ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಒಎಲ್ ಗೆ 5 ಕೋಟಿ ರು ದಂಡ, ಉತ್ಸವಕ್ಕೆ ಗ್ರೀನ್ ಸಿಗ್ನಲ್

By Mahesh
|
Google Oneindia Kannada News

ನವದೆಹಲಿ, ಮಾರ್ಚ್ 09: ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಆಯೋಜನೆಯ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ರಾಷ್ಟ್ರೀಯ ಹಸಿರು ಪ್ರಾಧಿಕಾರದಿಂದ ಬುಧವಾರ (ಮಾರ್ಚ್ 09) ಗ್ರೀನ್ ಸಿಗ್ನಲ್ ಸಿಕ್ಕಿದೆ. ಮಾರ್ಚ್ 11ರಂದು ಯಮುನಾ ನದಿ ತೀರದಲ್ಲೇ ನಿಗದಿಯಂತೆ ಕಾರ್ಯಕ್ರಮ ನಡೆಯಲಿದೆ. ಈ ನಡುವೆ ಆರ್ಟ್ ಆಫ್ ಲಿವಿಂಗ್ ಗೆ 5 ಕೋಟಿ ರು ದಂಡ ಕೂಡಾ ವಿಧಿಸಲಾಗಿದೆ.

ಯಮುನಾ ನದಿ ಮೇಲೆ ಸೇತುವೆ, ಪರಿಸರ ಕಲುಷಿತಗೊಂಡಿರುವುದು, ಸೈನಿಕರ ಬಳಕೆ ಹೀಗೆ ನಾನಾ ವಿವಾದಗಳ ಕೇಂದ್ರ ಬಿಂದುವಾಗಿರುವ ಈ ಕಾರ್ಯಕ್ರಮ ಹಲವು ರೀತಿಯಲ್ಲಿ ಸುದ್ದಿಯಲ್ಲಿತ್ತು. [ಏನಿದು ಆರ್ಟ್ ಆಫ್ ಲಿವಿಂಗ್ ಉತ್ಸವ ವಿವಾದ?]

NGT gives green signal to Sri Sri's World Culture Festival.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಾರ್ಚ್ 11ರಂದು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಹಾಗೂ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈಗ ಇಬ್ಬರು ಕೂಡಾ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಸಾಧ್ಯತೆ ಇದೆ.

ಏನಿದು ಕಾರ್ಯಕ್ರಮ: ಆರ್ಟ್ ಆಫ್ ಲಿವಿಂಗ್ ಸ್ಥಾಪನೆಯಾಗಿ 35 ವರ್ಷಗಳಾಗಿದ್ದು, ವಾರ್ಷಿಕೋತ್ಸವ ಸಮಾರಂಭವನ್ನು ಯಮುನಾ ನದಿ ತೀರದಲ್ಲಿ ಮೂರು ದಿನಗಳ ಕಾಲ ನಡೆಸಲು ಉದ್ದೇಶಿಸಲಾಗಿದೆ.

ಈ ಕಾರ್ಯಕ್ರಮದ ಆಯೋಜನೆಯಿಂದ ಯಮುನಾ ನದಿ ಕಲುಷಿತಗೊಂಡಿದೆ ಎಂದು ಪರಿಸರವಾದಿಗಳು ಆರೋಪಿಸಿ, ರಾಷ್ಟ್ರೀಯ ಹಸಿರು ಪ್ರಾಧಿಕಾರಕ್ಕೆ ದೂರು ನೀಡಿದ್ದರು. ಈ ಬಗ್ಗೆ ಬುಧವಾರ ಆರ್ಟ್ ಆಫ್ ಲಿವಿಂಗ್ ನ ಪ್ರತಿನಿಧಿಗಳು ಸ್ಪಷ್ಟನೆ ನೀಡಿ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಿಸಲು 15.63 ಕೋಟಿ ರು ವೆಚ್ಚವಾಗಿದ್ದು, ಅಲಂಕಾರಕ್ಕಾಗಿ 10 ಕೋಟಿ ರು ಖರ್ಚು ಮಾಡಲಾಗಿದೆ ಎಂದು ಹೇಳಿದ್ದರು.

ಯಮುನಾ ನದಿ ನೀರು ಹಾನಿಯಾಗಿರುವ ಕಾರಣ ಸುಮಾರು 100 ರಿಂದ 200 ಕೋಟಿ ರು ಪರಿಹಾರಕ್ಕೆ ಆಗ್ರಹಿಸಲಾಗಿತ್ತು. ಆದರೆ, ಪರಿಸರ ನಾಶ ಮಾಡಿದ ಕಾರಣಕ್ಕೆ ಆರ್ಟ್ ಆಫ್ ಲಿವಿಂಗ್ ಗೆ 5 ಕೋಟಿ ರು ದಂಡ ವಿಧಿಸಲಾಗಿದೆ. ಜೊತೆಗೆ ಯಮುನಾ ನದಿ ಪ್ರದೇಶದಲ್ಲಿ ಸಂಪೂರ್ಣವಾಗಿ ಜೀವ ವೈವಿಧ್ಯ ಉದ್ಯಾನ ನಿರ್ಮಿಸುವಂತೆ ಎಒಎಲ್ ಗೆ ಪ್ರಾಧಿಕಾರ ಸೂಚಿಸಿದೆ.

English summary
Natuonal Green Tribunal gives green signal to Sri Sri's World Culture Festival.NGT asks Art Of Living to develop entire area in question into a biodiversity park. Art of Living counsel tells NGT that total cost for creating venue of this event is 15.63 crore, in addition to 10 crore for decoration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X