• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜೆಇಇ, ನೀಟ್ ಪರೀಕ್ಷೆ ಮುಂದೂಡಿಕೆ: ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

|

ನವದೆಹಲಿ, ಸಪ್ಟೆಂಬರ್.04: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ 2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಮತ್ತು ಜಂಟಿ ಪ್ರವೇಶ ಪರೀಕ್ಷೆ(JEE) ನಡೆಸುತ್ತಿರುವುದನ್ನು ಪ್ರಶ್ನಿಸಿದ ಅರ್ಜಿಯು ಶುಕ್ರವಾರ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ.

      BBMP Election ಮುಂದೂಡಲು ಪಾಲಿಕೆ ಪಾಲಿಟಿಕ್ಸ್!! | Oneindia Kannada

      ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

      ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾ. ಬಿ.ಆರ್. ಗಾವೈ ಮತ್ತು ನ್ಯಾ.ಕೃಷ್ಣ ಮುರಾರಿ ನೇತೃತ್ವದ ತ್ರಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. ಕಳೆದ ಆಗಸ್ಟ್.17ರಂದು ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸ್ವತಃ ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು.

      ಸಂಸತ್ ಪ್ರಶ್ನಾವಳಿ ರದ್ದುಗೊಳಿಸಿದ ಹಿನ್ನೆಲೆ ಸರ್ಕಾರಕ್ಕೆ 'ಟ್ವೀಟ್' ಏಟು!

      ದೇಶದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ನಡುವೆ ಜನರ ಬದುಕು ನಿಂತಿಲ್ಲ. ಪರೀಕ್ಷೆ ಮುಂದೂಡುವ ಮೂಲಕ ವಿದ್ಯಾರ್ಥಿಗಳ ಜೀವನವನ್ನು ಅಪಾಯಕ್ಕೆ ಒಡ್ಡುವುದು ಬೇಡ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು.

      ಚೀನಾ ಗಡಿಯಲ್ಲಿರುವ ಭಾರತದ 'ಟಿಬೆಟ್' ಸೇನೆ ಬಗ್ಗೆ ನಿಮಗೆಷ್ಟು ಗೊತ್ತು?

      ಬಿಜೆಪಿಯೇತರ ರಾಜ್ಯಗಳಿಂದ ಸುಪ್ರೀಂಕೋರ್ಟ್ ಗೆ ಅರ್ಜಿ:

      ಸಪ್ಟೆಂಬರ್ ತಿಂಗಳಿನಲ್ಲೇ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಬಾರದು. ಬದಲಿಗೆ ಈ ದಿನಾಂಕವನ್ನು ಮುಂದೂಡುವಂತೆ ಆಗಸ್ಟ್.28ರಂದು ಸರ್ವೋಚ್ಛ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿತ್ತು. ಬಿಜೆಪಿ ಸರ್ಕಾರೇತರ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಜಾರ್ಖಂಡ್ ರಾಜ್ಯಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದವು. ಕೊವಿಡ್-19 ಆತಂಕದ ನಡುವೆ ಪರೀಕ್ಷೆಗಳನ್ನು ನಡೆಸಕೂಡದು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದವು.

      ನೀಟ್, ಜಿಇಇ ವಿದ್ಯಾರ್ಥಿಗಳು ಮತ್ತು ಕೇಂದ್ರಗಳ ಮಾಹಿತಿ:

      ಜೆಇಇ ಮುಖ್ಯ ಪರೀಕ್ಷಗಳನ್ನು ಸಪ್ಟೆಂಬರ್ 1 ರಿಂದ 6ರವರೆಗೆ ನಡೆಯಲಿದ್ದು, 9.53 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಸಪ್ಟೆಂಬರ್.13ರಂದು ನೀಟ್ ಪರೀಕ್ಷೆಗಾಗಿ 15.97 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 8.58 ಲಕ್ಷ ಅಭ್ಯರ್ಥಿಗಳ ಪೈಕಿ 7.5 ಲಕ್ಷ ಅಭ್ಯರ್ಥಿಗಳು ಜೆಇಇ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ನೀಟ್‌ನಲ್ಲಿ 24 ಗಂಟೆಗಳಲ್ಲಿ 15.97 ಲಕ್ಷ ಅಭ್ಯರ್ಥಿಗಳ ಪೈಕಿ 10 ಲಕ್ಷ ಮಂದಿ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ಇದರ ನಡುವೆ ಜೆಇಇ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 570ರಿಂದ 660ಕ್ಕೆ ಏರಿಕೆ ಮಾಡಲಾಗಿದೆ. 3842 ನೀಟ್ ಪರೀಕ್ಷಾ ಕೇಂದ್ರಗಳಿವೆ.

      English summary
      NEET JEE 2020 Row: Today Supreme Court To Hear Review Petition.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X