• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

|

ನವದೆಹಲಿ, ಮೇ.10: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ನವದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್) ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ತಜ್ಞವೈದ್ಯರ ತಂಡವು ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿದು ಬಂದಿದೆ.

ಮೇ 3ರ ನಂತರ ದೇಶದ ಪರಿಸ್ಥಿತಿ ಇನ್ನಷ್ಟು ವಿಷಮ: ಮನಮೋಹನ್ ಸಿಂಗ್

ಭಾರತದ ಆರ್ಥಿಕತೆಯ ಸುಧಾರಣಾ ಶಿಲ್ಪಿ ಎಂದು ಪ್ರಸಿದ್ಧಿ ಪಡೆದಿರುವ ಡಾ.ಮನಮೋಹನ್ ಸಿಂಗ್ ದೇಶ ಕಂಡ ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದಾರೆ. ಪಿ.ವಿ.ನರಸಿಂಹರಾವ್ ಸರ್ಕಾರದ ಅವಧಿಯಲ್ಲಿ ವಿತ್ತ ಸಚಿವರಾಗಿ ಮನಮೋಹನ್ ಸಿಂಗ್ ಸೇವೆ ಸಲ್ಲಿಸಿದ್ದರು.

10 ವರ್ಷ ಭಾರತ ಪ್ರಧಾನಮಂತ್ರಿಯಾಗಿ ಸೇವೆ:

ಕೇಂದ್ರದ ವಿತ್ತ ಸಚಿವರಾಗಿ ನೀಡಿದ ಸೇವೆಯ ಬಳಿಕ ಮೇ.22ರ 2004ರಲ್ಲಿ ಕಾಂಗ್ರೆಸ್ ಸರ್ಕಾರವು ಅಸ್ತಿತ್ವಕ್ಕೆ ಬಂದಾಗ ದೇಶದ ಪ್ರಧಾನಮಂತ್ರಿಯಾಗಿ ಡಾ.ಮನಮೋಹನ್ ಸಿಂಗ್ ಆಯ್ಕೆಯಾದರು. ಅಲ್ಲಿಂದ 10 ವರ್ಷಗಳ ಕಾಲ ಅಂದರೆ ಮೇ.26, 2014ರವರೆಗೂ ಭಾರತದ ಪ್ರಧಾನಮಂತ್ರಿಯಾಗಿ ಡಾ.ಮನಮೋಹನ್ ಸಿಂಗ್ ಸೇವೆ ಸಲ್ಲಿಸಿದ್ದಾರೆ.

English summary
New-Delhi: Former Prime Minister Dr.Manmohan Singh Has Been Admitted To AIIMS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X