ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆ ಎನ್ ಯು ಆವರಣದಲ್ಲಿ ಪತ್ತೆಯಾಯ್ತು ಶಸ್ತ್ರಾಸ್ತ್ರಗಳು

By Prithviraj
|
Google Oneindia Kannada News

ನವದೆಹಲಿ, ನವೆಂಬರ್, 7: ಇಲ್ಲಿಯ ಪ್ರತಿಷ್ಠಿತ ಜವಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಬಂದೂಕೂಗಳು ಮತ್ತು ಸಿಡುತೋಪುಗಳಿದ್ದ ಕಪ್ಪು ಬಣ್ಣದ ಬ್ಯಾಗ್ ವೊಂದು ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬ್ಯಾಗ್ ಅನ್ನು ಮಧ್ಯರಾತ್ರಿ ಎರಡು ಗಂಟೆಗೆ ಕಾವಲು ಸಿಬ್ಬಂದಿ ಪತ್ತೆ ಹಚ್ಚಿದ್ದು, ಕೂಡಲೇ ಪೊಲೀಸರ ಗಮನಕ್ಕೆ ತಂದಿದ್ದಾರೆ.

ಇತ್ತೀಚೆಗೆ ಎ ಬಿ ವಿ ಪಿ ಜತೆಗೆ ಕಾದಾಡಿದ್ದ ಜೆ ಎನ್ ಯು ಎಂ ಎಸ್ ಸಿ ವಿದ್ಯಾರ್ಥಿ ನಜೀಬ್ ಅಹ್ಮದ್ 22 ದಿನಗಳಿಂದ ಕಾಣೆಯಾಗಿದ್ದು, ವಿವಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಬ್ಯಾಗ್ ಪತ್ತೆಯಾಗಿರುವುದು ಹಲವು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.

ಪತ್ತೆಯಾದ ಬ್ಯಾಗ್ ನಲ್ಲಿ ಒಂದು ಗನ್, ಏಳು ಗುಂಡುಗಳು ಮತ್ತು ಒಂದು ಸ್ಕ್ರೂ ಡ್ರೈವರ್ ಇದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

New Delhi: Pistol and cartridges found on JNU campus

ಸಿಬ್ಬಂದಿ ಮಾಹಿತಿ ಮೇರೆಗೆ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಬ್ಯಾಗ್ ವಶಕ್ಕೆ ಪಡೆದು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣವನ್ನು ದಾಖಲಿಸಿದ್ದಾರೆ.

ನಜೀಬ್ ಪತ್ತೆಗಾಗಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ನಜೀಬ್ ಅವರ ತಾಯಿಯೂ ಸಹ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 200ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದರು.

ಕಾಣೆಯಾಗಿರುವ ನಜೀಬ್ ಉತ್ತರ ಪ್ರದೇಶ ಮೂಲದವರಾಗಿದ್ದು, ಬಯೋಟೆಕ್ನಾಲಜಿ ವಿದ್ಯಾರ್ಥಿಯಾಗಿದ್ದರು. ಕಳೆದ ಅಕ್ಟೋಬರ್ 15ರಿಂದ ಈ ವಿದ್ಯಾರ್ಥಿ ಕಾಣೆಯಾಗಿದ್ದಾನೆ.

English summary
A pistol, seven cartridges and a screw driver were found in an abandoned bag on the Jawaharlal Nahru University campus in the early hours of Monday. Police said they have registered a case under the Arms Act against unknown persons and begun a probe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X