ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಿರ್ಭಯಾ ಅಪರಾಧಿ

ನವದೆಹಲಿ, ಫೆಬ್ರವರಿ 28: ನಿರ್ಭಯಾ ಅತ್ಯಾಚಾರ ಪ್ರಕರಣ ಅಪರಾಧಿ ಪವನ್ ಗುಪ್ತಾ ಮರಣದಂಡನೆಯಿಂದ ಪಾರಾಗಲು ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾನೆ.

ತನಗೆ ನೀಡಲಾಗಿರುವ ಮರಣದಂಡನೆ ಶಿಕ್ಷೆಯನ್ನು ಕಡಿತಗೊಳಿಸುವಂತೆ ಪವನ್ ಗುಪ್ತಾ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ.

ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬೇಕು ಎಂದು ಪವನ್ ಗುಪ್ತಾ ಅರ್ಜಿ ಸಲ್ಲಿಸಿದ್ದಾನೆ. ಸುಪ್ರೀಂಕೋರ್ಟ್‌ನಲ್ಲಿ ಪವನ್ ಗುಪ್ತಾ ಅರ್ಜಿ ವಿಚಾರಣೆ ನಡೆಯಬೇಕಿದೆ.

Nirbhaya Case Convict Filled Curative Petition To Supreme

ಒಂದೊಮ್ಮೆ ಸುಪ್ರೀಂಕೋರ್ಟ್‌ನಲ್ಲಿ ಪವನ್ ಗುಪ್ತಾ ಅರ್ಜಿ ವಜಾ ಆದಲ್ಲಿ ಆತ ರಾಷ್ಟ್ರಪತಿಗಳಿಗೆ ಕ್ಷಮಾಧಾನ ಅರ್ಜಿ ಸಲ್ಲಿಸಬಹುದಾಗಿದೆ. ಉಳಿದ ಮೂವರು ಅಪರಾಧಿಗಳ ಅರ್ಜಿಗಳನ್ನು ಈಗಾಗಲೇ ರಾಷ್ಟ್ರಪತಿಗಳು ತಿರಸ್ಕಾರ ಮಾಡಿದ್ದಾರೆ.

Nirbhaya Case Convict Filled Curative Petition To Supreme

ನಿರ್ಭಯಾ ಸಾಮೂಹಿಕ ಅತ್ಯಾಚಾರಿಗಳಿಗೆ ಮಾರ್ಚ್ 3 ರಂದು ಮರದಂಡನೆ ಶಿಕ್ಷೆ ವಿಧಿಸುವಂತೆ ದೆಹಲಿ ಹೈಕೋರ್ಟ್ ಹೇಳಿದೆ. ಆದರೆ ಅಂದು ಮರಣದಂಡನೆ ವಿಧಿಸುವುದು ಅನುಮಾನವಾಗಿದೆ. ಈಗಾಗಲೇ ಒಬ್ಬ ಅಪರಾಧಿಗೆ ತಲೆಗೆ ಗಾಯವಾಗಿದ್ದರೆ, ಮತ್ತೊಬ್ಬ ಮಾನಸಿಕ ಅಸ್ವಸ್ಥನಾಗಿದ್ದಾನೆ. ಹೀಗಿದ್ದಾಗ ಮರಣದಂಡನೆ ಶಿಕ್ಷೆ ವಿಧಿಸುವಂತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+