ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಕುಲ್ ವಾಸ್ನಿಕ್ ಹೆಗಲಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ? ನಾಳೆ ನಿರ್ಧಾರ

|
Google Oneindia Kannada News

ನವದೆಹಲಿ, ಆಗಸ್ಟ್ 09: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ನಾಳೆ(ಆ.10) ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಅಧ್ಯಕ್ಷರ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಕಾಂಗ್ರೆಸ್ ನ ಹಿರಿಯ ನಾಯಕ ಮುಕುಲ್ ವಾಸ್ನಿಕ್ ಅವರು ಸಂಭಾವ್ಯ ಅಧ್ಯಕ್ಷರ ಪತ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ 'ಕಮರಿದ' ಇನ್ನೊಂದು ಹೆಸರುಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ 'ಕಮರಿದ' ಇನ್ನೊಂದು ಹೆಸರು

59 ವರ್ಷ ವಯಸ್ಸಿನ ಮುಕುಲ್ ವಾಸ್ನಿಕ್, ಕಾಂಗ್ರೆಸ್ ಪಕ್ಷದಲ್ಲಿ ಬಹುಕಾಲದಿಂದ ಸೇವೆ ಸಲ್ಲಿಸಿ, ಅನುಭವ ಗಳಿಸಿದ್ದಾರೆ. ಅಲ್ಲದೆ ಮಂತ್ರಿಯಾಗಿ ಆಡಳಿತ ನಡೆಸಿದ ಅನುಭವವೂ ಅವರಿಗಿದೆ.

Mukul Wasnik might be Congress chief

ಲೋಕಸಭೆ ಚುನಾವಣೆಯ ನಂತರ ಪಕ್ಷದ ವರ್ಚಸ್ಸು ಮತ್ತಷ್ಟು ಕುಸಿದಿದ್ದು, ಪಕ್ಷದ ಚುಕ್ಕಾಣಿ ಹಿಡಿಯುವವರ ಮೇಲೆ ಮಣಭಾರದ ಹೊಣೆ ಬೀಳಲಿದೆ. ಈ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಬಲ್ಲರು ಮುಕುಲ್ ವಾಸ್ನಿಕ್ ಎಂಬುದು ಕಾಂಗ್ರೆಸ್ ಹಿರಿಯ ಮುಖಂಡರ ಅಭಿಪ್ರಾಯ. ಎಲ್ಲಕ್ಕಿಂತ ಹೆಚ್ಚಾಗಿ ಅವರು ಗಾಂಧಿ ಕುಟುಂಬದ ಆಪ್ತರು.

ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನ ತೊರೆದು ಈಗಾಗಲೇ ಎರಡು ತಿಂಗಳು ಕಳೆದಿವೆಯಾದರೂ, ಪಕ್ಷಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡುವಲ್ಲಿ ಕಾಂಗ್ರೆಸ್ ಈಗಲೂ ವಿಳಂಬ ಮಾಡುತ್ತಿದ್ದು, ಇದು ಕಾರ್ಯಕರ್ತರ ಮನಸ್ಸಿನಲ್ಲಿಯೂ ಉತ್ತಮ ಅಭಿಪ್ರಾಯ ಮೂಡಿಸುವುದಿಲ್ಲ ಎಂದು ಈಗಾಗಲೇ ಪಕ್ಷದ ಹಿರಿಯರಾದ ಎಕೆ ಆಂಟನಿ, ಅಹ್ಮದ್ ಪಟೇಲ್, ಕೆಸಿ ವೇಣುಗೋಪಾಲ್ ಸೇರಿದಂತೆ ಹಿರಿಯ ಕಾಂಗ್ರೆಸ್ಸಿಗರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಅಧ್ಯಕ್ಷೆಯಾಗೊಲ್ಲ ಎಂದ ಪ್ರಿಯಾಂಕಾ ಗಾಂಧಿ, ಪಟ್ಟಿಯಲ್ಲಿ 7 ಹೆಸರು?ಅಧ್ಯಕ್ಷೆಯಾಗೊಲ್ಲ ಎಂದ ಪ್ರಿಯಾಂಕಾ ಗಾಂಧಿ, ಪಟ್ಟಿಯಲ್ಲಿ 7 ಹೆಸರು?

ನಾಳೆ ಸಭೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಈ ಸಭೆಯಲ್ಲಿ ಅಧ್ಯಕ್ಷರ ಹೆಸರು ಅಂತಿಮವಾಗಲಿದೆ ಎನ್ನಲಾಗಿದೆ.

English summary
Congress working committee will be holding a meeting on Aug 10th to elect President. Mukul Wasnik is top on the list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X