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಮುಕೇಶ್‌ ಸಿಂಗ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಮುಕೇಶ್ ಸಿಂಗ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಸುಪ್ರೀಂಕೋರ್ಟ್ ನಡೆಸಿದ್ದು, ಬುಧವಾರಕ್ಕೆ ತೀರ್ಪು ಕಾಯ್ದಿರಿಸಿದೆ. ಫೆಬ್ರವರಿ 1ರಂದು ಮುಕೇಶ್ ಸಿಂಗ್ ಗಲ್ಲಿಗೇರಿಸಲು ದಿನಾಂಕ ನಿಗದಿಗೊಳಿಸಲಾಗಿದೆ.

ನಿರ್ಭಯಾ ಕೇಸ್ ಅಪರಾಧಿಗೆ ವಿಷವುಣಿಸಿದ್ದರು: ವಕೀಲ ಆರೋಪನಿರ್ಭಯಾ ಕೇಸ್ ಅಪರಾಧಿಗೆ ವಿಷವುಣಿಸಿದ್ದರು: ವಕೀಲ ಆರೋಪ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು. ದೆಹಲಿ ಸರ್ಕಾರ ಮತ್ತು ಕೇಂದ್ರ ಗೃಹ ಇಲಾಖೆಯ ಅಭಿಪ್ರಾಯ ಪಡೆದು ರಾಷ್ಟ್ರಪತಿಗಳು ಅರ್ಜಿ ತಿರಸ್ಕರಿಸಿದ್ದರು. ಕ್ಷಮಾದಾನ ನೀಡಬಾರದು ಎಂದು ದೆಹಲಿ ಸರ್ಕಾರ ಹೇಳಿತ್ತು.

ನಿರ್ಭಯಾ ಪ್ರಕರಣ: ತಿಹಾರ್ ಜೈಲಿನ ವಿರುದ್ಧ ಕೋರ್ಟ್‌ಗೆ ಅಪರಾಧಿಗಳ ದೂರುನಿರ್ಭಯಾ ಪ್ರಕರಣ: ತಿಹಾರ್ ಜೈಲಿನ ವಿರುದ್ಧ ಕೋರ್ಟ್‌ಗೆ ಅಪರಾಧಿಗಳ ದೂರು

Mukesh Singh Allegedly Raped In Tihar Jail

ಕ್ಷಮಾದಾನ ಅರ್ಜಿ ತಿರಸ್ಕಾರ ಮಾಡಿದ ರಾಷ್ಟ್ರಪತಿಗಳ ಕ್ರಮವನ್ನು ಪ್ರಶ್ನಿಸಿ ಮುಕೇಶ್ ಸಿಂಗ್ ಸುಪ್ರೀಂಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.

ನಿರ್ಭಯಾ ಅತ್ಯಾಚಾರ: ಕ್ಷಮಾದಾನದ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿನಿರ್ಭಯಾ ಅತ್ಯಾಚಾರ: ಕ್ಷಮಾದಾನದ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

2013ರಿಂದ ಮುಕೇಶ್ ಸಿಂಗ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಜೈಲಿನಲ್ಲಿ ಆತನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ವಕೀಲರು ಸುಪ್ರೀಂಕೋರ್ಟ್‌ ಮುಂದೆ ವಾದ ಮಂಡಿಸಿದ್ದಾರೆ. ನಿರ್ಭಯ ಪ್ರಕರಣದ ಮತ್ತೊಬ್ಬ ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಮುಕೇಶ್‌ಗೆ ಬಲವಂತ ಮಾಡಲಾಗಿದೆ ಎಂದು ವಕೀಲರು ಹೇಳಿದ್ದಾರೆ.

ತಿಹಾರ್ ಜೈಲಿನಲ್ಲಿ ನಿರ್ಭಯ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಮವಾರ ಜೈಲಿನಲ್ಲಿ ಗಲ್ಲಿಗೇರಿಸುವ ಅಣಕು ಅಭ್ಯಾಸವನ್ನು ಮಾಡಲಾಗಿದೆ. ನಾಲ್ವರು ಅಪರಾಧಿಗಳ ಮೇಲೆ ವಿಶೇಷ ನಿಗಾ ಇಡಲಾಗಿದೆ.

ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಾದ ಮುಕೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಫೆಬ್ರವರಿ 1ರ ಬೆಳಗ್ಗೆ 6 ಗಂಟೆಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ.

English summary
Mukesh Singh was allegedly raped inside Delhi's Tihar jail claimed his lawyer. Mukesh Singh one of the convict in the 2012 Delhi gang-rape case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X