ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2024ರ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಮೋದಿ ವಿಶ್ವಾಸ

|
Google Oneindia Kannada News

ನವದೆಹಲಿ, ಜೂನ್ 15: ಭಾರತದ ಆರ್ಥಿಕತೆಯನ್ನು 2024ರ ವೇಳೆಗೆ ಐದು ಟ್ರಿಲಿಯನ್ ಡಾಲರ್‌ಗೆ ತಲುಪುವ ಗುರಿ ಹೊಂದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರಾಷ್ಟ್ರಪತಿ ಭವನದಲ್ಲಿ ಶನಿವಾರ ಎರಡನೆಯ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ನೀತಿ ಆಯೋಗದ ಆಡಳಿತ ಸಮಿತಿಯ ಮೊದಲ ಹಾಗೂ ಒಟ್ಟಾರೆಯಾಗಿ ಐದನೇ ಸಭೆಯಲ್ಲಿ ಪ್ರಧಾನಿ ಮೋದಿ ಆರಂಭದ ಮಾತುಗಳನ್ನಾಡಿದರು.

ನೀತಿ ಆಯೋಗದ ಸಭೆಗೆ ಬರೊಲ್ಲ: ಮೋದಿಗೆ ದೀದಿ ಪತ್ರನೀತಿ ಆಯೋಗದ ಸಭೆಗೆ ಬರೊಲ್ಲ: ಮೋದಿಗೆ ದೀದಿ ಪತ್ರ

'ಸಬ್‌ ಕಾ ಸಾಥ್, ಸಬ್‌ ಕಾ ವಿಕಾಸ್, ಸಬ್‌ಕಾ ವಿಶ್ವಾಸ್' ಮಂತ್ರವನ್ನು ಈಡೇರಿಸುವುದರಲ್ಲಿ ನೀತಿ ಆಯೋಗ ಪ್ರಮುಖ ಪಾತ್ರ ವಹಿಸಲಿದೆ ಎಂದು ಮೋದಿ ಹೇಳಿದರು.

Narendra Modi making india $5 trillion economy by 2024

2024ರ ವೇಳೆಗೆ ಭಾರತದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್‌ಗೆ ಕೊಂಡೊಯ್ಯುವ ಗುರಿ ದೊಡ್ಡ ಸವಾಲಿನದ್ದು, ಆದರೆ ಅಸಾಧ್ಯವೇನಲ್ಲ. ರಾಜ್ಯಗಳ ದೃಢ ಪ್ರಯತ್ನಗಳಿಂದಾಗಿ ಅದನ್ನು ಸಾಧಿಸುವುದು ಸಾಧ್ಯ ಎಂದು ಹೇಳಿದರು.

ಪ್ರತಿ ರಾಜ್ಯಗಳೂ ತಮ್ಮ ಮೂಲ ಸ್ಪರ್ಧಿಗಳನ್ನು ಗುರುತಿಸಬೇಕು. ಬಳಿಕ ಜಿಲ್ಲಾ ಮಟ್ಟದಿಂದ ಹಿಡಿದು ಜಿಡಿಪಿ ಹೆಚ್ಚಿಸುವ ಗುರಿಯತ್ತ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಮೋದಿ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ ಮೋದಿ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ

ಇತ್ತೀಚಿನ ಲೋಕಸಭೆ ಚುನಾವಣೆಯನ್ನು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವದ ಕಸರತ್ತು ಎಂದು ಬಣ್ಣಿಸಿದ ಅವರು, ಇದು ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೆಲಸ ಮಾಡುವ ಕಾಲ. ಬಡತನ, ನಿರುದ್ಯೋಗ, ಬರ, ಪ್ರವಾಹ, ಜನಸಂಖ್ಯಾಸ್ಫೋಟ, ಮಾಲಿನ್ಯ, ಭ್ರಷ್ಟಾಚಾರ ಮತ್ತು ಹಿಂಸಾಚಾರದ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕಿದೆ ಎಂದು ಹೇಳಿದರು.

ಪ್ರದರ್ಶನ, ಪಾರದರ್ಶಕತೆ ಮತ್ತು ಪೂರೈಕೆಯಿಂದ ಗುಣಗಳನ್ನು ಪಡೆದ ಆಡಳಿತ ವ್ಯವಸ್ಥೆಯತ್ತ ನಾವು ಸಾಗುತ್ತಿದ್ದೇವೆ. ಯೋಜನೆಗಳ ತಳಮಟ್ಟದ ಜಾರಿ ಮಹತ್ವದ್ದಾಗಿದೆ ಎಂದರು.

English summary
Prime Minister Narendra Modi said that, India should reach the goal of $5 Trillion economy by 2014.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X