ಮಾಯಾವತಿಗೆ ಹೊಸ ಆಫರ್ ನೀಡಿದ ಕೇಂದ್ರ ಸಚಿವ
ನವದೆಹಲಿ, ಜನವರಿ 21: ಕಾಂಗ್ರೆಸ್ ನೊಂದಿಗೆ ಮುನಿಸಿಕೊಂಡು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅನ್ನು ಹೊರಗಿಟ್ಟು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿಮಾಡಿಕೊಂಡಿರುವ ಬಿಎಸ್ಪಿ ನಾಯಕಿ ಮಾಯಾವತಿ ಅವರಿಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೊಸ ಆಫರ್ ನೀಡಿದ್ದಾರೆ.
ಮಾಯಾವತಿ ಅವರು ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಆಗ ಅವರು ಬಿಜೆಪಿಯ ಬೆಂಬಲ ಪಡೆದಿದ್ದರು. ದಲಿತರಿಗಾಗಿ ಹೋರಾಡುವ ಇರಾದೆ ಮತ್ತು ದಲಿತರ ಉದ್ಧಾರಕ್ಕಾಗಿ ಹೋರಾಡುವ ಇಚ್ಛಾಶಕ್ತಿ ಮಾಯಾವತಿ ಅವರಿಗಿದ್ದರೆ, ಅವರು ಏನ್ ಡಿಎ ಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು. ಎಸ್ಪಿ-ಬಿಎಸ್ಪಿ ಮೈತ್ರಿ ಹೆಚ್ಚು ಕಾಲ ಬಾಳುವುದಿಲ್ಲ. ಏಕೆಂದರೆ ಜನರು ಈ ಮೈತ್ರಿಯನ್ನು ಒಪ್ಪುವುದಿಲ್ಲ ಎಂದು ಅಠಾವಳೆ ಹೇಳಿದ್ದಾರೆ.

2019 ರ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದಾಗಿಇತ್ತೀಚೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿ, ಘೋಷಿಸಿದ್ದವು. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 76 ಕ್ಷೇತ್ರಗಳಲ್ಲಿ ಎಸ್ಪಿ-ಬಿಎಸ್ಪಿ ಸ್ಪರ್ಧಿಸಲಿದ್ದು, ಕ್ರಮವಾಗಿ 37, 38 ಕ್ಷೇತ್ರಗಳನ್ನು ಹಂಚಿಕೊಂಡಿದ್ದವು.












Click it and Unblock the Notifications