• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯಕ್ಕೆ ಆ ತಂಡ ಹೋಗಿದ್ದೇಕೆ?

|

ದೆಹಲಿ, ಡಿಸೆಂಬರ್.20: ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ತಂಡ ಇಂದು ಭೇಟಿ ನೀಡಿದೆ. ಇತ್ತೀಚಿಗೆ ವಿಶ್ವವಿದ್ಯಾಲಯದಲ್ಲಿ ನಡೆದ ಘರ್ಷಣೆ ಬಗ್ಗೆ ಅಧಿಕಾರಿಗಳ ತಂಡ ಮಾಹಿತಿ ಸಂಗ್ರಹಿಸಲು ಮುಂದಾಗಿದೆ.

ಕಳೆದ ಡಿಸೆಂಬರ್.15ರ ಬಾನುವಾರ ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ವೇಳೆ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು.

ಬಿಹಾರದಲ್ಲಿ ನಡೆಯೋದಿಲ್ಲ ಸಿಎಎ ಮತ್ತು ಎನ್ಆರ್ ಸಿ ಆಟ -ನಿತೀಶ್ ಕುಮಾರ್

ಜಾಮಿಯಾ ವಿವಿ ಪ್ರವೇಶಿಸಲು ಪೊಲೀಸರು ಮುಂದಾದಾಗ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರ ವಿರುದ್ಧ ಕೆರಳಿದ ಕೆಲವು ವಿದ್ಯಾರ್ಥಿಗಳು ಕಲ್ಲುತೂರಾಟ ನಡೆಸಿದರು ಎಂದು ಹೇಳಲಾಗಿತ್ತು. ಇದರಿಂದಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾನಿರತರ ಮೇಲೆ ಲಾಠಿಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದರು.

ದೆಹಲಿಯಲ್ಲಿ ನಡೆದ ಘಟನೆಗೆ ರಾಷ್ಟ್ರವ್ಯಾಪಿ ವಿರೋಧ

ದೆಹಲಿಯಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ತೆಗೆದುಕೊಂಡ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಸಂಬಂಧ ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಏಳು ಮಂದಿ ಸದಸ್ಯ ತಂಡ ಜಾಮಿಯಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದೆ.

ಇಂದು ಎಸ್ಎಸ್ ಪಿ ಮಂಜಿಲ್ ಸೈನಿ (ಐಪಿಎಸ್) ನೇತೃತ್ವದ ತಂಡ ವಿವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಹಿಂದೆ ನಡೆದ ಘಟನೆ ಕುರಿತು ತನಿಖೆ ನಡೆಸಿದ ಅಧಿಕಾರಿಗಳ ತಂಡ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಿತು.

English summary
Students Protest Against Citizenship Amendment Act In Delhi. National Human Rights Commission Team Visit Jamia University.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X