• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನಂತತಾನಂತವಾಗಿ.... ಅಗಲಿದ ನಾಯಕಗೆ ಗಣ್ಯರ ಅಶ್ರುತರ್ಪಣ

|

ನವದೆಹಲಿ, ನವೆಂಬರ್ 12: ರಾಜ್ಯ ರಾಜಕಾರಣದ ಅಗ್ರಪಂಕ್ತಿಯ ನಾಯಕರ ಸಾಲಲ್ಲಿ ಒಬ್ಬರಾಗಿದ್ದ ಅನಂತ್ ಕುಮಾರ್ ಅವರ ಹಠಾತ್ ನಿಧನ ಅವರ ಅಭಿಮಾನಿಗಳಲ್ಲಿ, ಸಹೋದ್ಯೋಗಿಗಳಲ್ಲಿ ಸಾಕಷ್ಟು ಆಘಾತವನ್ನುಂಟು ಮಾಡಿದೆ.

ಮೂರ್ನಾಲ್ಕು ತಿಂಗಳ ಹಿಂದೆ ದಿನ ದಿನವೂ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತ, ಸದಾ ಹಸನ್ಮುಖಿಯಾಗಿಯೇ ಇರುತ್ತಿದ್ದ ಅನಂತ್ ಕುಮಾರ್ ಕ್ಯಾನ್ಸರ್ ಎಂಬ ಮಹಾಮಾರಿಗೆ ತುತ್ತಾಗಿ, ಸೋಮವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಕರ್ನಾಟಕದ ಜನಪ್ರಿಯ ನಾಯಕ ಅನಂತ್ ಕುಮಾರ್ (59) ವಿಧಿವಶ

ಅನಂತ್ ಕುಮಾರ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ನೂರಾರು ಗಣ್ಯರು ಭಾವುಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ರಾಮನಾಥ್ ಕೋವಿಂದ್

ಕೇಂದ್ರ ಸಚಿವ ಮತ್ತು ಅತ್ಯುತ್ತಮ ಸಂಸದೀಯ ಪಟು ಎಚ್ ಎನ್ ಅನಂತಕುಮಾರ್ ಅವರ ನಿಧದ ಸುದ್ದಿ ಕೇಳಿ ಸಾಕಷ್ಟು ಬೇಸರವಾಯಿತು. ಇದು ನಮ್ಮ ದೇಶದ ಸಾರ್ವಜನಿಕ ಬದುಕಿನ ಅತೀ ದೊಡ್ಡ ನಷ್ಟ. ಅದರಲ್ಲೂ ಕರ್ನಾಟಕ ರಾಜ್ಯಕ್ಕೆ ಭರಿಸಲಾರದ ನಷ್ಟ. ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಅಸಂಖ್ಯ ಅಭಿಮಾನಿಗಳಿಗೆ ನನ್ನ ಸಂತಾಪಗಳು- ರಾಮನಾಥ್ ಕೋವಿಂದ್, ರಾಷ್ಟ್ರಪತಿ

ವೆಂಕಯ್ಯ ನಾಯ್ಡು

ಅನಂತ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಅವರು ಕೆಲದಿನಗಳಿಂದ ಅನಾರೋಗ್ಯಪೀಡಿತರಾಗಿದ್ದರು, ಆದರೆ ಇಷ್ಟು ಬೇಗ ನಮ್ಮನ್ನಗಲುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಅವರು ಗುಣಮುಖರಾಗಿ ಮತ್ತೆ ನಮ್ಮೊಂದಿಗೆ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸದಲ್ಲಿದ್ದೆವು. ಅವರ ಪತ್ನಿ ಮತ್ತು ಮಕ್ಕಳಿಗೆ ನನ್ನ ಸಂತಾಪಗಳು- ಎಂ ವೆಂಕಯ್ಯ ನಾಯ್ಡು, ಉಪರಾಷ್ಟ್ರಪತಿ

ಅನಂತ್ ಕುಮಾರ್ ಕುಮಾರ್ ಅಗಲಿಕೆಗೆ ಮೋದಿ ಭಾವುಕ ಶ್ರದ್ಧಾಂಜಲಿ

ಅಮಿತ್ ಶಾ

ಕೇಂದ್ರ ಸಚಿವ ಮತ್ತು ಹಿರಿಯ ನಾಯಕ ಅನಂತ್ ಕುಮಾರ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ನನಗೆ ಸಾಕಷ್ಟು ಆಘಾತವಾಯಿತು. ಅದ್ವಿತೀಯ ಎಂಬಂತೆ ಅವರು ಪಕ್ಷ ಮತ್ತು ಸಂಘಕ್ಕಾಗಿ ದುಡಿದವರು, ತಮ್ಮ ಬದುಕನ್ನು ಸಮರ್ಪಿಸಿದರು. ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟುವಲ್ಲಿ ಅವರ ಅವಿರತ ಶ್ರಮವನ್ನು ಎಂದಿಗೂ ಮರೆತುವುದಕ್ಕೆ ಸಾಧ್ಯವಿಲ್ಲ- ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ

ರಾಹುಲ್ ಗಾಂಧಿ

ಅನಂತ್ ಕುಮಾರ್ ಜೀ ಅವರ ಅಗಲಿಕೆಯ ಸುದ್ದಿ ತಿಳಿದು ತೀವ್ರ ಬೇಸರವಾಯಿತು. ಅವರ ಕುಟುಂಬಕ್ಕೆ ಮತ್ತು ಬಂಧು, ಸ್ನೇಹಿತರಿಗೆ ನನ್ನ ಸಂತಾಪಗಳು. ಅವರ ಆಟ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ- ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ

ಶ್ರದ್ಧಾಂಜಲಿ:ರಾಜ್ಯ ನಾಯಕರ ಮನದಲ್ಲಿ 'ಅನಂತ'ಭಾವ

ಯೋಗಿ ಆದಿತ್ಯನಾಥ್

ಇದು ನಿಜಕ್ಕೂ ಒಂದು ಆಘಾತಕಾರಿ ಘಟನೆ. ಇದು ಸರ್ಕಾರ ಮತ್ತು ಪಕ್ಷಕ್ಕೆ ಅತೀ ದೊಡ್ಡ ನಷ್ಟ. ಒಬ್ಬ ಅತ್ಯುತ್ತಮ ಆಡಳಿತಗಾರ ಮತ್ತು ಜನಪ್ರಿಯ ನಾಯಕರಾಗಿ ಅನಂತ್ ಕುಮಾರ್ ಜೀ ಎಂದಿಗೂ ನೆನಪಿನಲ್ಲುಳಿಯುತ್ತಾರೆ. ಉತ್ತರ ಪ್ರದೇಶ ಸರ್ಕಾರದ ಪರವಾಗಿ ನಾನು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ- ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಮುಖ್ಯಮಂತ್ರಿ

ಅನಂತ ಅಗಲುವಿಕೆಯಿಂದ ಉತ್ತಮ ರಾಜಕೀಯ ಬಡವಾಗಿದೆ: ಸುರೇಶ್ ಕುಮಾರ್

English summary
National leaders including president Ramnath Kovind, BJP national president Amit Shah, Congress president Rahul Gandhi express their condolence to union minister Ananth Kumar who passed away on Nov 12 due to cancer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X