68ನೇ ಕ್ಯಾಂಡಲ್ ಹಚ್ಚಿದ ಸೋನಿಯಾಗೆ ಮೋದಿ ಸರ್ಪ್ರೈಸ್ ವಿಷ್
ನವದೆಹಲಿ, ಡಿ. 9 : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು ಜನ್ಮ ದಿನದ ಸಂಭ್ರಮ. 68ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ.
ಮಂಗಳವಾರ ತಮ್ಮ 68ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ. ಜಮ್ಮ ಮತ್ತು ಕಾಶ್ಮೀರದಲ್ಲಿನ ಉಗ್ರರ ದಾಳಿ ಮತ್ತು ಛತ್ತೀಸ್‌ಗಢ್‌ನಲ್ಲಿ ನಡೆದ ನಕ್ಸಲರ ದಾಳಿ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಟ್ವೀಟರ್ ಮೂಲಕ ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ, ಸರ್ಪ್ರೈಸ್ ನೀಡಿದ್ದಾರೆ. 'ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು, ಅವರ ಆರೋಗ್ಯ ಚೆನ್ನಾಗಿರಲಿ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Best wishes to Congress President Smt. Sonia Gandhi on her birthday. May Almighty bless her with a long & healthy life.
— Narendra Modi (@narendramodi) December 9, 2014 











Click it and Unblock the Notifications