ದೆಹಲಿಯಲ್ಲಿ ಕೊರೊನಾ ದಾಖಲೆ; ಖಾಸಗಿ ಹೋಟೆಲ್‌ಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ

ನವದೆಹಲಿ, ಏಪ್ರಿಲ್ 14: ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಆರಂಭವಾಗಿ ಇಷ್ಟು ದಿನಗಳಲ್ಲಿ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 17282 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಮಹಾಮಾರಿಗೆ 104 ಮಂದಿ ಪ್ರಾಣ ಬಿಟ್ಟಿದ್ದರೆ, 9,952 ಸೋಂಕಿತರು ಗುಣಮುಖರಾಗಿದ್ದಾರೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ದೆಹಲಿಯಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ7,67,438ಕ್ಕೆ ಏರಿಕೆಯಾಗಿದೆ. ಈವರೆಗೂ 7,05,162 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 11,540 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 50,736 ಸಕ್ರಿಯ ಪ್ರಕರಣಗಳಿವೆ.

 New Record: 17282 New Coronavirus Cases Reported in Delhi in the Last 24 Hours

ಗುರುವಾರ ಲೆಫ್ಟಿನೆಂಟ್ ಗವರ್ನರ್ ಮತ್ತು ಸಿಎಂ ಸಭೆ:

ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಣ ತಪ್ಪುತ್ತಿರುವ ಹಿನ್ನೆಲೆ ಗುರುವಾರ ಬೆಳಗ್ಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಸಹ ಭಾಗಿಯಾಗಲಿದ್ದು, ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಕೆ ನಿಯಂತ್ರಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಕೊರೊನಾವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕೆ ಹಾಸಿಗೆಗಳ ಅಭಾವ ಎದುರಾದ ಹಿನ್ನೆಲೆ ಕೆಲವು ಖಾಸಗಿ ಹೋಟೆಲ್ ಗಳಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಬುಧವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದರು. ಹೋಟೆಲ್ ಪಿತ್ರಶಿಶ್, ಫ್ರ್ಯಾಸರ್ ಸೂಟ್ಸ್, ಕ್ಯಾಸ್ಪಿಯಾ ಹೋಟೆಲ್, ಕ್ರೌನ್ ಪ್ಲಾಜಾ ಹೋಟೆಲ್, ಸೆವೆನ್ ಸೀ ಹೋಟೆಲ್ ಸೇರಿದಂತೆ ಹಲವು ಹೋಟೆಲ್ ಗಳಲ್ಲಿ ಕೊವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+