ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ರಿಟನ್‌ನಲ್ಲಿ ಹೊಸ ಕೊರೊನಾ ಸೋಂಕು ಪತ್ತೆ: ತುರ್ತು ಸಭೆ ಕರೆದ ಆರೋಗ್ಯ ಸಚಿವಾಲಯ

|
Google Oneindia Kannada News

ನವದೆಹಲಿ, ಡಿಸೆಂಬರ್ 21: ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಈ ಬಗ್ಗೆ ಚರ್ಚಿಸಲು ಕೇಂದ್ರದ ಆರೋಗ್ಯ ಸಚಿವಾಲಯವು ಸೋಮವಾರ ಜಂಟಿ ಮೇಲ್ವಿಚಾರಣಾ ಸಮಿತಿಯ ತುರ್ತು ಸಭೆಯನ್ನು ಕರೆದಿದೆ.

ಆರೋಗ್ಯ ಸೇವೆಗಳ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಂಟಿ ಮೇಲ್ವಿಚಾರಣಾ ಸಮಿತಿಯು ಸೋಮವಾರ ಸಭೆ ಸೇರಿ ಹೊಸ ವೈರಸ್‌ ಬಗ್ಗೆ ಚರ್ಚೆ ನಡೆಸಲಿದೆ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಭಾರತದ ಪ್ರತಿನಿಧಿಯಾಗಿರುವ ಡಾ. ರಾಡ್ರಿಕೊ ಎಚ್‌. ಆಫ್ರಿನ್‌ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 ಜನವರಿಯಿಂದಲೇ ಭಾರತೀಯರಿಗೆ ಕೊರೊನಾ ಲಸಿಕೆ ಸಿಗಲಿದೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಜನವರಿಯಿಂದಲೇ ಭಾರತೀಯರಿಗೆ ಕೊರೊನಾ ಲಸಿಕೆ ಸಿಗಲಿದೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

ಬ್ರಿಟನ್ ನಲ್ಲಿ ಪತ್ತೆಯಾಗಿರುವ ಹೊಸ ವೈರಸ್ ಹಾಲಿ ಇರುವ ವೈರಸ್ ತಳಿಗಿಂತ ಇದು ಶೇ.70ರಷ್ಟು ಹರಡುವಿಕೆ ವೇಗವನ್ನು ಹೊಂದಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈಗಾಗಲೇ ಪರಿಸ್ಥಿತಿ ಕೈ ಮೀರಿದೆ ಎಂದು ಸ್ವತಃ ಬ್ರಿಟನ್ ಸರ್ಕಾರ ಹೇಳಿದೆ. ಹೀಗಾಗಿ ಬ್ರಿಟನ್‌ನಿಂದ ಬರುವ ಎಲ್ಲಾ ವಿಮಾನಗಳನ್ನು ಯೂರೋಪ್ ಹಲವು ರಾಷ್ಟ್ರಗಳು ರದ್ದುಪಡಿಸಿವೆ.

New Mutant Coronavirus In UK : Health Ministry Calls Urgent Meeting Today

ಹೊಸ ಕೊರೊನಾವೈರಸ್ ಪತ್ತೆ ಹಿನ್ನೆಲೆಯಲ್ಲಿ ಬ್ರಿಟನ್‌ನ ನಗರ ಪ್ರದೇಶಗಳಲ್ಲಿ ಕಠಿಣ ಲಾಕ್‌ಡೌನ್‌ ಹೇರಲಾಗಿದೆ. ಹಲವು ಪ್ರದೇಶಗಳಲ್ಲಿ ಭಾನುವಾರದಿಂದಲೇ ಲಾಕ್‌ ಡೌನ್ ಜಾರಿಯಾಗಿದೆ. ಜೊತೆಗೆ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗಾಗಿ ಜನರು ಸೇರುವುದನ್ನು ನಿಷೇಧಿಸಲಾಗಿದೆ.

ಬ್ರಿಟನ್ ಪ್ರಧಾನಿ ಮಂತ್ರಿ ಬೋರಿಸ್ ಜಾನ್ಸನ್ ಜನರಲ್ಲಿ ಮನವಿ ಮಾಡಿದ್ದು, ಸಾರ್ವಜನಿಕರು ತಮ್ಮ ಕ್ರಿಸ್‌ಮಸ್ ಕೂಟಗಳನ್ನ (Get-togethers) ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.

English summary
The Union Health Ministry, alert over the spread of the mutant coronavirus strain in the UK, has called for an urgent meeting on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X