ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್‌ ಹೊಸ ರೂಪಾಂತರ: 'ನಿಮ್ಮನ್ನು, ನಿಮ್ಮ ಕುಟುಂಬವನ್ನು ರಕ್ಷಿಸುತ್ತೇವೆ' ಎಂದ ಕೇಜ್ರಿವಾಲ್‌

|
Google Oneindia Kannada News

ನವದೆಹಲಿ, ನವೆಂಬರ್‌ 26: ದಕ್ಷಿಣ ಆಫ್ರಿಕಾ, ಹಾಂಗ್‌ಕಾಂಗ್‌, ಬೋಟ್ಸ್ವಾನದಲ್ಲಿ ಕೊರೊನಾ ವೈರಸ್‌ ಸೋಂಕಿನ ಹೊಸ ರೂಪಾಂತರವು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸೋಮವಾರ ವೈದ್ಯಕೀಯ ಮತ್ತು ವೈಜ್ಞಾನಿಕ ತಜ್ಞರ ಸಭೆಗೆ ಕರೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, "ಆಫ್ರಿಕನ್‌ ದೇಶಗಳಿಂದ ಕೋವಿಡ್‌ ಹೊಸ ರೂಪಾಂತರದ ಬೆದರಿಕೆಯು ಇರುವ ಹಿನ್ನೆಲೆಯಿಂದಾಗಿ ನಾವು ತಜ್ಞರ ಬಳಿ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲು ತಿಳಿಸಿದ್ದೇವೆ. ಹಾಗೆಯೇ ನಾವು ಯಾವ ಕ್ರಮವನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಲು ಹೇಳಿದ್ದೇವೆ. ನಾವು ನಿಮ್ಮನ್ನು ಹಾಗೂ ನಿಮ್ಮ ಕುಟುಂಬವನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮವನ್ನು ಕೈಗೊಳ್ಳುತ್ತೇವೆ," ಎಂದು ತಿಳಿಸಿದ್ದಾರೆ.

ಈ ತಜ್ಞರ ತಂಡವು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಡಿಡಿಎಂಎ) ಹೊಸ ಕೋವಿಡ್‌ ರೂಪಾಂತರದ ಬಗ್ಗೆ ವಿವರವಾದ ಮಾಹಿತಿಯನ್ನು ಸೋಮವಾರ ನೀಡಲಿದೆ. ಇನ್ನು ಈ ತಜ್ಞರ ತಂಡವೇ ದೆಹಲಿಯಲ್ಲಿ ಈ ಹೊಸ ಕೋವಿಡ್‌ ರೂಪಾಂತರವನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಲಿದೆ.

New Covid Strain: Will Protect You, Your Family Says Arvind Kejriwal

ಏನಿದು ಹೊಸ ರೂಪಾಂತರ?

ದಕ್ಷಿಣ ಆಫ್ರಿಕಾ, ಹಾಂಗ್‌ಕಾಂಗ್‌, ಬೋಟ್ಸ್ವಾನದಲ್ಲಿ ಕೊರೊನಾ ವೈರಸ್‌ ಸೋಂಕಿನ ಹೊಸ ರೂಪಾಂತರ 8.1.1529 ಕಾಣಿಸಿಕೊಂಡಿದೆ. ಈ ಹಿನ್ನೆಲೆಯಿಂದಾಗಿ ಕೇಂದ್ರ ಸರ್ಕಾರವು ಕೂಡಾ ಎಚ್ಚೆತ್ತುಕೊಂಡಿದೆ. ಕೊರೊನಾ ವೈರಸ್‌ ಸೋಂಕಿನ ಹೊಸ ರೂಪಾಂತರ ಕಾಣಿಸಿಕೊಂಡಿರುವ ಹಿನ್ನೆಯಿಂದಾಗಿ ಕೇಂದ್ರ ಸರ್ಕಾರವು ದಕ್ಷಿಣ ಆಫ್ರಿಕಾ, ಹಾಂಗ್‌ಕಾಂಗ್‌, ಬೋಟ್ಸ್ವಾನದಿಂದ ಆಗಮಿಸುವವರಿಗೆ ಕಟ್ಟುನಿಟ್ಟಾದ ಸ್ಕ್ರೀನಿಂಗ್ ನಡೆಸಲು ಸೂಚನೆ ನೀಡಿದೆ.

ಕೋವಿಡ್‌ ಹೊಸ ರೂಪಾಂತರ: ಈ 3 ದೇಶದಿಂದ ಆಗಮಿಸುವವರಿಗೆ ಕಟ್ಟುನಿಟ್ಟಾದ ಸ್ಕ್ರೀನಿಂಗ್ಕೋವಿಡ್‌ ಹೊಸ ರೂಪಾಂತರ: ಈ 3 ದೇಶದಿಂದ ಆಗಮಿಸುವವರಿಗೆ ಕಟ್ಟುನಿಟ್ಟಾದ ಸ್ಕ್ರೀನಿಂಗ್

ಕೊರೊನಾ ವೈರಸ್‌ ಸೋಂಕಿನ ಈ ಹೊಸ ರೂಪಾಂತರವು ಈ ಹಿಂದಿನ ಎಲ್ಲಾ ರೂಪಾಂತರಕ್ಕಿಂತ ಹೆಚ್ಚು ಪರಿಣಾಮಕಾರಿ ಎಂದು ವರದಿಗಳು ಉಲ್ಲೇಖ ಮಾಡಿದೆ. ಹಾಗೆಯೇ ಈ ರೂಪಾಂತರವು ಅಧಿಕ ತಳಿಗಳ ಸೃಷ್ಟಿಗೆ ಕಾರಣವಾಗುತ್ತದೆ ಎಂದು ಕೂಡಾ ತಜ್ಞರು ತಿಳಿಸಿದ್ದಾರೆ. ಈ ಹಿನ್ನೆಲೆಯಿಂದಾಗಿ ಎಲ್ಲಾ ದೇಶಗಳು ಈಗ ಕಾಣಿಸಿಕೊಂಡಿದೆ. ಈ ಹೊಸ ರೂಪಾಂತರವು ಸುಮಾರು 50 ತಳಿಗಳನ್ನು ಹೊಂದಿದೆ. ಈ ಹೊಸ ರೂಪಾಂತರದ ಬಗ್ಗೆ ತಜ್ಞರು ಸಂಶೋಧನೆಯನ್ನು ನಡೆಸುತ್ತಲೇ ಇದ್ದಾರೆ.

ಚುನಾವಣೆ ಸಮೀಪವಾಗುತ್ತಿದ್ದಂತೆ ಅತ್ಯಂತ ಕ್ರಿಯಾಶೀಲರಾದ ಕೇಜ್ರಿವಾಲ್‌

ಮುಂದಿನ ವರ್ಷ ಉತ್ತರ ಪ್ರದೇಶ, ಗೋವಾ, ಪಂಜಾಬ್‌, ಮಣಿಪುರ, ಉತ್ತರಾಖಂಡದಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿದೆ. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ರಾಜಕೀಯ ತಂತ್ರವನ್ನು ನಡೆಸುತ್ತಲಿದೆ. ಈ ನಡುವೆ ಅರವಿಂದ್‌ ಕೇಜ್ರಿವಾಲ್‌ ಜನಪರವಾದ ಕಾರ್ಯಗಳನ್ನು ಮಾಡಿಕೊಳ್ಳುತ್ತಾ ಚುನಾವಣೆಯತ್ತ ಚಿತ್ತ ನೆಟ್ಟಿದ್ದಾರೆ.

ನಿನ್ನೆಯಷ್ಟೇ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಯೊಬ್ಬ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗೆ ತಲಾ 5,000 ರೂಪಾಯಿ ಜಮೆ ಮಾಡುವಂತೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಪಂಜಾಬ್‌ನಲ್ಲಿ ತಮ್ಮ ಸರ್ಕಾರ ರಚನೆಯಾದರೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಮಹಿಳೆಗೆ ಪ್ರತಿ ತಿಂಗಳು 1000 ರೂಪಾಯಿ ನೀಡಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ.

ಕೊರೊನಾವೈರಸ್ ಬಿ.1.1.529 ರೂಪಾಂತರ ಬಗ್ಗೆ ಚರ್ಚೆಗೆ WHO ತುರ್ತುಸಭೆಕೊರೊನಾವೈರಸ್ ಬಿ.1.1.529 ರೂಪಾಂತರ ಬಗ್ಗೆ ಚರ್ಚೆಗೆ WHO ತುರ್ತುಸಭೆ

ಹಾಗೆಯೇ ಜನರಿಗೆ ಭರವಸೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಮುಂಬರುವ 2022ರ ಗೋವಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಿದರೆ, ಸ್ಥಳೀಯರಿಗೆ ಶೇ.80ರಷ್ಟು ಉದ್ಯೋಗವನ್ನು ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಗಣಿಗಾರಿಕೆ ಮತ್ತು ಪ್ರವಾಸೋದ್ಯಮ ಉದ್ಯಮಗಳು ಸಾಮಾನ್ಯ ಸ್ಥಿತಿಗೆ ಬರುವವರೆಗೆ ಈ ವಲಯಗಳನ್ನು ಅವಲಂಬಿಸಿರುವ ಕುಟುಂಬಗಳಿಗೆ ತಿಂಗಳಿಗೆ 5,000 ರೂ. ನೀಡಲಾಗುವುದು ಎಂದು ಹೇಳಿದ್ದಾರೆ.

ಗೋವಾದಲ್ಲಿ ಪ್ರತಿ ಕುಟುಂಬದಿಂದ ಕನಿಷ್ಠ ಒಬ್ಬ ನಿರುದ್ಯೋಗಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಮತ್ತು ಉದ್ಯೋಗವಿಲ್ಲದ ಯುವಕರಿಗೆ ಉದ್ಯೋಗ ದೊರೆಯುವವರೆಗೆ ಮಾಸಿಕ 3,000 ರೂ. ನೀಡಲಾಗುವುದು ಎಂದು ಕೇಜ್ರಿವಾಲ್ ಅವರು ಭರವಸೆ ನೀಡಿದ್ದಾರೆ.(ಒನ್‌ಇಂಡಿಯಾ ಸುದ್ದಿ)

English summary
New Covid Strain: Will Protect You, Your Family Says Arvind Kejriwal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X