ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈರಸ್ ಸ್ವರೂಪ ಬದಲಾದರೆ 3ನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ: ಕೇಂದ್ರ ಕಳವಳ

|
Google Oneindia Kannada News

ನವದೆಹಲಿ, ಜೂನ್ 1: ಕೊರೊನಾ ವೈರಸ್‌ನ ಎರಡನೇ ಅಲೆಯ ತೀವ್ರತೆ ನಿಧಾನಕ್ಕೆ ಕಡಿಮೆಯಾಗುತ್ತಿರುವಂತೆ ಮೂರನೇ ಅಲೆಯ ಆತಂಕ ಈಗ ಕಾಡುತ್ತಿದೆ. ಮೂರನೇ ಅಲೆಯಲ್ಲಿ ಈ ವೈರಸ್ ತನ್ನ ಸ್ವರೂಪವನ್ನು ಬದಲಿಸಿಕೊಂಡರೆ ಅದು ಮಕ್ಕಳ ಮೇಲೆ ಗಂಭೀರ ಪರಿಣಾಮಗಳನ್ನು ಬೀರಬಹುದು ಎಂಬ ಆತಂಕವಿದೆ. ಈ ಮಧ್ಯೆ ವೈರಸ್ ರೂಪಾಂತರವಾದರೆ ಒಟ್ಟು ಸಂಖ್ಯೆಯ 2-3 ಶೇಕಡಾದಷ್ಟು ಮಕ್ಕಳು ಆಸ್ಪತ್ರೆಗೆ ದಾಖಲಾಗುವ ಸನ್ನಿವೇಶ ಉಂಟಾಗಬಹುದು ಎಂದು ಕೇಂದ್ರ ಹೇಳಿದೆ.

ನೀತಿ ಆಯೋಗದ ಸದಸ್ಯೆ ಕೋವಿಡ್ ಟಾಸ್ಕ್ ಫೋರ್ಸ್‌ನ ಮುಖ್ಯಸ್ಥ ಈ ಬಗ್ಗೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ್ದಾರೆ. ಈ ವಿಚಾರವಾಗಿ ಮುನ್ನೆಚ್ಚರಿಕೆಯನ್ನು ವಹಿಸಿಕೊಂಡಿದ್ದು ಶೀಘ್ರದಲ್ಲಿಯೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದಾರೆ.

ಕೊರೊನಾ ಲಸಿಕೆ ಮಿಶ್ರಣ ಕುರಿತು ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ ಕೊರೊನಾ ಲಸಿಕೆ ಮಿಶ್ರಣ ಕುರಿತು ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ

"ಕೊರೊನಾ ವೈರಸ್ ಈವರೆಗೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮವನ್ನು ಬೀರಿಲ್ಲ. ಆದರೆ ಮೂರನೇ ಅಲೆಯಲ್ಲಿ ವೈರಸ್ ತನ್ನ ಸ್ವರೂಪವನ್ನು ಮತ್ತಷ್ಟು ಬದಲಿಸಿಕೊಂಡಲ್ಲಿ ಅದರ ಪರಿಣಾಮ ಮಕ್ಕಳ ಮೇಲೆ ಉಂಟಾಗಲಿದೆ. ಈವರೆಗಿನ ಅಂಕಿಅಂಶಗಳ ಪ್ರಕಾರ ಆಸ್ಪತ್ರೆಗೆ ದಾಖಲಾದ ಮಕ್ಕಳ ಪ್ರಮಾಣ ಕಡಿಮೆ ಮಟ್ಟದಲ್ಲಿದೆ. ಆದರೆ ಮುಂದಿನ ದಿನಗಳಲ್ಲಿ ಮಕ್ಕಳಿಕೆ ತೊಂದರೆಯಾಗದಂತೆ ನೋಡಿಕೊಳ್ಳಲು ಸಿದ್ಧತೆಯನ್ನು ಆರಂಭಿಸಿದ್ದೇವೆ. ಮಕ್ಕಳಿಗಾಗಿ ಮೂಲ ಸೌಕರ್ಯವನ್ನು ಹೆಚ್ಚಿಸಲಾಗುತ್ತಿದೆ. ಮಕ್ಕಳ ಜನಸಂಖ್ಯೆಯ ಅಂಕಿಅಂಶಗಳನ್ನು ಹೊಸ ತಂತ್ರಜ್ಞಾನಗಳ ಮೂಲಕ ಪಡೆದು ಸಿದ್ಧತೆಗಳನ್ನು ಮಾಡಲಾಗುತ್ತದೆ ಎಂದು ಡಾ ಪೌಲ್ ತಿಳಿಸಿದ್ದಾರೆ.

Mutant COVID virus impact on children may increase in 3rd wave: Centre

ಇದೇ ಸಂದರ್ಭದಲ್ಲಿ ಆರೋಗ್ಯ ಸಚಿವಾಲಯದ ಸಹ ಕಾರ್ಯದರ್ಶಿ ಲವ್ ಅಗರ್ವಾಲ್ ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಪ್ರಮಾಣ ಶೇಕಡಾ 69ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ. ಎರಡನೇ ಅಲೆಯಲ್ಲಿ ಮೇ 7 ರಂದು ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣ ದಾಖಲಾಗಿತ್ತು.

ಕೋವಿಡ್ 2ನೇ ಅಲೆಗೆ ಕೆಲಸ ಕಳೆದುಕೊಂಡವರೆಷ್ಟು ಗೊತ್ತಾ? ಆಘಾತ ಹುಟ್ಟಿಸುತ್ತೆ ಅಂಕಿಅಂಶಕೋವಿಡ್ 2ನೇ ಅಲೆಗೆ ಕೆಲಸ ಕಳೆದುಕೊಂಡವರೆಷ್ಟು ಗೊತ್ತಾ? ಆಘಾತ ಹುಟ್ಟಿಸುತ್ತೆ ಅಂಕಿಅಂಶ

ಕಳೆದ ಒಂದು ವಾರಗಳಿಂದ 30 ರಾಜ್ಯಗಳಲ್ಲಿ ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. 50 ಶೇಕಡಾದಷ್ಟು ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳು ತಗ್ಗಿದೆ. ನಿತ್ಯವೂ 1.3 ಲಕ್ಷದಷ್ಟು ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಅವರು ವಿವರಿಸಿದರು.

English summary
Mutant COVID virus impact on children may increase in 3rd wave said Centre. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X