• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚೀನಾದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯ ಎದುರಾಗಿದೆ: ರಾಹುಲ್ ಗಾಂಧಿ

|
Google Oneindia Kannada News

ನವದೆಹಲಿ, ಏಪ್ರಿಲ್ 19: ಚೀನಾದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ

ಕೇಂದ್ರ ಸರ್ಕಾರ ಚೀನಾದೊಂದಿಗೆ ನಡೆಸಿರುವ ಮಾತುಕತೆ ವ್ಯರ್ಥ ಎಂದು ರಾಹುಲ್‌ ರಾಷ್ಟ್ರೀಯ ಭದ್ರತೆಗೆ ಅಪಾಯ ಎದುರಾಗಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್, ಪೂರ್ವ ಲಡಾಖ್‌ನ ಇತರ ಪ್ರದೇಶಗಳಲ್ಲಿ ನಡೆದಿರುವ ಸಂಘರ್ಷವನ್ನು ತಡೆಯವಲ್ಲಿ ಚೀನಾದೊಂದಿಗೆ ನಡೆದ ಮಾತುಕತೆಗಳು ಏಕೆ ಫಲಿತಾಂಶ ನೀಡಿಲ್ಲ ಎಂದು ಪ್ರಶ್ನಿಸಿತ್ತು.

ಬಂಗಾಳದಲ್ಲಿ ಎಲ್ಲ ಪ್ರಚಾರ ಸಭೆಗಳನ್ನು ರದ್ದುಗೊಳಿಸಿದ ರಾಹುಲ್ ಗಾಂಧಿಬಂಗಾಳದಲ್ಲಿ ಎಲ್ಲ ಪ್ರಚಾರ ಸಭೆಗಳನ್ನು ರದ್ದುಗೊಳಿಸಿದ ರಾಹುಲ್ ಗಾಂಧಿ

ಚೀನಾ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ಕಾಂಗ್ರೆಸ್ ಹಿರಿಯ ವಕ್ತಾರ ಅಜಯ್ ಮಾಕೆನ್ ಅವರು, ಈ ವಿಷಯದ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಬೇಕೆಂದು ಒತ್ತಾಯಿಸಿದ್ದರು.

ಪೂರ್ವ ಲಡಾಖ್‌ನ ಹಾಟ್‌ ಸ್ಪ್ರಿಂಗ್ಸ್‌, ಗೊಗ್ರಾ ಮತ್ತು ಡೆಪಸಾಂಗ್‌ ಪ್ರದೇಶಗಳಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಚೀನಾ ನಿರಾಕರಿಸಿರುವ ಕುರಿತು ವರದಿಗಳು ಪ್ರಕಟವಾಗಿದ್ದನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ರಾಹುಲ ಗಾಂಧಿ
Know all about
ರಾಹುಲ ಗಾಂಧಿ

ಗೊಗ್ರಾ-ಹಾಟ್ ಸ್ಪ್ರಿಂಗ್ಸ್ ಮತ್ತು ಡೆಪ್ಸಾಂಗ್ ಭೂ ಪ್ರದೇಶಗಳಲ್ಲಿ ಚೀನಾ ಆಕ್ರಮಣ ಮುಂದುವರಿದಿದೆ. ಇದು ಡಿಬಿಒ ವಾಯುನೆಲೆ ಸೇರಿದಂತೆ ಭಾರತದ ರಕ್ಷಣಾ ಕಾರ್ಯತಂತ್ರದ ಹಿತಾಸಕ್ತಿಗೆ ಎದುರಾದ ನೇರ ಅಪಾಯವಾಗಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

English summary
Congress leader Rahul Gandhi on Monday accused the government of jeopardising India's national security, and termed its talks with China as "wasteful".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X