• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜೆಇಇ, ನೀಟ್ ಮುಂದೂಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

|

ನವದೆಹಲಿ, ಸಪ್ಟೆಂಬರ್.04: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ 2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಮತ್ತು ಜಂಟಿ ಪ್ರವೇಶ ಪರೀಕ್ಷೆ(JEE) ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

   Drugs ದಂಧೆ ಕಾರ್ಯಚರಣೆಗೆ ಬ್ರೇಕಿಲ್ಲ: Home Minister | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಶುಕ್ರವಾರ ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾ. ಬಿ.ಆರ್. ಗಾವೈ ಮತ್ತು ನ್ಯಾ.ಕೃಷ್ಣ ಮುರಾರಿ ನೇತೃತ್ವದ ತ್ರಿಸದಸ್ಯ ಪೀಠವು ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ. ಕಳೆದ ಆಗಸ್ಟ್.17ರಂದು ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂಬ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

   ನೀಟ್, ಜೆಇಇ ಪರೀಕ್ಷೆ ವಿರೋಧಿಸಿ 6 ಬಿಜೆಪಿಯೇತರ ರಾಜ್ಯಗಳಿಂದ ಸುಪ್ರೀಂಕೋರ್ಟ್ ಗೆ ಅರ್ಜಿ

   ಸುಪ್ರೀಂಕೋರ್ಟ್ ತನ್ನ ಹಿಂದಿನ ಆದೇಶದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ನಡುವೆ ಜನರ ಬದುಕು ನಿಂತಿಲ್ಲ. ನೀಟ್, ಜೆಇಇ ಪರೀಕ್ಷೆ ಮುಂದೂಡುವ ಮೂಲಕ ವಿದ್ಯಾರ್ಥಿಗಳ ಜೀವನವನ್ನು ಅಪಾಯಕ್ಕೆ ಒಡ್ಡುವುದು ಬೇಡ ಎಂದು ತೀರ್ಪು ನೀಡಿತ್ತು.

   ಚೀನಾ ಗಡಿಯಲ್ಲಿರುವ ಭಾರತದ 'ಟಿಬೆಟ್' ಸೇನೆ ಬಗ್ಗೆ ನಿಮಗೆಷ್ಟು ಗೊತ್ತು?

   ಬಿಜೆಪಿಯೇತರ ರಾಜ್ಯಗಳಿಂದ ಸುಪ್ರೀಂಕೋರ್ಟ್ ಗೆ ಅರ್ಜಿ:

   ಸಪ್ಟೆಂಬರ್ ತಿಂಗಳಿನಲ್ಲೇ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಬಾರದು. ಬದಲಿಗೆ ಈ ದಿನಾಂಕವನ್ನು ಮುಂದೂಡುವಂತೆ ಆಗಸ್ಟ್.28ರಂದು ಸರ್ವೋಚ್ಛ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿತ್ತು. ಬಿಜೆಪಿ ಸರ್ಕಾರೇತರ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಜಾರ್ಖಂಡ್ ರಾಜ್ಯಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದವು. ಕೊವಿಡ್-19 ಆತಂಕದ ನಡುವೆ ಪರೀಕ್ಷೆಗಳನ್ನು ನಡೆಸಕೂಡದು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದವು.

   ನೀಟ್, ಜಿಇಇ ವಿದ್ಯಾರ್ಥಿಗಳು ಮತ್ತು ಕೇಂದ್ರಗಳ ಮಾಹಿತಿ:

   ಜೆಇಇ ಮುಖ್ಯ ಪರೀಕ್ಷಗಳನ್ನು ಸಪ್ಟೆಂಬರ್ 1 ರಿಂದ 6ರವರೆಗೆ ನಡೆಯಲಿದ್ದು, 9.53 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಸಪ್ಟೆಂಬರ್.13ರಂದು ನೀಟ್ ಪರೀಕ್ಷೆಗಾಗಿ 15.97 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 8.58 ಲಕ್ಷ ಅಭ್ಯರ್ಥಿಗಳ ಪೈಕಿ 7.5 ಲಕ್ಷ ಅಭ್ಯರ್ಥಿಗಳು ಜೆಇಇ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ನೀಟ್‌ನಲ್ಲಿ 24 ಗಂಟೆಗಳಲ್ಲಿ 15.97 ಲಕ್ಷ ಅಭ್ಯರ್ಥಿಗಳ ಪೈಕಿ 10 ಲಕ್ಷ ಮಂದಿ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ಇದರ ನಡುವೆ ಜೆಇಇ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 570ರಿಂದ 660ಕ್ಕೆ ಏರಿಕೆ ಮಾಡಲಾಗಿದೆ. 3842 ನೀಟ್ ಪರೀಕ್ಷಾ ಕೇಂದ್ರಗಳಿವೆ.

   English summary
   NEET JEE 2020: Supreme Court Dismiss Review Petition By 6 States Seeking Postponement.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X