ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಹೊಸ ರೂಪಾಂತರ ಓಮ್ರಿಕಾನ್ ಎದುರಿಸಲು ನ.29ರಂದು ಡಿಡಿಎಂಎ ಸಭೆ

|
Google Oneindia Kannada News

ನವದೆಹಲಿ, ನವೆಂಬರ್ 27: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಹೊಸ ರೂಪಾಂತರದ 'ಓಮಿಕ್ರಾನ್' ಕುರಿತು ಎಚ್ಚರಿಕೆ ವಹಿಸಲಾಗುತ್ತಿದೆ. ಈಗಾಗಲೇ ಅನೇಕ ದೇಶಗಳಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದೆಹಲಿ ಆಸ್ಪತ್ರೆಗಳು ಹೆಚ್ಚು ಜಾಗರೂಕರಾಗಿರಲು ಮತ್ತು ಕೊವಿಡ್-19 ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಿಕೊಳ್ಳಲಾಗಿದೆ.

ದೆಹಲಿಯ ಸಾರ್ವಜನಿಕ ಸ್ಥಳಗಳು ಮತ್ತು ಕಾರ್ಯಗಳಲ್ಲಿ ಎಲ್ಲಾ ಕೊವಿಡ್-19 ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಆಸ್ಪತ್ರೆಗಳಲ್ಲಿ ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ದೆಹಲಿಯ ಮುಖ್ಯ ಕಾರ್ಯದರ್ಶಿ, ಪೊಲೀಸ್ ಕಮಿಷನರ್ ಮತ್ತು ಇತರ ಹಿರಿಯ ಅಧಿಕಾರಿಗಳಿಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಸೂಚಿಸಿದ್ದಾರೆ.

ಹೊಸ ಕೋವಿಡ್‌ ರೂಪಾಂತರದ ಬಗ್ಗೆ ನೀವು ತಿಳಿಯಲೇ ಬೇಕಾದ ಮಾಹಿತಿ..ಹೊಸ ಕೋವಿಡ್‌ ರೂಪಾಂತರದ ಬಗ್ಗೆ ನೀವು ತಿಳಿಯಲೇ ಬೇಕಾದ ಮಾಹಿತಿ..

ಸೋಮವಾರ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಅಧಿಕಾರಿಗಳು, ಸಾಂಕ್ರಾಮಿಕ ರೋಗ ತಜ್ಞರು ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ಪ್ರತಿನಿಧಿಗಳನ್ನು ಭೇಟಿ ಮಾಡಿ ಪರಿಸ್ಥಿತಿ ಪರಿಶೀಲಿಸಲಿದ್ದಾರೆ. ತದನಂತರದಲ್ಲಿ ಹೊಸ ರೂಪಾಂತರ ತಳಿಯು ಹೆಚ್ಚಾಗಿ ವರದಿಯಾಗುತ್ತಿರುವ ರಾಷ್ಟ್ರಗಳಿಗೆ ಪ್ರಯಾಣವನ್ನು ಆರಂಭಿಸಬೇಕೇ ಬೇಡವೇ ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

New Variant Omicron: Delhi Hospitals Asked To Stay Alert, DDMA Meet on Monday

ಕೊವಿಡ್-19 ಸೋಂಕಿನ ಬಗ್ಗೆ ಚರ್ಚೆಗೆ ತುರ್ತುಸಭೆ:
ಆಫ್ರಿಕನ್ ದೇಶಗಳಿಂದ ಹೊಸ COVID-19 ರೂಪಾಂತರದ ಭೀತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ಕರೆಯಲಾಗುವುದು. "ಆಫ್ರಿಕನ್ ದೇಶಗಳಿಂದ ಹೊಸ COVID-19 ರೂಪಾಂತರದಿಂದ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಸೋಮವಾರ DDMA ಗೆ ಪ್ರಸ್ತುತಿ ಮಾಡಲು ಮತ್ತು ನಾವು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಲು ತಜ್ಞರನ್ನು ವಿನಂತಿಸಿದ್ದೇವೆ. ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ರಕ್ಷಿಸಲು ನಾವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಜಿಂಬಾಬ್ವೆ ಮತ್ತು ಹಾಂಗ್ ಕಾಂಗ್‌ನಿಂದ ಡಿ-ಬೋರ್ಡಿಂಗ್ ವಿಮಾನಗಳಲ್ಲಿ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಮತ್ತು ಅವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಇದರ ಮಧ್ಯೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೊರೊನಾವೈರಸ್ ಹೊಸ ರೂಪಾಂತರದಿಂದ ಪೀಡಿತ ದೇಶಗಳಿಂದ ಭಾರತಕ್ಕೆ ವಿಮಾನಗಳನ್ನು ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

New Variant Omicron: Delhi Hospitals Asked To Stay Alert, DDMA Meet on Monday

ಏನಿದು ಕೊರೊನಾವೈರಸ್ ಹೊಸ ರೂಪಾಂತರ?:

ದಕ್ಷಿಣ ಆಫ್ರಿಕಾ, ಹಾಂಗ್‌ಕಾಂಗ್‌, ಬೋಟ್ಸ್ವಾನದಲ್ಲಿ ಕೊರೊನಾ ವೈರಸ್‌ ಸೋಂಕಿನ ಹೊಸ ರೂಪಾಂತರ ಬಿ.1.1529 ಕಾಣಿಸಿಕೊಂಡಿದೆ. ಈ ಹಿನ್ನೆಲೆಯಿಂದಾಗಿ ಕೇಂದ್ರ ಸರ್ಕಾರವು ಕೂಡಾ ಎಚ್ಚೆತ್ತುಕೊಂಡಿದೆ. ಕೊರೊನಾವೈರಸ್ ಸೋಂಕಿನ ಹೊಸ ರೂಪಾಂತರ ಕಾಣಿಸಿಕೊಂಡಿರುವ ಹಿನ್ನೆಯಿಂದಾಗಿ ಕೇಂದ್ರ ಸರ್ಕಾರವು ದಕ್ಷಿಣ ಆಫ್ರಿಕಾ, ಹಾಂಗ್‌ಕಾಂಗ್‌, ಬೋಟ್ಸ್ವಾನದಿಂದ ಆಗಮಿಸುವವರಿಗೆ ಕಟ್ಟುನಿಟ್ಟಾದ ಸ್ಕ್ರೀನಿಂಗ್ ನಡೆಸಲು ಸೂಚನೆ ನೀಡಿದೆ.

ಕೊರೊನಾ ವೈರಸ್‌ ಸೋಂಕಿನ ಈ ಹೊಸ ರೂಪಾಂತರವು ಈ ಹಿಂದಿನ ಎಲ್ಲಾ ರೂಪಾಂತರಕ್ಕಿಂತ ಹೆಚ್ಚು ಪರಿಣಾಮಕಾರಿ ಎಂದು ವರದಿಗಳು ಉಲ್ಲೇಖ ಮಾಡಿದೆ. ಹಾಗೆಯೇ ಈ ರೂಪಾಂತರವು ಅಧಿಕ ತಳಿಗಳ ಸೃಷ್ಟಿಗೆ ಕಾರಣವಾಗುತ್ತದೆ ಎಂದು ಕೂಡಾ ತಜ್ಞರು ತಿಳಿಸಿದ್ದಾರೆ. ಈ ಹಿನ್ನೆಲೆಯಿಂದಾಗಿ ಎಲ್ಲಾ ದೇಶಗಳು ಈಗ ಕಾಣಿಸಿಕೊಂಡಿದೆ. ಈ ಹೊಸ ರೂಪಾಂತರವು ಸುಮಾರು 50 ತಳಿಗಳನ್ನು ಹೊಂದಿದೆ. ಈ ಹೊಸ ರೂಪಾಂತರದ ಬಗ್ಗೆ ತಜ್ಞರು ಸಂಶೋಧನೆಯನ್ನು ನಡೆಸುತ್ತಲೇ ಇದ್ದಾರೆ.

* ದಕ್ಷಿಣ ಆಫ್ರಿಕಾ, ಬೋಟ್ಸ್ವಾನ ಹಾಗೂ ಬೇರೆ ನಾಲ್ಕು ಆಫ್ರಿಕನ್‌ ದೇಶಗಳಿಂದ ವಿಮಾನವನ್ನು ಯುಕೆ, ಸಿಂಗಾಪುರ ಹಾಗೂ ಇಸ್ರೆಲ್‌ ಸ್ಥಗಿತ ಮಾಡಿದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸುವ ವಿಮಾನವನ್ನು ಜರ್ಮನಿ ಹಾಗೂ ಇಟಲಿ ಸ್ಥಗಿತ ಮಾಡಿದೆ. ಆದರೆ ಈ ನಡುವೆ ಯುಕೆಯ ವಿರುದ್ಧ ದಕ್ಷಿಣ ಆಫ್ರಿಕಾ ಅಸಮಾಧಾನ ವ್ಯಕ್ತಪಡಿಸಿದೆ.

English summary
New Variant Omicron: Delhi Hospitals Asked To Stay Alert, DDMA Meet on Monday. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X