ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ನೀಟ್ ಯುಜಿ 2022 ಫಲಿತಾಂಶ ಸೆ.7 ರಂದು ಬಿಡುಗಡೆ

|
Google Oneindia Kannada News

ನವದೆಹಲಿ, ಆಗಸ್ಟ್ 26: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ (NEET UG) 2022 ರ ಫಲಿತಾಂಶವನ್ನು ಸೆಪ್ಟೆಂಬರ್ 7 ರಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಬಿಡುಗಡೆ ಮಾಡಲಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಆಗಸ್ಟ್ 30 ರೊಳಗೆ ಬಿಡುಗಡೆ ಮಾಡಲಾಗುತ್ತದೆ.

ಸಿಇಟಿ: ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್ ಪ್ರಾರಂಭಸಿಇಟಿ: ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್ ಪ್ರಾರಂಭ

NEET UG 2022 ತಾತ್ಕಾಲಿಕ ಕೀ ಉತ್ತರಗಳು, ಬಿಡುಗಡೆಯಾದ ಫಲಿತಾಂಶವು ಅಧಿಕೃತ ವೆಬ್‌ಸೈಟ್ neet.nta.nic.in ನಲ್ಲಿ ದೊರೆಯುತ್ತದೆ. ಅಭ್ಯರ್ಥಿಗಳು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

NEET UG 2022 Result Will Release on September 7

ಅಭ್ಯರ್ಥಿಗಳು NEET UG 2022 ಕೀ ಉತ್ತರಗಳನ್ನು ಅಪ್ಲಿಕೇಶನ್ ಸಂಖ್ಯೆ ಮತ್ತು ಪಾಸ್‌ವರ್ಡ್ ಬಳಸಿ ಡೌನ್‌ಲೋಡ್ ಮಾಡಬಹುದು. NEET ಕೀ ಉತ್ತರಗಳ ಪಿಡಿಎಫ್‌(PDF) ಫೈಲ್ ಪರದೆಯ ಮೇಲೆ ಗೋಚರಿಸುತ್ತದೆ. ಆಗ ಅದನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಪ್ರತಿ ಪ್ರಶ್ನೆಗೆ ರೂ 200 ಶುಲ್ಕವನ್ನು ಪಾವತಿಸುವ ಮೂಲಕ NEET ಕೀ ಉತ್ತರಗಳನ್ನು ಪ್ರಶ್ನಿಸಬಹುದು.

"ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ, NEET (UG) - 2022 ರ ಆನ್‌ಲೈನ್ ಅರ್ಜಿ ನಮೂನೆಯನ್ನು ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಗಳು ನೀಡಿದ ನೋಂದಾಯಿತ ಇ-ಮೇಲ್ ವಿಳಾಸಕ್ಕೆ OMR ಉತ್ತರ ಪತ್ರಿಕೆಯ ಸ್ಕ್ಯಾನ್ ಮಾಡಿದ ಚಿತ್ರವನ್ನು ಸಹ ಕಳುಹಿಸಲಾಗುತ್ತದೆ."

"ಅಭ್ಯರ್ಥಿಗಳು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಶ್ನಿಸಬಹುದು. ಇದಕ್ಕೆ ಆನ್‌ಲೈನ್‌ನಲ್ಲಿಯೇ ಅವಕಾಶವನ್ನು ನೀಡಲಾಗುವುದು, ನಿರ್ದಿಷ್ಟ ಅವಧಿಯೊಳಗೆ ಪ್ರತಿ ಉತ್ತರಕ್ಕೆ 200 ರೂಪಾಯಿ ಪಾವತಿ ಮಾಡಬೇಕಾಗುತ್ತದೆ. ಈ ಹಣವನ್ನು ಮರುಪಾವತಿ ಮಾಡಲಾಗದು" ಎಂದು NTA ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಜುಲೈ 17 ರಂದು ನಡೆದ NEET UG 2022 ಪರೀಕ್ಷೆಗೆ 18 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ ದೇಶದ ಹೊರಗಿನ 14 ನಗರಗಳು ಸೇರಿದಂತೆ 497 ನಗರಗಳಲ್ಲಿ ನೆಲೆಸಿರುವ 18,72,343 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದ್ದರು. 3,570 ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಅಬುಧಾಬಿ, ಬ್ಯಾಂಕಾಕ್, ಕೊಲಂಬೊ, ದೋಹಾ, ಕಠ್ಮಂಡು, ಕೌಲಾಲಂಪುರ್, ಲಾಗೋಸ್, ಮನಾಮಾ, ಮಸ್ಕತ್, ರಿಯಾದ್, ಶಾರ್ಜಾ, ಸಿಂಗಾಪುರದಲ್ಲಿ ದುಬೈ ಮತ್ತು ಕುವೈತ್ ಸಿಟಿಯಲ್ಲಿ ಮೊದಲ ಬಾರಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು.

English summary
NEET UG 2022 Result Will Release on September 7 and answer key will be released by August 30. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X