• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗಣಿ ಅಕ್ರಮಗಳನ್ನು ಮಟ್ಟ ಹಾಕಲು ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ!

|

ನವದೆಹಲಿ, ಫೆ. 23: ರಾಜ್ಯದಲ್ಲಿ ಪದೇ ಪದೇ ಸಂಭವಿಸುತ್ತಿರುವ ಅಕ್ರಮ ಕ್ವಾರಿ ಸ್ಪೋಟದಿಂದ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗಿನ ಕಾನೂನುಗಳಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಅಕ್ರಮವಾಗಿ ಸ್ಪೋಟ ಸಾಮಗ್ರಿಗಳನ್ನು ಸಾಗಿಸುವುದನ್ನು ತಡೆಯುವುದು ಕಷ್ಟವಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಹೀಗಾಗಿ ಹೊಸ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗ ದೆಹಲಿಯಲ್ಲಿ ಮಾತನಾಡಿರುವ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಮಾಹಿತಿ ನೀಡಿದ್ದಾರೆ.

ಇನ್ನು ಮುಂದೆ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಸ್ಪೋಟಕ ವಸ್ತುಗಳನ್ನು ಬಳಸಲು ಸರ್ಕಾರದಿಂದ ಅನುಮತಿ ಪಡೆದವರು ಮಾತ್ರ ಬಳಕೆ ಮಾಡಲು ಹೊಸ ಕಾನೂನು ಜಾರಿ ಮಾಡುತ್ತೇವೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವರು ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಪೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದಲೇ ಇಂಥ ಘಟನೆಗಳು ನಡೆಯುತ್ತವೆ ಎಂದರು.

ಇದನ್ನು ತಡೆಯಲು ಸದ್ಯದಲ್ಲೇ ಹೊಸ ಕಾನೂನು ಜಾರಿ ಮಾಡಲಾಗುವುದು. ಸರ್ಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಪೋಟಕ ವಸ್ತುಗಳನ್ನು ಬಳಸುವಂತೆ ಕಾನೂನು ಜಾರಿ ಮಾಡುವುದಾಗಿ ತಿಳಿಸಿದರು.

ಕಾನೂನು ಬಾಹಿರ ಗಣಿಕಾರಿಗೆ

ಕಾನೂನು ಬಾಹಿರ ಗಣಿಕಾರಿಗೆ

ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಇಂಥಹುದರಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

ಈ ಘಟನೆಗಳು ನುರಿತ ಕೆಲಸಗಾರರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನಮಗೆ ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಗಣಿಗಾರಿಕೆ ಸ್ಥಳಗಳಲ್ಲಿ ಜಿಲಿಟಿನ್ ಕಡ್ಡಿಗಳು ಸೋಟಕಗಳು ಮತ್ತು ಇತರ ಸೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಗಣಿಗಾರಿಕೆ ಶಾಲೆ ಸ್ಥಾಪನೆ

ಗಣಿಗಾರಿಕೆ ಶಾಲೆ ಸ್ಥಾಪನೆ

ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಜೊತೆಗೆ ಗಣಿಗಾರಿಕೆ ಪ್ರದೇಶಗಳಲ್ಲಿನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಮತ್ತು ಅಕ್ರಮಗಳಲ್ಲಿ ಭಾಗಿಯಾಗಿರುವ ಯಾರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಎಷ್ಟೇ ದೊಡ್ಡವರಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನೇ ಸರ್ಕಾರ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ, ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಪುನಃ ಪುನಃ ಮರುಕಳಿಸುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ನಿರಾಣಿ ಹೇಳಿದ್ದಾರೆ.

ಸಂಜೆ ಘಟನಾ ಸ್ಥಳಕ್ಕೆ ಭೇಟಿ

ಸಂಜೆ ಘಟನಾ ಸ್ಥಳಕ್ಕೆ ಭೇಟಿ

ಈಗಾಗಲೇ ಸಚಿವರಾದ ಬಸವರಾಜ್ ಬೊಮ್ಮಾಯಿ, ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳು, ನಮ್ಮ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ವಸ್ತುಸ್ಥಿತಿ ಪರಿಶೀಲಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಶಿವಮೊಗ್ಗ ಸೋಟಕ್ಕೆ ಮುಂಚಿತವಾಗಿ ಸೋಟಕಗಳನ್ನು ಸಂಗ್ರಹಿಸಲಾಗಿದೆ ಎಂದು ನಾನು ಅಕಾರಿಗಳಿಂದ ತಿಳಿದುಕೊಂಡಿದ್ದೇನೆ. ಕೆಲವು ಅಕೃತ ಮತ್ತು ವೈಯಕ್ತಿಕ ಕೆಲಸಗಳಿಂದಾಗಿ ನಾನು ದೆಹಲಿಯಲ್ಲಿದ್ದೇನೆ. ನಾನು ಇಂದು ಸಂಜೆ ಬೆಂಗಳೂರಿಗೆ ತೆರಳಲಿದ್ದೇನೆ ಮತ್ತು ನೇರವಾಗಿ ಚಿಕ್ಕಬಲ್ಲಾಪುರದ ಸೋಟದ ಸ್ಥಳಕ್ಕೆ ಹೋಗುತ್ತೇನೆ ಎಂದು ತಿಳಿಸಿದರು.

ಸಿಎಂ ಯಡಿಯೂರಪ್ಪಗೆ ಮಾಹಿತಿ

ಸಿಎಂ ಯಡಿಯೂರಪ್ಪಗೆ ಮಾಹಿತಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಸಹ ಮಾಹಿತಿ ನೀಡಲಾಗಿದೆ. ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಸೂಕ್ತವಾದ ಚಿಕಿತ್ಸೆ ನೀಡಲಾಗುವುದು ಎಂದು ನಿರಾಣಿ ಆಶ್ವಾಸನೆ ನೀಡಿದ್ದಾರೆ. ಘಟನೆ ನಡೆದ ನಂತರ ಕೆಲವರು ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಪೋಲಿಸರು ತಕ್ಷಣವೇ ಅವರನ್ನು ಬಂಧಿಸುವ ವಿಶ್ವಾಸವಿದೆ. ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

ಸಚಿವರಾದ ಬಸವರಾಜ್ ಬೊಮ್ಮಾಯಿ, ಡಾ.ಕೆ. ಸುದಾಕರ್, ಚಿಕ್ಕಬಳ್ಳಾಪುರ ಡಿಸಿ, ಎಸ್‌ಪಿ ಮತ್ತು ನಮ್ಮ ಇಲಾಖೆಗಳ ಅಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ಅಂದಾಜು ಮಾಡಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಗೊಂಡ ವ್ಯಕ್ತಿಗೆ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಿದೆ ಎಂದು ನಿರಾಣಿ ತಿಳಿಸಿದರು.

English summary
New law will be implemented to control unauthorized stock of explosives in stone quarry and mining areas said Mines And Geology Minister Murugesh Nirani in New Delhi. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X