ಸುಪ್ರೀಂಕೋರ್ಟ್‌ನಲ್ಲಿಂದು ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆ
ನವದೆಹಲಿ, ಜನವರಿ 13: ಸುಪ್ರೀಂಕೋರ್ಟ್‌ನಲ್ಲಿಂದು ಶಬರಿಮಲೆ ತೀರ್ಪು ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಯಲಿದೆ.
ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟಿನ 9 ಸದಸ್ಯರ ಪೀಠ ನಡೆಸಲಿದೆ. ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿ ಸಲ್ಲಿಕೆ ಆಗಿದ್ದ ಮೇಲ್ಮನವಿಯನ್ನು ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಪೀಠ ವಿಚಾರಣೆ ನಡೆಸಿತ್ತು. ನವೆಂಬರ್ 14ರಂದು ತೀರ್ಪು ನೀಡಿದ್ದ ಪೀಠ, ಈ ಪ್ರಕರಣವನ್ನು 9 ಸದಸ್ಯರ ಪೀಠಕ್ಕೆ ವರ್ಗಾವಣೆ ಮಾಡಿತ್ತು.
60 ಮರು ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮಾಡಲಿದೆ.ನ್ಯಾ. ನಾಗೇಶ್ವರ್ ರಾವ್, ನ್ಯಾ. ಎಂ.ಎಂ. ಶಾಂತಗೌಡರ್, ನ್ಯಾ. ಎಸ್.ಎ ನಜೀರ್, ನ್ಯಾ. ಆರ್. ಸುಭಾಶ್ ರೆಡ್ಡಿ, ನ್ಯಾ. ಆರ್ ಭಾನುಮತಿ, ನ್ಯಾ. ಅಶೋಕ್ ಭೂಷಣ್, ನ್ಯಾ. ಬಿ.ಆರ್. ಗವೈ ಮತ್ತು ನ್ಯಾ. ಸೂರ್ಯ ಕಾಂತ್ ಈ ಪೀಠದಲ್ಲಿದ್ದಾರೆ.

ನ್ಯಾ. ಚಂದ್ರಚೂಡ್, ನ್ಯಾ. ನಾರಿಮನ್ಅವರು ಶಬರಿಮಲೆ ದೇಗುಲ ಮಹಿಳೆಯರ ಪ್ರವೇಶಕ್ಕೆ ನಿರಾಕರಣೆ ಮಾಡಿದ್ದರು. ಉಳಿದ ಮೂವರು ನ್ಯಾಯಮೂರ್ತಿಗಳು ಮಹಿಳೆಯರ ಪ್ರವೇಶವನ್ನು ಬೆಂಬಲಿಸಿದ್ದರು.












Click it and Unblock the Notifications