ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ನೇತೃತ್ವದ ಸರಕಾರ ಎಲ್ಲ ಮಿತಿಯನ್ನೂ ಮೀರಿದೆ: ಮನ್ ಮೋಹನ್ ಸಿಂಗ್

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 10 : "ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಎಲ್ಲ ಮಿತಿಗಳನ್ನು ಮೀರಿದೆ" ಎಂದು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಸೋಮವಾರ ಹೇಳಿದರು. ವಿಪಕ್ಷಗಳು ನೀಡಿರುವ ಭಾರತ್ ಬಂದ್ ನಲ್ಲಿ ಸೋಮವಾರ ಅವರು ಮಾತನಾಡಿದರು.

"ನರೇಂದ್ರ ಮೋದಿ ಸರಕಾರ ಸಾಕಷ್ಟು ಮಾಡಿದೆ, ಅವೆಲ್ಲ ದೇಶದ ಹಿತಾಸಕ್ತಿಯಿಂದ ಅಲ್ಲ ಮತ್ತು ಇದೀಗ ಎಲ್ಲ ಮಿತಿ ಮೀರಿದೆ" ಎಂದು ಹೇಳಿದ ಅವರು, ರೈತರನ್ನು ಬೆಂಬಲಿಸಲು ಈ ಸರಕಾರ ವಿಫಲವಾಗಿದೆ ಎಂಬ ಆರೋಪ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ರಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ರ

ದೇಶದ ಒಗ್ಗಟ್ಟು ಹಾಗೂ ಶಾಂತಿ ಕಾಪಾಡುವ ಉದ್ದೇಶದಿಂದ ನಾವೆಲ್ಲ ಒಟ್ಟಾಗಿದ್ದೇವೆ ಎಂದು ಅವರು ಹೇಳಿದರು. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವ ಮುನ್ನ ಎರಡು ಅವಧಿಗೆ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ ಮನ್ ಮೋಹನ್ ಸಿಂಗ್ ಪ್ರಧಾನಿಯಾಗಿದ್ದರು.

Narendra Modi led government crossed all limits: MM Singh

ಕಾಂಗ್ರೆಸ್ ನೇತೃತ್ವದಲ್ಲಿ ಕನಿಷ್ಠ ಇಪ್ಪತ್ತೊಂದು ಪಕ್ಷಗಳು ಭಾರತ್ ಬಂದ್ ನಲ್ಲಿ ಭಾಗವಹಿಸಿವೆ. ಹೆಚ್ಚುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ ಹಾಗೂ ಡಾಲರ್ ವಿರುದ್ಧ ಕುಸಿಯುತ್ತಿರುವ ರುಪಾಯಿ ಮೌಲ್ಯದ ವಿರುದ್ಧ ಬಂದ್ ಗೆ ಕರೆ ನೀಡಲಾಗಿದೆ.

ಗ್ರಾಮೀಣ ಆರ್ಥಿಕತೆ ಕುಸಿತಕ್ಕೆ ಮೋದಿ ಕಾರಣ: ಮನಮೋಹನ್ ಸಿಂಗ್ ಟೀಕೆಗ್ರಾಮೀಣ ಆರ್ಥಿಕತೆ ಕುಸಿತಕ್ಕೆ ಮೋದಿ ಕಾರಣ: ಮನಮೋಹನ್ ಸಿಂಗ್ ಟೀಕೆ

ಇಂಥ ಸನ್ನಿವೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ವಿರೋಧ ಪಕ್ಷಗಳು ಭಿನ್ನಾಭಿಪ್ರಾಯಗಳನ್ನು ತೊರೆದು ಒಟ್ಟಾಗಬೇಕು ಎಂದು ಮನ್ ಮೋಹನ್ ಸಿಂಗ್ ಕರೆ ನೀಡಿದ್ದಾರೆ. ಅಪನಗದೀಕರಣ, ಉದ್ಯೋಗ ಸೃಷ್ಟಿ ಆಗದಿರುವ ಬಗ್ಗೆ ಕಳೆದ ವಾರ ಕೂಡ ಅವರು ಪ್ರಶ್ನೆ ಮಾಡಿದ್ದರು.

English summary
"The Narendra Modi government has done a lot which is not in the interest of the nation and has now crossed all limits," said former PM Manmohan Singh after participating in Bharat Bandh on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X