ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀಟ್ ಪರೀಕ್ಷೆ ಬರೆಯಲು ಕೊವಿಡ್-19 ಸೋಂಕಿತರಿಗೆ ಅನುಮತಿಯಿಲ್ಲ

|
Google Oneindia Kannada News

ನವದೆಹಲಿ, ಸಪ್ಟೆಂಬರ್.11: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET)ಗೆ ಎರಡು ದಿನ ಬಾಕಿ ಇರುವಂತೆ ಕೇಂದ್ರ ಸರ್ಕಾರವು ಪ್ರಮಾಣಿತ ಕಾರ್ಯ ನಿರ್ವಹಣಾ ಪದ್ಧತಿ(SOP)ಯನ್ನು ಪರಿಷ್ಕರಿಸಿದ್ದು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.

ಪರಿಷ್ಕೃತ ಪ್ರಮಾಣಿತ ಕಾರ್ಯ ನಿರ್ವಹಣಾ ಪದ್ಧತಿ ಪ್ರಕಾರ, ನೊವೆಲ್ ಕೊರೊನಾವೈರಸ್ ಸೋಂಕಿತ ಪರೀಕ್ಷಾರ್ಥಿಗಳಿಗೂ ಕೂಡಾ ಐಸೋಲೇಷನ್ ಕೊಠಡಿಗಳಲ್ಲಿ ಪರೀಕ್ಷೆ ಬರೆಯುವುದಕ್ಕೆ ನೀಡಿದ್ದ ಅನುಮತಿಯನ್ನು ತೆಗೆದು ಹಾಕಿದೆ. ಇದರ ಜೊತೆಗೆ ನೀಟ್ ಪರೀಕ್ಷಾರ್ಥಿಗಳು ಯಾವ ನಿಯಮ ಅನುಸರಿಸಬೇಕು ಎನ್ನುವುದರ ಬಗ್ಗೆ ಉಲ್ಲೇಖಿಸಲಾಗಿದೆ.

ನೀಟ್ ಪರೀಕ್ಷೆಗೆ ಹಾಜರಾಗುವ ಮುನ್ನ ಈ ನಿಯಮಗಳನ್ನು ಓದಿನೀಟ್ ಪರೀಕ್ಷೆಗೆ ಹಾಜರಾಗುವ ಮುನ್ನ ಈ ನಿಯಮಗಳನ್ನು ಓದಿ

ಕೊರೊನಾವೈರಸ್ ಸೋಂಕಿತ ಲಕ್ಷಣಗಳು ಕಂಡು ಬಂದ ವಿದ್ಯಾರ್ಥಿಗಳನ್ನು ಹತ್ತಿರದ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೊಳಪಡಿಸಬೇಕು. ಪರೀಕ್ಷಾರ್ಥಿ ದೈಹಿಕವಾಗಿ ಆರೋಗ್ಯವಾಗಿರುವುದನ್ನು ಖಚಿತಪಡಿಸಿಕೊಂಡು ಪರೀಕ್ಷೆ ಬರೆಯುವುದಕ್ಕೆ ಅನುಮತಿ ನೀಡಬೇಕು. ಇಲ್ಲದಿದ್ದಲ್ಲಿ ದೈಹಿಕವಾಗಿ ಸದೃಢ ಎಂಬ ವರದಿ ಬಂದ ಬಳಿಕ ಮತ್ತೊಂದು ದಿನ ಪರೀಕ್ಷೆ ಬರೆಯುವುದಕ್ಕೆ ನಿಬಂಧನೆಯನ್ನು ಮಾಡಬೇಕು ಎಂದು ಪರಿಷ್ಕೃತ ನಿಯಮದಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ನಿಯಮದಡಿ ಕ್ರಮ

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ನಿಯಮದಡಿ ಕ್ರಮ

ಕೊರೊನಾವೈರಸ್ ಸೋಂಕಿತ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬರೆಯುವುದಕ್ಕೆ ಅನುಮತಿ ನೀಡಬೇಕೇ ಅಥವಾ ನಿರಾಕರಿಸಬೇಕೇ ಎನ್ನುವುದನ್ನು ಸಮಯಕ್ಕೆ ಅನುಗುಣವಾಗಿ ತೀರ್ಮಾನಿಸಲಾಗುತ್ತದೆ. ಈ ಬಗ್ಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಹೊರಡಿಸಿರುವ ನಿಯಮಗಳಡಿ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಕಂಟೇನ್ಮೆಂಟ್ ಝೋನ್ ನಲ್ಲಿ ವಾಸವಿರುವವರಿಗೆ ಅನುಮತಿ ಇಲ್ಲ

ಕಂಟೇನ್ಮೆಂಟ್ ಝೋನ್ ನಲ್ಲಿ ವಾಸವಿರುವವರಿಗೆ ಅನುಮತಿ ಇಲ್ಲ

ಕಳೆದ ಸಪ್ಟೆಂಬರ್.02ರಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನೀಟ್ ಪರೀಕ್ಷಾ ಮಾರ್ಗಸೂಚಿಯನ್ನು ಹೊರಡಿಸಿದ್ದು, ಕಂಟೇನ್ಮೆಂಟ್ ಝೋನ್ ನಲ್ಲಿರುವ ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ನಿರ್ವಾಹಕರು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ ಎಂದು ತಿಳಿಸಿತ್ತು. ಕಂಟೇನ್ಮೆಂಟ್ ಝೋನ್ ನಲ್ಲಿ ವಾಸವಿರುವ ವಿದ್ಯಾರ್ಥಿಗಳು ದೈಹಿಕವಾಗಿ ನೀಟ್ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತಿಲ್ಲ. ಪರೋಕ್ಷವಾಗಿ ಪರೀಕ್ಷೆ ಬರೆಯುವುದಕ್ಕೆ ವ್ಯವಸ್ಥೆ ಕಲ್ಪಿಸುವುದು ಅಥವಾ ಇನ್ನೊಂದು ದಿನಾಂಕವನ್ನು ನಿಗದಿಗೊಳಿಸಬೇಕು ಎಂದು ಉಲ್ಲೇಖಿಸಲಾಗಿತ್ತು.

ಕೊವಿಡ್-19 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಮಯ

ಕೊವಿಡ್-19 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಮಯ

ನೀಟ್ ಪರೀಕ್ಷಾ ಕೇಂದ್ರಗಳಿಗೆ ತೆರಳುವ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮಾಸ್ಕ್, ಸೋಪ್, ಹ್ಯಾಂಡ್ ಸ್ಯಾನಿಟೈಸರ್ ನ್ನು ಕಡ್ಡಾಯವಾಗಿ ಬಳಸಬೇಕು. ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಪರೀಕ್ಷಾ ನಿರ್ವಹಣಾ ಪ್ರಾಧಿಕಾರ ಮತ್ತು ಪರೀಕ್ಷಾ ಕೇಂದ್ರದ ಅಧಿಕಾರಿಗಳು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ನ್ನು ಒದಗಿಸಬೇಕು ಎಂದು ಪ್ರಮಾಣಿತ ಕಾರ್ಯನಿರ್ವಹಣಾ ಪದ್ಧತಿಯಲ್ಲಿ ಹೇಳಲಾಗಿದೆ.

ಸೋಂಕುರಹಿತ ವಿದ್ಯಾರ್ಥಿಗಳಿಗಷ್ಟೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ

ಸೋಂಕುರಹಿತ ವಿದ್ಯಾರ್ಥಿಗಳಿಗಷ್ಟೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ

ನೀಟ್ ಪರೀಕ್ಷಾರ್ಥಿ ಅಥವಾ ನಿರ್ವಾಹಕರು ಕೊರೊನಾವೈರಸ್ ಸೋಂಕು ಇಲ್ಲದ ಬಗ್ಗೆ ಸ್ವಯಂ ಘೋಷಣೆಯನ್ನು ನೀಡುವಲ್ಲಿ ವಿಫರಾದರೆ ಅಂಥವರಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ನೀಡುವುದಿಲ್ಲ ಎಂದು ಎಸ್ಓಪಿಯಲ್ಲಿ ಒತ್ತಿ ಹೇಳಲಾಗಿದೆ. ಅಲ್ಲದೇ ಕೊರೊನಾವೈರಸ್ ಸೋಂಕು ಇಲ್ಲದ ವಿದ್ಯಾರ್ಥಿಗಳು ಮತ್ತು ಪರೀಕ್ಷಾ ನಿರ್ವಾಹಕರಿಗೆ ಮಾತ್ರ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶಕ್ಕೆ ಅನುಮತಿಸಲಾಗುತ್ತದೆ ಎಂದು ಪ್ರಮಾಣಿತ ಕಾರ್ಯ ನಿರ್ವಹಣಾ ಪದ್ಧತಿ(SOP)ಯಲ್ಲಿ ತಿಳಿಸಲಾಗಿದೆ.

ಕಂಟೇನ್ಮೆಂಟ್ ಝೋನ್ ನಲ್ಲಿ ಪರೀಕ್ಷಾ ಕೇಂದ್ರ ತೆರೆಯುವಂತಿಲ್ಲ

ಕಂಟೇನ್ಮೆಂಟ್ ಝೋನ್ ನಲ್ಲಿ ಪರೀಕ್ಷಾ ಕೇಂದ್ರ ತೆರೆಯುವಂತಿಲ್ಲ

ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ವ್ಯವಸ್ಥಿತವಾಗಿ ವಿದ್ಯಾರ್ಥಿಗಳನ್ನು ನಿಯಂತ್ರಿಸಬೇಕು. ವಿದ್ಯಾರ್ಥಿಗಳು ಗುಂಪಾಗಿ ಸೇರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದರ ಜೊತೆಗೆ ಕಂಟೇನ್ಮೆಂಟ್ ಝೋನ್ ಗಳಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳನ್ನು ತೆರೆಯುವಂತಿಲ್ಲ ಎಂದು ಎಸ್ಓಪಿಯಲ್ಲಿ ಉಲ್ಲೇಖಿಸಲಾಗಿದೆ.

ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಪಡೆಯುವ ಮೊದಲು ಎಚ್ಚರಿಕೆ

ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಪಡೆಯುವ ಮೊದಲು ಎಚ್ಚರಿಕೆ

ನೀಟ್ ಪರೀಕ್ಷಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯನ್ನು ನೀಡುವುದಕ್ಕೆ ಮೊದಲು ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹ್ಯಾಂಡ್ ಸ್ಯಾನಿಟೈಸರ್ ನಿಂದ ಕೈಗಳನ್ನು ತೊಳೆದುಕೊಳ್ಳಬೇಕು. ತದನಂತರದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಗಳನ್ನು ತಗೆದುಕೊಳ್ಳುವಾಗಲೂ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಮೇಲ್ವಿಚಾರಕರು ಕೂಡಾ ಹ್ಯಾಂಡ್ ಸ್ಯಾನಿಟೈಸ್ ಮಾಡಿಕೊಳ್ಳುವುದು. ಹೀಗೆ ಸಂಗ್ರಹಿಸಿ ಪ್ಯಾಕ್ ಮಾಡಲಾದ ಉತ್ತರ ಪತ್ರಿಕೆಗಳನ್ನು 72 ಗಂಟೆಗಳ ನಂತರವೇ ತೆರೆಯುವುದಕ್ಕೆ ಶಿಫಾರಸ್ಸು ಮಾಡಲಾಗಿದೆ.

Recommended Video

Zameer Ahmed ಗರಂ Sambargi ವಿರುದ್ಧ ಬಿತ್ತು ಸಿಕಾಪಟ್ಟೆ ಸೆಕ್ಷನ್ | Oneindia Kannada
ದೇಶಾದ್ಯಂತ ನಡೆಸಿದ ಜೆಇಇ ಪರೀಕ್ಷೆಗಳು ಯಶಸ್ವಿ

ದೇಶಾದ್ಯಂತ ನಡೆಸಿದ ಜೆಇಇ ಪರೀಕ್ಷೆಗಳು ಯಶಸ್ವಿ

ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ಸಪ್ಟೆಂಬರ್.01ರಿಂದ ಸಪ್ಟೆಂಬರ್.06ರವರೆಗೂ ಜೆಇಇ ಪರೀಕ್ಷೆ ನಡೆಸುವಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯಶಸ್ವಿಯಾಗಿದೆ. ಸಪ್ಟೆಂಬರ್.13ರಂದು ನೀಟ್ ಪರೀಕ್ಷೆ ನಡೆಸುವುದಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. 2020ನೇ ಸಾಲಿನಲ್ಲಿ ನೀಟ್ ಪರೀಕ್ಷೆ ಬರೆಯುವುದಕ್ಕೆ 15.97 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ದೇಶಾದ್ಯಂತ ನೀಟ್ ಪರೀಕ್ಷೆಗಾಗಿ 3842 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

English summary
NEET 2020: Centre Issued Revised Guidelines For Exams. Read The NEET 2020 SOPs In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X