ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಐ ಹೊಸ ನಿರ್ದೇಶಕರ ಆಯ್ಕೆ: ಜನವರಿ 24ಕ್ಕೆ ಪ್ರಧಾನಿ ನೇತೃತ್ವದ ಸಭೆ

|
Google Oneindia Kannada News

ನವದೆಹಲಿ, ಜನವರಿ 16: ಸಿಬಿಐ ನೂತನ ನಿರ್ದೇಶಕರನ್ನು ಆಯ್ಕೆ ಮಾಡಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಜನವರಿ 24 ರಂದು ಸಭೆ ನಡೆಸಲಿದೆ.

ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ಪ್ರಧಾನಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು ವರ್ಗಾವಣೆ ಮಾಡಿದ ನಂತರ ಎಂ.ನಾಗೇಶ್ವರ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿಸಲಾಗಿತ್ತು.

ಸಿಬಿಐ ಮಧ್ಯಂತರ ನಿರ್ದೇಶಕರಿಗೆ ಕಂಟಕ: ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆಸಿಬಿಐ ಮಧ್ಯಂತರ ನಿರ್ದೇಶಕರಿಗೆ ಕಂಟಕ: ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

ಪ್ರಧಾನಿ ನರೇಂದ್ರ ಮೋದಿ, ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗಾಯ್, ಕಾಂಗ್ರೆಸ್ ಹಿರಿಯ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಉನ್ನತ ಮಟ್ಟದ ಸಮಿತಿಯು ಜನವರಿ 24 ರಂದು ಸಭೆ ಸೇರಿ ನೂತನ ನಿರ್ದೇಶಕರನ್ನು ಆಯ್ಕೆ ಮಾಡಲಿದೆ.

Narendra Modi led panel to meet on January 24 to select new CBI director

ತಮ್ಮನ್ನು ಕೇಂದ್ರ ಸರ್ಕಾರವು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದ್ದ ನಿರ್ಣಯವನ್ನು ಅಲೋಕ್ ವರ್ಮಾ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು, ಆ ನಂತರ ಅಲೋಕ್ ವರ್ಮಾ ಅವರು ಸಿಬಿಐ ನಿರ್ದೇಶಕ ಸ್ಥಾನದಲ್ಲೇ ಮುಂದುವರೆಯುವಂತೆ ಆಅಲೋಕ್ ದೇಶ ನೀಡಿತ್ತು.

ಸಮಿತಿಯಲ್ಲಿ ಇರಲು ಇಷ್ಟವಿಲ್ಲ ಎಂದು ಮೋದಿ, ಖರ್ಗೆಗೆ ತಿಳಿಸಿದ್ದ ನ್ಯಾಯಮೂರ್ತಿ ಸಮಿತಿಯಲ್ಲಿ ಇರಲು ಇಷ್ಟವಿಲ್ಲ ಎಂದು ಮೋದಿ, ಖರ್ಗೆಗೆ ತಿಳಿಸಿದ್ದ ನ್ಯಾಯಮೂರ್ತಿ

ಆದರೆ ಮೋದಿ, ಖರ್ಗೆ ಮತ್ತು ಸುಪ್ರಿಂ ನ್ಯಾಯಮೂರ್ತಿ ಸಿಖ್ರಿ ಅವರಿದ್ದ ಉನ್ನತ ಮಟ್ಟದ ಸಮಿತಿಯು ಅಲೋಕ್ ವರ್ಮಾ ಅವರನ್ನು ವರ್ಗಾವಣೆ ಮಾಡಿತ್ತು. ನಂತರ ಅಲೋಕ್ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮಲ್ಯ, ನೀರವ್ ಮೋದಿ ಪರಾರಿಗೆ ಅಲೋಕ್ ವರ್ಮಾ ನೆರವು? ಮಲ್ಯ, ನೀರವ್ ಮೋದಿ ಪರಾರಿಗೆ ಅಲೋಕ್ ವರ್ಮಾ ನೆರವು?

ಕೇಂದ್ರದ ತನಿಖಾ ಸಂಸ್ಥೆ ಸಿಬಿಐ ನಿರ್ದೇಶಕರ ವಿಷಯದ ಕಾರಣಕ್ಕೆ ದೇಶದಾದ್ಯಂತ ಬಹು ಚರ್ಚೆಯಲ್ಲಿತ್ತು. ಹಾಗಾಗಿ ಈಗ ಜನವರಿ 24 ರಂದು ನಡೆಯಲಿರುವ ಸಭೆಯ ಕಡೆ ಎಲ್ಲರ ಕಣ್ಣು ಹರಿದಿದೆ. ಸಿಬಿಐನ ಹೊಸ ನಿರ್ದೇಶಕರ ಸ್ಥಾನಕ್ಕೆ ಯಾರು ಆಯ್ಕೆ ಆಗಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.

English summary
PM Narendra Modi led special panel having meeting on January 24 to select new CBI director. Mallikarjun Kharge and Supreme chief justice Ranjan Gogai are other panel members.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X