ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಜಪೇಯಿ ಕುಶಲ ವಿಚಾರಿಸಿದ ಮೋದಿ ಮತ್ತು ರಾಹುಲ್ ಗಾಂಧಿ

|
Google Oneindia Kannada News

ನವ ದೆಹಲಿ, ಜೂನ್ 11: ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಆದರು.

ಹಠಾತ್ತನೆ ವಾಜಪೇಯಿ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ವಾಜಪೇಯಿ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆ ಆಸ್ಪತ್ರೆಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಾಜಪೇಯಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ವಾಜಪೇಯಿ ಆರೋಗ್ಯದಲ್ಲಿ ಏರುಪೇರು: ಏಮ್ಸ್‌ಗೆ ದಾಖಲುವಾಜಪೇಯಿ ಆರೋಗ್ಯದಲ್ಲಿ ಏರುಪೇರು: ಏಮ್ಸ್‌ಗೆ ದಾಖಲು

ಆ ನಂತರ ಆಸ್ಪತ್ರೆಗೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು, ವಾಜಪೇಯಿ ಅವರನ್ನು ಭೇಟಿಯಾಗಿ ಕುಶಲ ವಿಚಾರಿಸಿದರು. ವಾಜಪೇಯಿ ಅವರ ಪರಮಾಪ್ತರಾಗಿದ್ದ ಎಲ್‌.ಕೆ.ಅಡ್ವಾಣಿ ಅವರು ಹಾಗೂ ಗೃಹ ಮಂತ್ರಿ ರಾಜನಾಥ ಸಿಂಗ್ ಅವರು ಕೂಡಾ ಆಸ್ಪತ್ರೆಗೆ ಭೇಟಿ ನೀಡಿ ಕುಶಲ ವಿಚಾರಿಸಿದ್ದಾರೆ.

Narendra Modi and Rahul Gandhi visit former PM Atal Bihari Vajpayee

ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಈಗ 93 ವರ್ಷ ವಯಸ್ಸಾಗಿದ್ದು, ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದು ಹಲವು ವರ್ಷಗಳೇ ಆಗಿವೆ.

ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಪರಿಚಯಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಪರಿಚಯ

2009ರಲ್ಲಿ ಅವರು ಪಾರ್ಶ್ವವಾಯುವಿಗೆ ತುತ್ತಾದ ಬಳಿಕ ಮಾತನಾಡುವುದು ಸಹ ಅಸಾಧ್ಯವಾಗಿದೆ. ಸದಾ ಗಾಲಿಕುರ್ಚಿಯಲ್ಲಿಯೇ ಸಹಾಯಕರ ನೆರವಿನಿಂದ ಓಡಾಡುವ ಸ್ಥಿತಿಗೆ ತಲುಪಿರುವ ವಾಜಪೇಯಿ ಅವರು, ತಮ್ಮ ಆತ್ಮೀಯರನ್ನು ಸಹ ಗುರುತಿಸುವಲ್ಲಿ ವಿಫಲರಾಗುತ್ತಿದ್ದಾರೆ.

English summary
Prime minister Narendra Modi and AICC president Rahul Gandhi visits former PM Atal Bihari Vajapayee. Vajapayee admitted to AIMS hospital in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X