10 ತಿಂಗಳಿನಲ್ಲೇ ಹೊಸ ದಾಖಲೆ ಬರೆದ ಕೊರೊನಾ ಸಾವಿನ ಸಂಖ್ಯೆ!
ನವದೆಹಲಿ, ಫೆಬ್ರವರಿ.01: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ತಕ್ಕಮಟ್ಟಿಗೆ ತಗ್ಗಿದೆ. ನವದೆಹಲಿಯಲ್ಲಿ 10 ತಿಂಗಳಿನಲ್ಲೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಸಾವಿನ ಪ್ರಕರಣಗಳು ದಾಖಲಾಗಿವೆ. 24 ಗಂಟೆಗಳಲ್ಲಿ 121 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಾಪಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ ಮಹಾಮಾರಿಗೆ ಮೂವರು ಪ್ರಾಣ ಬಿಟ್ಟಿದ್ದಾರೆ.
ನವದೆಹಲಿಯ ಆಸ್ಪತ್ರೆಗಳಲ್ಲಿ ಕೇವಲ 32 ಮಂದಿ ಕೊರೊನಾವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಖ್ಯೆಯು ಕಳೆದ 10 ತಿಂಗಳಿನಲ್ಲೇ ಅತ್ಯಂತ ಕಡಿಮೆಯಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಟ್ವೀಟ್ ಮಾಡಿದ್ದಾರೆ.
ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 635217ಕ್ಕೆ ಏರಿಕೆಯಾಗಿದೆ. ಈವರೆಗೂ 623096 ಜನರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು ಮೃತಪಟ್ಟವರ ಸಂಖ್ಯೆ 10856ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬಾರತದಲ್ಲಿ ಕೊವಿಡ್-19 ಚಿತ್ರಣ:
ಭಾರತದಲ್ಲಿ ಒಂದೇ ದಿನ 11427 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದೊಂದು ದಿನಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಒಂದು ದಿನದಲ್ಲಿ 11858 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 118 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,07,57,610ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,54,392 ಮಂದಿ ಪ್ರಾಣ ಬಿಟ್ಟಿದ್ದಾರೆ. 1,04,34,983 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,68,235 ಸಕ್ರಿಯ ಪ್ರಕರಣಗಳಿವೆ.












Click it and Unblock the Notifications