ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಆಸ್ಪತ್ರೆಗಳಲ್ಲಿ ಸುಮಾರು 200 ಬ್ಲ್ಯಾಕ್‌ ಫಂಗಸ್ ಪ್ರಕರಣಗಳಿವೆ

|
Google Oneindia Kannada News

ನವದೆಹಲಿ, ಮೇ 21: ದೆಹಲಿಯ ಆಸ್ಪತ್ರೆಗಳಲ್ಲಿ ಸುಮಾರು 200ರಷ್ಟು ಕಪ್ಪು ಶಿಲೀಂಧ್ರ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.

ದೆಹಲಿಯ ಎಲ್ಲಾ ಆಸ್ಪತ್ರೆಗಳಲ್ಲಿ ಬುಧವಾರ ರಾತ್ರಿಯವರೆಗೆ 197 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡುಬಂದಿವೆ. ಇದರಲ್ಲಿ ಇತರ ರಾಜ್ಯಗಳಿಂದ ಚಿಕಿತ್ಸೆಗಾಗಿ ಬಂದ ರೋಗಿಗಳು ಸೇರಿದ್ದಾರೆ ಎಂದು ತಿಳಿಸಿದರು.

ದೆಹಲಿಯಲ್ಲಿ ಕೊರೊನಾ ವೈರಸ್ ಹೊಸ ಪ್ರಕರಣ ಮತ್ತಷ್ಟು ಇಳಿಕೆದೆಹಲಿಯಲ್ಲಿ ಕೊರೊನಾ ವೈರಸ್ ಹೊಸ ಪ್ರಕರಣ ಮತ್ತಷ್ಟು ಇಳಿಕೆ

ದೆಹಲಿಯಲ್ಲಿ18 ರಿಂದ 44 ವಯೋಮಾನದ ಅನೇಕ ಕೋವಿಡ್ ಲಸಿಕಾ ಕೇಂದ್ರಗಳನ್ನು ಶುಕ್ರವಾರದಿಂದ ಮುಚ್ಚಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

Nearly 200 Cases Of Black Fungus In Delhi Hospitals

ಇಡೀ ದೇಶದಲ್ಲಿ ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಚಿಕಿತ್ಸೆಯಲ್ಲಿ ಬಳಸುವ ಆಂಫೊಟೆರಿಸಿನ್-ಬಿ ಚುಚ್ಚುಮದ್ದಿನ ತೀವ್ರ ಕೊರತೆ ಇದೆ ಎಂದು ಜೈನ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಹಲವು ದಿನಗಳ ಹಿಂದೆಯೇ ಕೋವಾಕ್ಸಿನ್ ಸ್ಟಾಕ್ ಖಾಲಿ ಆಗಿದೆ. ಕೋವಿಶೀಲ್ಡ್ ಡೋಸ್ ಸಹ ಮುಗಿದಿದೆ. ಹೀಗಾಗಿ ಇಂದು ಅನೇಕ ಲಸಿಕಾ ಕೇಂದ್ರಗಳನ್ನು ಮುಚ್ಚಲಾಗುತ್ತಿದೆ ಎಂದು ಜೈನ್ ಹೇಳಿದ್ದಾರೆ.

ಕೇಂದ್ರವು ದೆಹಲಿಗೆ 2,000 ಆಂಫೊಟೆರಿಸಿನ್-ಬಿ ಚುಚ್ಚುಮದ್ದನ್ನು ನೀಡುವ ಸಾಧ್ಯತೆಯಿದೆ, ನಂತರ ಅದನ್ನು ಆಸ್ಪತ್ರೆಗಳಿಗೆ ನೀಡಲಾಗುವುದು ಎಂದರು.

ಕಳೆದ 24 ಗಂಟೆಗಳಲ್ಲಿ 2,59,591 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,57,295 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 4,209 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 2,60,31,991 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,27,12,735 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 2,91,331 ಜನರು ಪ್ರಾಣ ಬಿಟ್ಟಿದ್ದಾರೆ.

ಇದರ ಹೊರತಾಗಿ 30,27,925 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Health Minister Satyendar Jain on Friday said there were 197 cases of black fungus in hospitals across Delhi till Wednesday night, including non-residents who have come to the city for treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X