ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಡ್ಕಾ ಕಟ್ಟಡ ಅಗ್ನಿ ಅವಘಡ: ಸ್ಥಳಕ್ಕೆ ದೆಹಲಿ ಸಿಎಂ ಭೇಟಿ, ತನಿಖೆಗೆ ಆದೇಶ

|
Google Oneindia Kannada News

ನವದೆಹಲಿ ಮೇ 14: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 27 ಜನರನ್ನು ಬಲಿತೆಗೆದುಕೊಂಡ ಮುಂಡ್ಕಾ ಕಟ್ಟಡ ಅಗ್ನಿ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಶನಿವಾರ ಘೋಷಿಸಿದ್ದಾರೆ. ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬೆಂಕಿ ಹೊತ್ತಿಕೊಂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಪಿಲ್ಲರ್ ಸಂಖ್ಯೆ 544 ರ ಸಮೀಪವಿರುವ ಕಟ್ಟಡದಲ್ಲಿ ಶುಕ್ರವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡಿದ್ದು 27 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಕನಿಷ್ಠ 30 ಮಂದಿ ಗಾಯಗೊಂಡಿದ್ದಾರೆ. ಘಟನೆಯ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ: 20 ಜನ ಸಜೀವ ದಹನದೆಹಲಿಯಲ್ಲಿ ಭಾರೀ ಅಗ್ನಿ ಅವಘಡ: 20 ಜನ ಸಜೀವ ದಹನ

ಕಟ್ಟಡಕ್ಕೆ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಮೃತದೇಹಗಳನ್ನು ಗುರುತಿಸುವುದು ಕಷ್ಟಕರವಾಗಿದೆ. ಸತ್ತವರನ್ನು ಗುರುತಿಸಲು ದೆಹಲಿ ಸರ್ಕಾರ ಸಹಾಯಕರನ್ನು ನಿಯೋಜಿಸಿದೆ ಎಂದು ಕೇಜ್ರಿವಾಲ್ ಹೇಳಿದರು.

Mundka building fire incident: Delhi CM visits spot

ಶುಕ್ರವಾರ ರಾತ್ರಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಸ್ಥಳಕ್ಕೆ ಭೇಟಿ ನೀಡಿದ್ದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಶನಿವಾರದಂದು ಜೀವಹಾನಿಯಿಂದ ನೋವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸುವುದನ್ನು ತಡೆಯಲು ತಕ್ಷಣದ ಕ್ರಮಗಳಿಗೆ ಕರೆ ನೀಡಿದ್ದಾರೆ. ಅಲ್ಲದೇ ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

Mundka building fire incident: Delhi CM visits spot

"ದೆಹಲಿಯ ಮುಂಡ್ಕಾದಲ್ಲಿ ಸಂಭವಿಸಿದ ಬೆಂಕಿಯ ದುರಂತದಿಂದ ತೀವ್ರ ನೋವಾಗಿದೆ. ರಕ್ಷಣಾ ಪ್ರಯತ್ನಗಳ ಹೊರತಾಗಿಯೂ ಅನೇಕ ಅಮೂಲ್ಯ ಜೀವಗಳನ್ನು ಕಳೆದುಕೊಳ್ಳಲಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಜೊತೆಗೆ ಅಂತಹ ಘಟನೆಗಳು ಮರುಕಳಿಸದಂತೆ ಖಚಿತಪಡಿಸಿಕೊಳ್ಳಲು ಸಂಬಂಧಿಸಿದ ಎಲ್ಲರೂ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ಬೈಜಾಲ್ ಟ್ವೀಟ್ ಮಾಡಿದ್ದಾರೆ.

English summary
Delhi Chief Minister Arvind Kejriwal on Saturday announced a compensation of Rs 10 lakh each to the kin of the deceased and Rs 50,000 for those injured in the Mundka building fire incident that claimed 27 lives.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X