ಮುಸ್ಲಿಮರೇ, ಭಾರತ ಬಿಟ್ಟು ತೊಲಗಿ: ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ
ನವದೆಹಲಿ, ಫೆಬ್ರವರಿ 07: 'ಭಾರತದಲ್ಲಿ ಮತದ ಹೆಸರಿನಲ್ಲಿ ದೇಶವನ್ನು ಒಡೆಯುತ್ತಿರುವವರು ಮುಸ್ಲಿಮರು, ಆದ್ದರಿಂದ ಮುಸ್ಲಿಮರೇ, ಭಾರತ ಬಿಟ್ಟು ತೊಲಗಿ' ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಬಿಜೆಪಿ ನಾಯಕ ವಿನಯ್ ಕಟಿಯಾರ್.
ಮತದ ಹೆಸರಿನಲ್ಲಿ ದೇಶವನ್ನು ಒಡೆಯುತ್ತಿರುವ ಅವರು ಪಾಕಿಸ್ತಾನಕ್ಕೋ, ಬಾಂಗ್ಲಾದೇಶಕ್ಕೋ ಹೋಗಲಿ ಎಂದು ಹೊಸ ವಿವಾದಕ್ಕೆ ನಾಂದಿಹಾಡಿದ್ದಾರೆ.
'ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿಗಳು ಎನ್ನುವುದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿ' ಎಂದಿದ್ದದ ಎಐಎಂಐಎಂ(All India Majlis-e-Ittehadul Muslimeen) ಮುಖಂಡ ಅಸಾದುದ್ದಿನ್ ಓವೈಸಿ ಅವರ ಮಾತಿಗೆ ಪ್ರತಿಕ್ರಿಯಿಸಿದ ವಿನಯ್ ಕಟಿಯಾರ್ ಈ ರೀತಿ ಹೇಳಿಕೆ ನೀಡಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣಕ್ಕೆ ಕೃತಜ್ಞತೆ ಅರ್ಪಿಸಿ ನಡೆದ ಕಾರ್ಯಕ್ರಮದ ನಂತರ ಚರ್ಚೆಯಲ್ಲಿ ಭಾಗವಹಿಸಿದ ಓವೈಸಿ, ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿಗಳು ಎಂದು ಕರೆಯುವವರಿಗೆ ಕನಿಷ್ಠ ಮೂರು ವರ್ಷ ಜೈಲುಶಿಕ್ಷೆ ವಿಧಿಸುವಂಥ ಕಾನೂನನ್ನು ಜಾರಿಗೆ ತರಬೇಕು ಎಂದಿದ್ದರು..












Click it and Unblock the Notifications