ಪಿವಿ ನರಸಿಂಹ ರಾವ್ ಸ್ಮಾರಕ, ಮೋದಿ ಚಾಲಾಕಿ ನಡೆ
ನವದೆಹಲಿ, ಏ.1: ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಅವರ ದೇಶಕ್ಕೆ ನೀಡಿದ ಆರ್ಥಿಕ ಸುಧಾರಣಾ ಯೋಜನೆಗಳಿಗೆ ಬೆಲೆ ಸಿಗಲಿ ಎಂದು ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ನರಸಿಂಹ ರಾವ್ ಅವರ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿರುವುದು ಕಾಂಗ್ರೆಸ್ಸಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದ ಕಾಲದಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮ ವಿಭೂಷಣ ಎಲ್ ಕೆ ಅಡ್ವಾಣಿ ಸೇರಿದಂತೆ 19 ಮಂದಿಗೆ ಕೋರ್ಟಿನಿಂದ ಸಮನ್ಸ್ ಜಾರಿಗೊಂಡ ಸಂದರ್ಭದಲ್ಲೇ ಎನ್ ಡಿಎ ಸರ್ಕಾರ ಸ್ಮಾರಕ ನಿರ್ಮಾಣದ ಬಗ್ಗೆ ಘೋಷಣೆ ಮಾಡಿದೆ.[ಪಿವಿ ನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಸ್ವಾಮಿ]
ದೇಶದ ಆರ್ಥಿಕ ಸುಧಾರಣೆಗೆ ಮುನ್ನುಡಿ ಬರೆದು ಯಶಸ್ವಿ 5 ವರ್ಷಗಳ ಕಾಲ ಪ್ರಧಾನಿಯಾಗಿದ್ದ ನರಸಿಂಹರಾವ್ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ನವದೆಹಲಿಯ ಏಕ್ತಾ ಸ್ಥಳ ಸಮಾಧಿ ಬಳಿ ನರಸಿಂಹರಾವ್ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ಈಗಾಗಲೇ ಭರದ ಸಿದ್ಧತೆಗಳು ಪ್ರಾರಂಭವಾಗಿವೆ. ಪುರಾತತ್ವ ಇಲಾಖೆ ಮೂಲಕ ಸ್ಮಾರಕ ತಲೆ ಎತ್ತಲಿದೆ ಎಂದು ಕೇಂದ್ರ ನಗರಾಭಿವೃದ್ದಿ ಇಲಾಖೆ ಸಚಿವ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.

NDA govt plans a memorial for P V Narasimha Rao.A Tight slap on the face of Congress.
— Abhilash Sidd (@abhilash99) March 31, 2015 ಟಿಡಿಪಿ ಒತ್ತಾಯ: ನರಸಿಂಹರಾವ್ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂದು ಎನ್‌ಡಿಎ ಮಿತ್ರ ಪಕ್ಷವಾದ ತೆಲಗು ದೇಶಂ ಪಕ್ಷ ಕೇಂದ್ರದ ಮೇಲೆ ಒತ್ತಡ ಹೇರಿತ್ತು. ನರಸಿಂಹರಾವ್ ಕಾಂಗ್ರೆಸ್‌ನಲ್ಲಿದ್ದರೂ ಅವರನ್ನು ಆ ಪಕ್ಷ ಸಂಪೂರ್ಣವಾಗಿ ತಿರಸ್ಕಾರ ಮಾಡಿದೆ.
Bjp setting good example by planning to honour p v narasimha rao. He had sacked 4 bjp ruled states.Held bjp singularly responsible for babri
— rasheed kidwai (@rasheedkidwai) March 31, 2015 ಕಾಂಗ್ರೆಸ್‌ಗೆ ಮುಜುಗರ ಮಾಡುವ ಉದ್ದೇಶದಿಂದಲಾದರೂ ಸ್ಮಾರಕಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಡ ಹಾಕಿದ್ದರು. ಇದರ ಜೊತೆಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಕೂಡಾ ಪಿವಿ ನರಸಿಂಹ ರಾವ್ ಸ್ಮಾರಕಕ್ಕೆ ಒತ್ತಾಯಿಸಿದ್ದರು.[ಬಾಬ್ರಿ ಧ್ವಂಸ ಪ್ರಕರಣ: ಪದ್ಮವಿಭೂಷಣ ಅಡ್ವಾಣಿಗೆ ನೋಟಿಸ್]
P. V. Narasimha Rao & Vajpayee changed the direction of country Arun Shourie http://t.co/9xyqqWYodB pic.twitter.com/SikT2W9D2a
— Niti Central (@NitiCentral) March 19, 2015 ತೆಲಂಗಾಣದಲ್ಲಿ ನರಸಿಂಹರಾವ್ ಸ್ಮಾರಕ ನಿರ್ಮಾಣ ಮಾಡಲು ಟಿಡಿಪಿ ಕಳೆದ ಅಕ್ಟೋಬರ್‌ನಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಮುಂದಾಗಿರುವುದರಿಂದ ಕಾಂಗ್ರೆಸ್‌ಗೆ ಮುಜುಗರವುಂಟು ಮಾಡಿದೆ. ಏಕ್ತಾ ಸ್ಥಳವು ಮಾಜಿ ರಾಷ್ಟ್ರಪತಿ ಹಾಗೂ ಕಾಂಗ್ರೆಸ್ ನಾಯಕ ಗ್ಯಾನಿ ಜೇಲ್‌ಸಿಂಗ್ ಅವರ ಸಮಾಧಿಯೂ ಇದೆ. ಅನೇಕ ನಾಯಕರ ಸ್ಮಾರಕಗಳ ತಾಣವಾಗಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications