ದೆಹಲಿಯಲ್ಲಿ ಹೊಸ ರೂಪಾಂತರ ಓಮ್ರಿಕಾನ್ ಎದುರಿಸಲು ನ.29ರಂದು ಡಿಡಿಎಂಎ ಸಭೆ
ನವದೆಹಲಿ, ನವೆಂಬರ್ 27: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಹೊಸ ರೂಪಾಂತರದ 'ಓಮಿಕ್ರಾನ್' ಕುರಿತು ಎಚ್ಚರಿಕೆ ವಹಿಸಲಾಗುತ್ತಿದೆ. ಈಗಾಗಲೇ ಅನೇಕ ದೇಶಗಳಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದೆಹಲಿ ಆಸ್ಪತ್ರೆಗಳು ಹೆಚ್ಚು ಜಾಗರೂಕರಾಗಿರಲು ಮತ್ತು ಕೊವಿಡ್-19 ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಿಕೊಳ್ಳಲಾಗಿದೆ.
ದೆಹಲಿಯ ಸಾರ್ವಜನಿಕ ಸ್ಥಳಗಳು ಮತ್ತು ಕಾರ್ಯಗಳಲ್ಲಿ ಎಲ್ಲಾ ಕೊವಿಡ್-19 ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಆಸ್ಪತ್ರೆಗಳಲ್ಲಿ ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ದೆಹಲಿಯ ಮುಖ್ಯ ಕಾರ್ಯದರ್ಶಿ, ಪೊಲೀಸ್ ಕಮಿಷನರ್ ಮತ್ತು ಇತರ ಹಿರಿಯ ಅಧಿಕಾರಿಗಳಿಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಸೂಚಿಸಿದ್ದಾರೆ.
ಸೋಮವಾರ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಅಧಿಕಾರಿಗಳು, ಸಾಂಕ್ರಾಮಿಕ ರೋಗ ತಜ್ಞರು ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ಪ್ರತಿನಿಧಿಗಳನ್ನು ಭೇಟಿ ಮಾಡಿ ಪರಿಸ್ಥಿತಿ ಪರಿಶೀಲಿಸಲಿದ್ದಾರೆ. ತದನಂತರದಲ್ಲಿ ಹೊಸ ರೂಪಾಂತರ ತಳಿಯು ಹೆಚ್ಚಾಗಿ ವರದಿಯಾಗುತ್ತಿರುವ ರಾಷ್ಟ್ರಗಳಿಗೆ ಪ್ರಯಾಣವನ್ನು ಆರಂಭಿಸಬೇಕೇ ಬೇಡವೇ ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಕೊವಿಡ್-19 ಸೋಂಕಿನ ಬಗ್ಗೆ ಚರ್ಚೆಗೆ ತುರ್ತುಸಭೆ:
ಆಫ್ರಿಕನ್ ದೇಶಗಳಿಂದ ಹೊಸ COVID-19 ರೂಪಾಂತರದ ಭೀತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ಕರೆಯಲಾಗುವುದು. "ಆಫ್ರಿಕನ್ ದೇಶಗಳಿಂದ ಹೊಸ COVID-19 ರೂಪಾಂತರದಿಂದ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಸೋಮವಾರ DDMA ಗೆ ಪ್ರಸ್ತುತಿ ಮಾಡಲು ಮತ್ತು ನಾವು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಲು ತಜ್ಞರನ್ನು ವಿನಂತಿಸಿದ್ದೇವೆ. ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ರಕ್ಷಿಸಲು ನಾವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಜಿಂಬಾಬ್ವೆ ಮತ್ತು ಹಾಂಗ್ ಕಾಂಗ್‌ನಿಂದ ಡಿ-ಬೋರ್ಡಿಂಗ್ ವಿಮಾನಗಳಲ್ಲಿ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಇದರ ಮಧ್ಯೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೊರೊನಾವೈರಸ್ ಹೊಸ ರೂಪಾಂತರದಿಂದ ಪೀಡಿತ ದೇಶಗಳಿಂದ ಭಾರತಕ್ಕೆ ವಿಮಾನಗಳನ್ನು ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಏನಿದು ಕೊರೊನಾವೈರಸ್ ಹೊಸ ರೂಪಾಂತರ?:
ದಕ್ಷಿಣ ಆಫ್ರಿಕಾ, ಹಾಂಗ್‌ಕಾಂಗ್, ಬೋಟ್ಸ್ವಾನದಲ್ಲಿ ಕೊರೊನಾ ವೈರಸ್ ಸೋಂಕಿನ ಹೊಸ ರೂಪಾಂತರ ಬಿ.1.1529 ಕಾಣಿಸಿಕೊಂಡಿದೆ. ಈ ಹಿನ್ನೆಲೆಯಿಂದಾಗಿ ಕೇಂದ್ರ ಸರ್ಕಾರವು ಕೂಡಾ ಎಚ್ಚೆತ್ತುಕೊಂಡಿದೆ. ಕೊರೊನಾವೈರಸ್ ಸೋಂಕಿನ ಹೊಸ ರೂಪಾಂತರ ಕಾಣಿಸಿಕೊಂಡಿರುವ ಹಿನ್ನೆಯಿಂದಾಗಿ ಕೇಂದ್ರ ಸರ್ಕಾರವು ದಕ್ಷಿಣ ಆಫ್ರಿಕಾ, ಹಾಂಗ್‌ಕಾಂಗ್, ಬೋಟ್ಸ್ವಾನದಿಂದ ಆಗಮಿಸುವವರಿಗೆ ಕಟ್ಟುನಿಟ್ಟಾದ ಸ್ಕ್ರೀನಿಂಗ್ ನಡೆಸಲು ಸೂಚನೆ ನೀಡಿದೆ.
ಕೊರೊನಾ ವೈರಸ್ ಸೋಂಕಿನ ಈ ಹೊಸ ರೂಪಾಂತರವು ಈ ಹಿಂದಿನ ಎಲ್ಲಾ ರೂಪಾಂತರಕ್ಕಿಂತ ಹೆಚ್ಚು ಪರಿಣಾಮಕಾರಿ ಎಂದು ವರದಿಗಳು ಉಲ್ಲೇಖ ಮಾಡಿದೆ. ಹಾಗೆಯೇ ಈ ರೂಪಾಂತರವು ಅಧಿಕ ತಳಿಗಳ ಸೃಷ್ಟಿಗೆ ಕಾರಣವಾಗುತ್ತದೆ ಎಂದು ಕೂಡಾ ತಜ್ಞರು ತಿಳಿಸಿದ್ದಾರೆ. ಈ ಹಿನ್ನೆಲೆಯಿಂದಾಗಿ ಎಲ್ಲಾ ದೇಶಗಳು ಈಗ ಕಾಣಿಸಿಕೊಂಡಿದೆ. ಈ ಹೊಸ ರೂಪಾಂತರವು ಸುಮಾರು 50 ತಳಿಗಳನ್ನು ಹೊಂದಿದೆ. ಈ ಹೊಸ ರೂಪಾಂತರದ ಬಗ್ಗೆ ತಜ್ಞರು ಸಂಶೋಧನೆಯನ್ನು ನಡೆಸುತ್ತಲೇ ಇದ್ದಾರೆ.
* ದಕ್ಷಿಣ ಆಫ್ರಿಕಾ, ಬೋಟ್ಸ್ವಾನ ಹಾಗೂ ಬೇರೆ ನಾಲ್ಕು ಆಫ್ರಿಕನ್ ದೇಶಗಳಿಂದ ವಿಮಾನವನ್ನು ಯುಕೆ, ಸಿಂಗಾಪುರ ಹಾಗೂ ಇಸ್ರೆಲ್ ಸ್ಥಗಿತ ಮಾಡಿದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸುವ ವಿಮಾನವನ್ನು ಜರ್ಮನಿ ಹಾಗೂ ಇಟಲಿ ಸ್ಥಗಿತ ಮಾಡಿದೆ. ಆದರೆ ಈ ನಡುವೆ ಯುಕೆಯ ವಿರುದ್ಧ ದಕ್ಷಿಣ ಆಫ್ರಿಕಾ ಅಸಮಾಧಾನ ವ್ಯಕ್ತಪಡಿಸಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications