ಕೊವಿಡ್ 19: ಭಾರತದಲ್ಲಿ ಮುಂದಿನ ಎರಡೂವರೆ ತಿಂಗಳು ನಿರ್ಣಾಯಕ
ನವದೆಹಲಿ, ಅಕ್ಟೋಬರ್ 17:ಭಾರತದಲ್ಲಿ ಮುಂದಿನ ಎರಡೂವರೆ ತಿಂಗಳು ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಚಳಿಗಾಲ ಮತ್ತು ಸರಣಿ ಹಬ್ಬಗಳ ಕಾರಣದಿಂದಾಗಿ ಮುಂದಿನ ಎರಡೂವರೆ ತಿಂಗಳುಗಳು ಕೊರೊನ ವೈರಸ್ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕವಾಗಲಿವೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಕೌನ್ಸಿಲ್ ಫಾರ್ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆಗಳ ಮುಖ್ಯಸ್ಥರು,ನಿರ್ದೇಶಕರೊಂದಿಗೆ ಕೊವಿಡ್-19 ಸೂಕ್ತ ನಡವಳಿಕೆ ಕುರಿತು ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಹರ್ಷವರ್ಧನ್ ಅವರು, ಭಾರತದಲ್ಲಿ ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಮುಂದಿನ ಎರಡೂವರೆ ತಿಂಗಳು ಅತ್ಯಂತ ನಿರ್ಣಾಯಕವಾಗಿರಲಿದೆ.

ನಾವು ಹೆಚ್ಚು ಮುಂಜಾಗ್ರತೆ ವಹಿಸಿ ನಮ್ಮನ್ನು ನಾವು ರಕ್ಷಿಸಿಕೊಂಡರೆ ಇದರಿಂದ ಕೋವಿಡ್ ವಾರಿಯರ್ಸ್ ಗಳನ್ನೂ ರಕ್ಷಿಸಿದಂತೆ. ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಭಾರತದ ಚೇತರಿಕೆಯ ಪ್ರಮಾಣವು ವಿಶ್ವದಲ್ಲೇ ಅತಿ ಹೆಚ್ಚು ಮತ್ತು ಸಾವು ನೋವು ಅತ್ಯಂತ ಕಡಿಮೆ. ಸಕ್ರಿಯ ಪ್ರಕರಣಗಳು ನಿರಂತರವಾಗಿ ಕ್ಷೀಣಿಸುತ್ತಿವೆ ಎಂದು ಹೇಳಿದರು.
ಮಾಸ್ಕ್ ಧರಿಸುವುದು, ಕೈ ಮತ್ತು ಉಸಿರಾಟದ ಶಿಷ್ಟಾಚಾರಗಳನ್ನು ಅನುಸರಿಸುವುದು ಮುಖ್ಯ.
ಸಾಮಾಜಿಕ ಅಂತರ ಪಾಲನೆ ಮೂಲಕ ಸೋಂಕು ಹತ್ತಿರ ಬಾರದಂತೆ ನೋಡಿಕೊಳ್ಳಬಹುದು.ಭಾರತವು ಕೊವಿಡ್-19 ಚಿಕಿತ್ಸೆಯಲ್ಲಿ ನಿರಂತರವಾಗಿ ಹೊಸ ಮೈಲಿಗಲ್ಲುಗಳನ್ನು ದಾಖಲಿಸುತ್ತಿದೆ ಎಂದು ಹೇಳಿದರು.












Click it and Unblock the Notifications