ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ಸಿಧು

|
Google Oneindia Kannada News

ನವದೆಹಲಿ, ಜುಲೈ 16: ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದರು.

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆಗಿನ ಭಿನ್ನಾಭಿಪ್ರಾಯದ ಬಳಿಕ ಇದೀಗ ಸಿಧು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ.

ಉತ್ತರಪ್ರದೇಶ ಆಡಳಿತವನ್ನು ಹೊಗಳಿ ಮೋದಿ ಕಾಳೆಲೆದ ದೀದಿಉತ್ತರಪ್ರದೇಶ ಆಡಳಿತವನ್ನು ಹೊಗಳಿ ಮೋದಿ ಕಾಳೆಲೆದ ದೀದಿ

ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಂಜಾಬ್‌ನಲ್ಲಿ ನಡೆಯುತ್ತಿರುವ ಭಿನ್ನಮತಕ್ಕೆ ಕೊನೆಗೂ ಪೂರ್ಣ ವಿರಾಮ ಬೀಳುವ ಸಾಧ್ಯತೆಯಿದೆ. ಪಂಜಾಬ್‌ ಪ್ರದೇಶ ಕಾಂಗ್ರೆಸ್‌ ಸಮಿತಿ (ಪಿಪಿಸಿಸಿ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು ನೇಮಕ ಮಾಡಲು ಕಾಂಗ್ರೆಸ್‌ ವರಿಷ್ಠರ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Navjot Sidhu Meets Sonia Gandhi, Rahul Gandhi As Punjab Infighting Worsens

ಪಂಜಾಬ್ ಸಿಎಂ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಮತ್ತು ಮಾಜಿ ಸಚಿವ ನವಜೋತ್‌ ಸಿಂಗ್‌ ಸಿಧು ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ ಹಾಡಲು ಕೊನೆಗೂ ಸಂಧಾನ ಸೂತ್ರ ಸಿದ್ಧಪಡಿಸಿದ್ದು, ಈ ಹಿನ್ನೆಲೆಯಲ್ಲಿ ಸಿಧು ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು.

ಈ ಹಿನ್ನೆಲೆಯಲ್ಲಿ ಇಂದು ದೆಹಲಿಯ ನಿವಾಸದಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ನವಜೋತ್ ಸಿಂಗ್ ಸಿಧು ಭೇಟಿ ಮಾಡಿದ್ದಾರೆ. ಈ ವೇಳೆ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಕೂಡ ಉಪಸ್ಥಿತರಿದ್ದರು.

ಇನ್ನೊಂದೆಡೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಜುಲೈ 25 ರಂದು ಸೋನಿಯಾಗಾಂಧಿಯನ್ನು ಭೇಟಿಯಾಗುತ್ತಿದ್ದಾರೆ.

English summary
Navjot Sidhu met with Congress president Sonia Gandhi and Rahul Gandhi today in Delhi, a day after a dramatic escalation in the party's Punjab crisis with a flurry of meetings between rival factions as a peace formula appeared to be a non-starter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X