ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಣಕ್ಯ ಅಮಿತ್ ಶಾಗೆ ಕೇಂದ್ರ ಗೃಹಖಾತೆ ಜವಾಬ್ದಾರಿ

|
Google Oneindia Kannada News

ನವದೆಹಲಿ, ಮೇ 31: ಬಹುತೇಕ ನಿರೀಕ್ಷೆಯಂತೆಯೇ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಕೇಂದ್ರ ಗೃಹ ಖಾತೆ ಸಚಿವ ಸ್ಥಾನ ನೀಡಲಾಗಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಪಡೆದ ಸಂದರ್ಭದಲ್ಲಿಯೇ ಅಮಿತ್ ಶಾ ಅವರು ಗೃಹಖಾತೆ ವಹಿಸಿಕೊಳ್ಳಲಿದ್ದಾರೆ ಎಂಬ ಊಹಾಪೋಹ ಕೇಳಿಬಂದಿತ್ತು. ಅದಿಲ್ಲದಿದ್ದರೆ ಅವರು ಹಣಕಾಸು ಸಚಿವರಾಗುವ ಸಾಧ್ಯತೆಯೂ ಇದೆ ಎನ್ನಲಾಗಿತ್ತು.

ಮೋದಿ 2.0 ಸರ್ಕಾರ: ರಾಜನಾಥ್ ಗೆ ರಕ್ಷಣಾ, ಅಮಿತ್ ಗೆ ಗೃಹ, ನಿರ್ಮಲಾಗೆ ವಿತ್ತ ಮೋದಿ 2.0 ಸರ್ಕಾರ: ರಾಜನಾಥ್ ಗೆ ರಕ್ಷಣಾ, ಅಮಿತ್ ಗೆ ಗೃಹ, ನಿರ್ಮಲಾಗೆ ವಿತ್ತ

ಗುರುವಾರ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಅಮಿತ್ ಶಾ ಮೂರನೆಯವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಹಿಂದಿನ ಗೃಹ ಸಚಿವ ರಾಜನಾಥ್ ಸಿಂಗ್ ಎರಡನೆಯವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹೀಗಾಗಿ ರಾಜನಾಥ್ ಸಿಂಗ್ ಅವರೇ ಗೃಹ ಸಚಿವರಾಗಿ ಮುಂದುವರಿಯಬಹುದು ಎಂದು ಹೇಳಲಾಗಿತ್ತು. ಈಗ ಅಂತೆಕಂತೆಗಳಿಗೆ ತೆರೆಬಿದ್ದಿದ್ದು, ಬಿಜೆಪಿಯ ಚಾಣಾಕ್ಯ ಅಮಿತ್ ಶಾ ಅತ್ಯಂತ ಮಹತ್ವದ ಖಾತೆಗಳಲ್ಲಿ ಒಂದಾದ ಗೃಹಖಾತೆಯನ್ನು ವಹಿಸಿಕೊಂಡಿದ್ದಾರೆ.

narendra modi cabinet Amit shah new union home minister

ವಾಜಪೇಯಿ ಅವರ ಸರ್ಕಾರ ಅಡಳಿತ ನಡೆಸಿದ್ದ ಅವಧಿಯಲ್ಲಿ ಎಲ್‌ಕೆ ಅಡ್ವಾಣಿ ಅವರು ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿರುವ ಅಮಿತ್ ಶಾ ಅವರು ಅತ್ಯಂತ ಪ್ರಮುಖ ಖಾತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಮೋದಿ ಸಂಪುಟದ ಖಾತೆ ಹಂಚಿಕೆ : ಕರ್ನಾಟಕದ ಸಚಿವರಿಗೆ ಯಾವ ಖಾತೆ? ಮೋದಿ ಸಂಪುಟದ ಖಾತೆ ಹಂಚಿಕೆ : ಕರ್ನಾಟಕದ ಸಚಿವರಿಗೆ ಯಾವ ಖಾತೆ?

ದೇಶದ ಆಂತರಿಕ ಭದ್ರತೆ ಮತ್ತು ಆಂತರಿಕ ನೀತಿಗಳನ್ನು ನಿರ್ವಹಿಸುವ ಹೊಣೆಗಾರಿಕೆಯನ್ನು ಗೃಹ ಸಚಿವಾಲಯ ನಿಭಾಯಿಸುತ್ತದೆ. ಕೇಂದ್ರ ವಿಪತ್ತು ನಿರ್ವಹಣೆ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಗಡಿ ನಿರ್ವಹಣೆ, ಕೇಂದ್ರ-ರಾಜ್ಯ ಸಂಬಂಧ, ಕೇಂದ್ರಾಡಳಿತ ಪ್ರದೇಶಗಳ ನಿರ್ವಹಣೆ, ಮುಂತಾದವುಗಳು ನೂತನ ಗೃಹ ಸಚಿವ ಅಮಿತ್ ಶಾ ಅವರ ಅಧೀನದಲ್ಲಿ ಬರಲಿವೆ.

ಅವರ ಕೆಳಗೆ ರಾಜ್ಯ ಸಚಿವರು, ಗೃಹ ಕಾರ್ಯದರ್ಶಿ ಹಾಗೂ ಇತರೆ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.

English summary
BJP President Amit shah appointed as new Home Minister in Narendra Modi's second term cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X