ಕಂಬಳಕ್ಕೆ ಒಪ್ಪಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧಾರ

Posted By:
Subscribe to Oneindia Kannada

ನವದೆಹಲಿ, ಡಿಸೆಂಬರ್, 29: ಗ್ರಾಮೀಣ ಪ್ರದೇಶದ ಸಂಸ್ಕೃತಿ ಉಳಿಸಿಕೊಂಡು ಬಂದಿರುವ ಕರ್ನಾಟಕದ ಕಂಬಳ, ತಮಿಳುನಾಡಿನ ಜೆಲ್ಲಿಕಟ್ಟು, ಮಹಾರಾಷ್ಟ್ರದ ಎತ್ತಿನಗಾಡಿ ಓಟದ ಸ್ಪರ್ಧೆಗಳಿಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಗ್ರಾಮೀಣ ಭಾಗಗಳಲ್ಲಿ ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಪಾರಂಪರಿಕ ಆಚರಣೆಗಳಿಗೆ ಯಾವುದೇ ಅಡ್ಡಿ ಪಡಿಸುವುದಿಲ್ಲ. ಅವುಗಳಿಗೆ ಅವುಗಳನ್ನು ಗೌರವಿಸುವ ಸಲುವಾಗಿ ಈ ನಿರ್ಧಾರಕ್ಕೆ ಬರಲಾಗುತ್ತಿದೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.[ಉಡುಪಿಯಲ್ಲಿ ಕಂಬಳ ನಿಷೇಧ, ಜನರ ಆಕ್ರೋಶ]

Kambala

ಪ್ರಾಣಿಗಳಿಗೆ ಹಿಂಸೆ ಮಾಡಬಾರದೆಂಬ ಉದ್ದೇಶ ನಮ್ಮದು. ಹಾಗಾಗಿ ಈ ಸ್ಪರ್ಧೆ ನಡೆಸಲು ಕೆಲವು ನಿಯಮಗಳನ್ನು ಜಾರಿಗೆ ತರಲಿದ್ದು, ಜನವರಿ ಒಂದು ಹೊಸವರ್ಷದ ಹೊತ್ತಿಗೆ ಆ ಶರತ್ತುಗಳನ್ನು ನೀಡಲಿದ್ದೇವೆ. ಈ ಕುರಿತಾಗಿ ಪರಿಸರ ಸಚಿವಾಲಯವು ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರ ಸಲಹೆ ಪಡೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.[ಇತಿಹಾಸದ ಪುಟ ಸೇರಲಿದೆಯೆ ಮಂಗಳೂರು ಕಂಬಳ?]

ಕರಾವಳಿ ಜಾನಪದ ಕ್ರೀಡೆ ಕಂಬಳ ಪ್ರಾಣಿ ಹಿಂಸೆಯನ್ನು ಕೇಂದ್ರಿಕರಿಸುತ್ತದೆ ಎಂಬ ನಿಲುವಿನಲ್ಲಿ ಅದನ್ನು ಉಡುಪಿ ಜಿಲ್ಲಾಡಳಿತ ನವೆಂಬರ್ 15ರ 2004ರಂದು ನಿಷೇಧಿಸಲಾಗಿತ್ತು. ನಿಷೇಧಿಸಿದ ಹಿನ್ನೆಲೆಯಲ್ಲಿ ಕರಾವಳಿ ಜನತೆ ಆಕ್ರೋಶಕ್ಕೆ ಒಳಗಾಗಿದ್ದರು. ಕೇಂದ್ರ ಸರ್ಕಾರದ ನಿರ್ಧಾರದಿಂದ ಕೊಂಚ ಸಮಾಧಾನವಾಗಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
NDA government has take decision to give permission the folk play Kambala.
Please Wait while comments are loading...