ಮೋದಿ ಸಂಪುಟ 2.0 LIVE : 58 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ, ಮೇ 30 : ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಮಂತ್ರಿಯಾಗಿ ಇಂದು(ಮೇ 30) ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಬಾರಿ 8 ಸಾವಿರಕ್ಕೂ ಹೆಚ್ಚು ಆಹ್ವಾನಿತ ಅತಿಥಿಗಳು ಭಾಗವಹಿಸಿದ್ದಾರೆ. ಹಲವು ಮಂದಿ ಹಿರಿಯ ಮತ್ತು ಹೊಸ ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೊದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣ ವಚನ ಭೋಧಿಸಿದರು.

'ನವ ಭಾರತ' ನಿರ್ಮಾಣಕ್ಕೆ ಸಿದ್ಧವಾಗಿರುವ ಮೋದಿ ಅವರು ತಮ್ಮ ಹೊಸ ಸಚಿವ ಸಂಪುಟದಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡುವ ಸುಳಿವು ನೀಡಿದ್ದಾರೆ. ಜೊತೆಗೆ ನಿತೀಶ್ ಕುಮಾರ್ ಅವರ ಜೆಡಿಯು, ತಮಿಳುನಾಡಿನ ಎಐಎಡಿಎಂಕೆ, ಶಿವಸೇನೆ ಸದಸ್ಯರಿಗೆ ಸಚಿವ ಸ್ಥಾನ ಮೀಸಲಾಗಿರುತ್ತದೆ.
ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
ರಾಜ್ಯದ ಶೋಭಾ ಕರಂದ್ಲಾಜೆ, ಬಿ.ವೈ.ರಾಘವೇಂದ್ರ, ಅನಂತ್‌ಕುಮಾರ್ ಹೆಗಡೆ, ಶ್ರೀನಿವಾಸ ಪ್ರಸಾದ್, ರಮೇಶ್ ಜಿಗಜಿಣಗಿ, ಬಸನಗೌಡ ಪಾಟೀಲ್ ಯಾತ್ನಾಳ್, ಪ್ರತಾಪ್ ಸಿಂಹ ಇವರಿಗೆಲ್ಲಾ ಮೊದಲ ಹಂತದಲ್ಲಿ ನಿರಾಸೆಯಾಗಿದೆ. ಮುಂದಿನ ಹಂತದಲ್ಲಿ ಯಾರಿಗಾದರೂ ಅವಕಾಶ ಸಿಗುತ್ತದೆಯೋ ನೋಡಬೇಕಿದೆ.
58 ಮಂದಿಯಲ್ಲಿ 25 ಮಂದಿ ಕ್ಯಾಬಿನೆಟ್ ದರ್ಜೆ ಸ್ಥಾನ, 24 ಮಂದಿಗೆ ರಾಜ್ಯ ಖಾತೆ ಹಾಗೂ ಉಳಿದವರಿಗೆ ಸ್ವತಂತ್ರ್ಯ ಖಾತೆ ನೀಡಲಾಗುತ್ತದೆ.
ಪ್ರಮಾಣ ವಚನ ಕಾರ್ಯಕ್ರಮವು ರಾಷ್ಟ್ರಪತಿಗಳ ಆದೇಶದಂತೆ ಮುಗಿದಿದೆ. ಒಟ್ಟು 58 ಮಂದಿ ಮೋದಿ ಅವರ ಸಂಪುಟ ಸೇರಿದ್ದಾರೆ. ಇದರಲ್ಲಿ ಐದು ಮಂದಿ ಮಹಿಳೆಯರಿದ್ದಾರೆ.
ದೇವಶ್ರೀ ಚೌಧರಿ ಅವರು 58ನೇವರಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಸಂಪುಟ ಸೇರಿದ ಐದನೇ ಮಹಿಳೆಯಾಗಿದ್ದಾರೆ. ಇವರು ಪಶ್ಚಿಮ ಬಂಗಾಳದವರಾಗಿದ್ದಾರೆ. ಇವರು ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
ಕೈಲಾಶ್ ಚೌಧರಿ ಅವರು 57 ನೇ ಸಚಿವರಾಗಿ ಮೋದಿ ಸಂಪುಟ ಸೇರಿದರು. ಇವರು ಹಿಂದೂ ವಿಚಾರಗಳಿಗೆ ಪ್ರಸಿದ್ಧರು.
ಪ್ರತಾಪ್ ಚಂದ್ರ ಸಾರಂಗಿ ಅವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ತಮ್ಮ ಸರಳ ಜೀವನಕ್ಕೆ ಖ್ಯಾತರು. ಇವರು ಗುಡಿಸಿಲಿನಲ್ಲಿ ವಾಸಿಸುತ್ತಿರುವವರು, ಇವರ ಬಳಿ ಇರುವುದು ಕೇವಲ ಒಂದು ಸೈಕಲ್ ಅಷ್ಟೆ. ಇವರು ಮೊದಲ ಬಾರಿಗೆ ಚುನಾವಣೆ ಗೆದ್ದಿದ್ದಾರೆ.
ಸೋಮ್ ಪ್ರಕಾಶ್ ಅವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು 54ನೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ರೇಣುಕಾ ಸಿಂಗ್ ಸರೂತಾ ಅವರು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಸಂಪುಟ ಸೇರಿದ ನಾಲ್ಕನೇ ಮಹಿಳೆ ಆಗಿದ್ದಾರೆ. ಇವರು ಮೊದಲ ಬಾರಿಗೆ ಸಂಪುಟ ಸೇರಿದ್ದಾರೆ. ಛತ್ತೀಸ್‌ಘಡದ ಬಿಜೆಪಿ ಮುಖಂಡರಾಗಿದ್ದಾರೆ.
ವಿ.ಮುರಳಿಧರನ್ ಅವರು ಕೇರಳದ ಬಿಜೆಪಿ ಮುಖಂಡರಾಗಿದ್ದರು. ಇವರು 52ನೇ ಯವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನಿತ್ಯಾನಂದ ರೈ ಅವರು 50 ನೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರು ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.
ಕರ್ನಾಟಕದ ಸುರೇಶ್ ಅಂಗಡಿ ಅವರು ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಇವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿದ್ದಾರೆ. ಇವರು ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.
ಯುವ ಸಂಸದ ಅನುರಾಗ್ ಸಿಂಗ್ ಠಾಕೂರ್ ಅವರು ಎರಡನೇ ಅವಧಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಸಿಸಿಐ ಅಧ್ಯಕ್ಷರೂ ಆಗಿದ್ದರು. ಆದರೆ ಇವರನ್ನು ಸುಪ್ರಿಂಕೋರ್ಟ್ ಅಮಾನತುಗೊಳಿಸಿತು.
ಧೋತ್ರೆ ಸಂಜಯ್ ಶಾಮರಾವ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಮಹಾರಾಷ್ಟ್ರದ ಕೋಲಾ ಲೋಕಸಭೆ ಕ್ಷೇತ್ರದಿಂದ ಆಯ್ಕೆ ಆಗಿದ್ದರು. ಇವರು ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.
ಶಿರೋಮಣಿ ಅಖಾಲಿ ದಳದ ಬಾಬುಲ್ ಸುಪ್ರಿಯೋ ಅವರು ಎರಡನೇ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಪಂಜಾಬ್‌ನವರಾಗಿದ್ದಾರೆ. ಇವರು ಹಿನ್ನೆಲೆ ಗಾಯಕರಾಗಿದ್ದಾರೆ.
ರಾಮ್‌ದಾಸ್ ಅಠಾವಳೆ ಅವರು ಮತ್ತೊಮ್ಮೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಸಂಸತ್‌ನಲ್ಲಿ ಮಾಡುವ ಭಾಷಣಗಳು ಆಕರ್ಷಕವಾಗಿರುತ್ತವೆ.
ಸಾದ್ವಿ ನಿರಂಜನ ಜ್ಯೋತಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಸಂಪುಟ ಸೇರಿದ ಮೂರನೇ ಮಹಿಳಾ ಸಚಿವೆ ಆಗಿದ್ದಾರೆ.
ಗಂಗಾಪುರಂ ಕಿಶನ್ ರೆಡ್ಡಿ ಅವರಿಗೆ 41 ನೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
ಮೋದಿ ಅವರ ಕಳೆದ ಬಾರಿಯ ಸಂಪುಟಕ್ಕೂ ಈ ಬಾರಿಯ ಸಂಪುಟಕ್ಕೂ ಹೆಚ್ಚು ವ್ಯತ್ಯಾಸವಿಲ್ಲವೆಂದು ತೋರುತ್ತಿದೆ.
ನಿವೃತ್ತ ಕಮಾಂಡೆರ್ ಜನರಲ್ ವಿಕೆ ಸಿಂಗ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇವರು ಕಳೆದ ಬಾರಿ ಮೋದಿ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದರು. ಕಳೆದ ಬಾರಿ ವಿದೇಶಾಂಗ ಖಾತೆ ರಾಜ್ಯ ಸಚಿವರಾಗಿದ್ದರು.
ಅರ್ಜುನ್ ರಾಂ ಮೇಘವಾಲ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇವರು 37 ನೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ರಾಜ್ಯ ಸಚಿವರಾಗಿದ್ದರು.
ಲಕ್ಷ್ಮಣ್ ಮಾಂಡವಿಯಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇವರು 34 ನೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರು ಸೈಕಲ್ ಏರಿ ಸಂಸತ್ತಿಗೆ ಬಂದು ಜನಪ್ರಿಯರಾಗಿದ್ದರು.
ಹಿರಿಯರಾದ ಹರ್ದಿಪ್ ಸಿಂಗ್ ಪುರಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ನಿವೃತ್ತ ಐಎಫ್‌ಎಸ್ ಅಧಿಕಾರಿಯಾಗಿದ್ದಾರೆ. ಇವರು ಕಳೆದ ಬಾರಿಯೂ ಮೋದಿ ಸಂಪುಟದಲ್ಲಿದ್ದರು.
ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಮಧ್ಯ ಪ್ರದೇಶದ ದೋಮಾ ಕ್ಷೇತ್ರದ ಸಂಸದರಾಗಿದ್ದರು. ಇವರು ಇಂಧನ ಖಾತೆ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಕಳೆದ ಬಾರಿ ಸಚಿವರಾಗಿದ್ದ ಕಿರಣ್ ರಿಜುಜು ಅವರು ಕೇಂದ್ರ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರೂ ಸಹ ಕಳೆದ ಬಾರಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಇವರು ಅರುಣಾಚಲ ಪ್ರದೇಶದವರಾಗಿದ್ದಾರೆ.
ಡಾ.ಜಿತೇಂದ್ರ ಸಿಂಗ್ ಅವರು ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಹಿಂದೆ ಇವರು ರಾಜ್ಯ ಖಾತೆ ಸಚಿವರಾಗಿದ್ದರು.
ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ ಅವರು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಇದೇ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ. 21ನೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಮುಕ್ತಾರ್ ಅಬ್ಬಾಸ್ ಲಖ್ವಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರು ಬಿಜೆಪಿಯ ಅಲ್ಪ ಸಂಖ್ಯಾತ ಮುಖಂಡರಾಗಿದ್ದಾರೆ. ಸಚಿವರಾಗುವ ಏಕೈಕ ಮುಸ್ಲಿಂ ಸಂಸದರು ಇವರಾಗಿದ್ದಾರೆ.
ಧರ್ಮೇಂದರ್ ಪ್ರಧಾನ್ ಅವರು 19ನೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರು ಸಹ ಕಳೆದ ಅವಧಿಯಲ್ಲಿ ಸಚಿವರಾಗಿದ್ದರು. ಇವರು ಪೆಟ್ರೋಲಿಯಂ, ಇಂಧನ ಸಚಿವರಾಗಿದ್ದರು.
ಪಿಯೂಷ್ ಘೋಯಲ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರೂ ಸಹ ಕಳೆದ ಅವಧಿಯಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
READ MORE
More From
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ













Click it and Unblock the Notifications