• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾರಿಗೆ ಕೊವಿಡ್-19 ಜೊತೆ ಡೆಂಗ್ಯೂ ಅಪಾಯ

|

ನವದೆಹಲಿ, ಸಪ್ಟೆಂಬರ್.25: ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ಸಪ್ಟೆಂಬರ್.23ರಂದು ತೀವ್ರ ಜ್ವರ ಮತ್ತು ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಎಲ್ಎನ್ ಜೆಪಿ ಆಸ್ಪತ್ರೆಗೆ ದಾಖಲಾಗಿದ್ದ ಡಿಸಿಎಂ ಮನೀಶ್ ಸಿಸೋಡಿಯಾ ದೇಹದಲ್ಲಿ ಬಿಳಿರಕ್ತ ಕಣಗಳ ಪ್ರಮಾಣ ಕಡಿಮೆಯಾದ ಬಗ್ಗೆ ವೈದ್ಯರು ತಿಳಿಸಿದ್ದರು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಸಾಕೇತ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ.

ನವದೆಹಲಿ ಎಲ್ಎನ್ ಜೆಪಿ ಆಸ್ಪತ್ರೆಗೆ ಡಿಸಿಎಂ ಮನೀಶ್ ಸಿಸೋಡಿಯಾ ದಾಖಲು

ತಮಗೆ ಕೊವಿಡ್-19 ಸೋಂಕು ಖಾತ್ರಿಯಾಗಿರುವ ಬಗ್ಗೆ ಸ್ವತಃ ಡಿಸಿಎಂ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದರು. "ಅಲ್ಪ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೊರೊನಾವೈರಸ್ ಸೋಂಕಿತ ತಪಾಸಣೆಯನ್ನು ಮಾಡಿಸಿಕೊಂಡಿದ್ದೆನು. ಈ ವೇಳೆ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ನಾನು ಸೆಲ್ಫ್ ಐಸೋಲೇಷನ್ ನಲ್ಲಿದ್ದೇನೆ" ಎಂದು ಮನೀಶ್ ಸಿಸೋಡಿಯಾ ಬರೆದುಕೊಂಡಿದ್ದರು.

ಜ್ವರ ಹೆಚ್ಚಾದ ಹಿನ್ನೆಲೆ ಆಸ್ಪತ್ರೆಗೆ ಶಿಫ್ಟ್:

   SP Balasubramanyam : ಇದು SPB ಹಾಡಿದ ಕೊನೆಯ ಹಾಡು | Oneindia Kannada

   ವೈದ್ಯಕೀಯ ತಪಾಸಣೆ ವೇಳೆ ಜ್ವರದ ಹೊರತಾಗಿ ಯಾವುದೇ ಸೋಂಕಿನ ಲಕ್ಷಣ ಇರಲಿಲ್ಲ. ಬೇರೆ ಯಾವುದೇ ರೀತಿ ಆರೋಗ್ಯ ಸಮಸ್ಯೆಗಳಿಲ್ಲ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರ ಆಶೀರ್ವಾದದಿಂದ ಗುಣಮುಖನಾಗಿ ಕರ್ತವ್ಯಕ್ಕೆ ಹಾಜರಾಗುತ್ತೇನೆ" ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದರು. ಇದಕ್ಕೂ ಮೊದಲು ಸಪ್ಟೆಂಬರ್.14ರಂದು ಕೊರೊನಾವೈರಸ್ ಸೋಂಕು ತಗುಲಿದ್ದ ಡಿಸಿಎಂ ಮನೀಶ್ ಸಿಸೋಡಿಯಾ ಅವರಲ್ಲಿ ಸಾಧಾರಣ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಆದರೆ ಬುಧವಾರ ಜ್ವರದ ತೀವ್ರತೆ ಹೆಚ್ಚಾದ ಹಿನ್ನೆಲೆ ಅವರನ್ನು ನವದೆಹಲಿಯ ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

   English summary
   New Delhi DCM Manish Sisodia, Admitted To Hospital With Coronavirus, Also Has Dengue.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X