• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮುಂಬೈ ಟೆರರ್ ಅಟ್ಯಾಕ್ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಬಂಧನ

|

ನವದೆಹಲಿ, ಜುಲೈ 17: ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಲಷ್ಕರ್-ಎ-ತೊಯಿಬಾ ಭಯೋತ್ಪಾದಕ ಸಂಘಟನೆಯ ಪ್ರಮುಖನಾಗಿದ್ದ ಈತ ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದಂತೆ 23 ಪ್ರಕರಣಗಳನ್ನು ಎದುರಿಸುತ್ತಿದ್ದ. 26/11 ಯಾರಿಗೆ ತಾನೆ ನೆನಪಿಲ್ಲ ಹೇಳಿ, ಮುಂಬೈನ ತಾಜ್ ಹೋಟೆಲ್ ಮೇಲೆ ದಾಳಿ ನಡೆಸಿ ನೂರಾರು ಮಂದಿ ಸಾವಿಗೆ ಕಾರಣವಾಗಿತ್ತು.

26/11 ಮುಂಬೈ ದಾಳಿ: ಪಾಕ್ ನ ಇಬ್ಬರು ಸೇನಾಧಿಕಾರಿ ವಿರುದ್ಧ ಜಾಮೀನುರಹಿತ ವಾರಂಟ್

ಭಾರತದ ವಿರುದ್ಧವಾಗಿ ಪಾಕಿಸ್ತಾನದಲ್ಲಿ ಹಲವು ಪ್ರತಿಭಟನೆಗಳಲ್ಲಿ ಈತ ಮುಕ್ತವಾಗಿ ಪಾಲ್ಗೊಳ್ಳುತ್ತಿದ್ದ. ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಪಾಕಿಸ್ತಾನವು ಆತನ ಮೇಲೆ ಭಯೋತ್ಪಾದನೆ ಪ್ರಕರಣ ದಾಖಲಿಸಿತ್ತು.

ಮುಂಬೈ ದಾಳಿ ನಡೆದು 10 ವರ್ಷ ಕಳೆದ ಸಂದರ್ಭದಲ್ಲಿ ಅಮೆರಿಕವು ಭಯೋತ್ಪಾದಕರನ್ನು ಬಂಧಿಸುವಂತೆ ಪಾಕಿಸ್ತಾನವನ್ನು ಒತ್ತಾಯಿಸಿತ್ತು.

2008ರ ನವೆಂಬರ್ 26ರಂದು ಪಾಕಿಸ್ತಾನ ಮೂಲದ ಇಸ್ಲಾಂ ಮೂಲಭೂತವಾದದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸುಮಾರು 12 ಜನ ಉಗ್ರರು ತಂತ್ರಗಾರಿಕೆಯಿಂದ ಪಾಕಿಸ್ತಾನದಿಂದ ಭಾರತದ ಒಳ ನುಸುಳಿದ್ದು ಅಲ್ಲದೆ ಸತತ ಮೂರು ದಿನಗಳ ಕಾಲ ಮುಂಬಯಿ ನಗರವನ್ನು ಗುರಿಯಾಗಿಸಿಕೊಂಡು ಬಾಂಬ್ ಮತ್ತು ಗುಂಡಿನ ಮಳೆಗರೆದು ಸಾರ್ವಜನಿಕ ಜೀವನ ಹಾಗು ಅಪಾರ ಆಸ್ತಿ-ಪಾಸ್ತಿ ನಷ್ಟಗಳಿಗೆ ಕಾರಣರಾದರು.

ಮುಂಬೈ ದಾಳಿ: ಹತ್ತು ವರ್ಷ ಕಳೆದರೂ ಇನ್ನೂ ಮಾಸದ ಗಾಯದ ಕಲೆ

ಮುಂಬಯಿ ಮಹಾನಗರ ಮೂರು ದಿನಗಳ ಕಾಲ ಭಯೋತ್ಪಾದಕರ ಕಪಿ ಮುಷ್ಟಿಯಲ್ಲಿ ಸಿಲುಕಿ ಅಕ್ಷರಶಃ ನರಕ ದರ್ಶನ ಮಾಡಿತು. ದಾಳಿ ಮುಗಿದು ಎಲ್ಲ ಉಗ್ರರನ್ನು ಭಾರತದ ಸೇನೆ ಹಾಗು ದೇಶದ ಆಂತರಿಕ ಪೋಲಿಸ್ ಪಡೆ ಹತ್ಯೆ ಮಾಡಿತು. ಅದರಲ್ಲಿ ಒಬ್ಬ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲು ಸಫಲವಾಯಿತು.

2008ರ ನವೆಂಬರ್ 26 ರಂದು ಆರಂಭವಾದ ದಾಳಿ 29ರ ಶನಿವಾರದವರೆಗೂ ಬಿರುಸಾಗಿ ನಡೆಯಿತು. ಅಷ್ಟರಲ್ಲಿ ದೇಶದ ಸೇನಾ ಪಡೆಯೂ ಮುಂಬಯಿಗೆ ಧಾವಿಸಿ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ಮೊದಲಾಯಿತು. ದಾಳಿಯ ಫಲವಾಗಿ ಸರ್ಕಾರಿ ಅಧಿಕಾರಿಗಳೂ, ಸಿಪಾಯಿಗಳು, ಸಾರ್ವಜನಿಕರೂ ಸೇರಿದಂತೆ 168 ಜನ ಪ್ರಾಣ ಕಳೆದುಕೊಂಡರು ಹಾಗೂ 400ಕ್ಕೂ ಮಿಗಿಲಾಗಿ ಗಾಯಾಳುಗಳಾಗಿ ಚಿಕಿತ್ಸೆ ಪಡೆದರು.

ರಾಜಕೀಯ ಪಕ್ಷ ಕಟ್ಟಿದ ಮುಂಬೈ ದಾಳಿ ರೂವಾರಿ ಹಫೀಜ್ ಸಯೀದ್

ಮುಂಬಯಿ ನಾಗರೀಕರು, ವಾಣಿಜ್ಯವಲಯದ ಪ್ರಮುಖರು ಒಳಗೊಂಡು ಮುಂಬಯಿ ವಾಸಿಗಳೆಲ್ಲರೂ ತಾವ್ರ ಆತಂಕಕ್ಕೆ ಈಡಾಗಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಭದ್ರತಾ ಸುರಕ್ಷತೆಯ ಬಗ್ಗೆ ಚರ್ಚೆಗಳು ನಡೆದವು. ಈ ಮಧ್ಯೆ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ತಾನೇ ಹೊತ್ತುಕೊಂಡಿತು.

ದಕ್ಷಿಣ ಮುಂಬಯಿನ ಎಂಟು ವಿವಿಧ ಸ್ಥಳಗಳಲ್ಲಿ ದಾಳಿಗಳು ನಡೆದವು. ಮುಂಬಯಿ ಹೃದಯ ಭಾಗವಾದ ಛತ್ರಪತಿ ಶಿವಾಜಿ ಟರ್ಮಿನಸ್, ಗಣ್ಯರು ಹಾಗು ವಿದೇಶಿಗಳು ಹೆಚ್ಚಾಗಿ ಇರುವಂತಹ ಒಬೆರಾಯ್ ಟ್ರೈಡೆಂಟ್, ವಿಶ್ವ ವಿಖ್ಯಾತ ತಾಜ್ ಹೋಟೆಲ್, ಲಿಯೋಪೋಲ್ಡ್ ಕೆಫೆ, ಕಾಮಾ ಹಾಸ್ಪಿಟಲ್, ನಾರಿಮನ್ ಹೌಸ್, ಮೆಟ್ರೋ ಸಿನೆಮಾ, ಸೆಂಟ್ ಕ್ಸೇವಿಯರ್ ಕಾಲೇಜು ದಾಳಿಗೆ ಸಾಕ್ಷಿಯಾದ ಸ್ಥಳಗಳು. ಮೇಜ್ ಗಾವ್ ನಲ್ಲಿ ಒಂದು ಬಾಂಬನ್ನು ಸ್ಪೋಟಿಸಲಾಗಿತ್ತು.

English summary
Mumbai Attacks Mastermind Hafiz Saeed arrested, He has been sent to judicial custody and will face trial, said reports from Pakistan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more