ನಿರ್ಭಯಾ ಆರೋಪಿ ಪವನ್‌ಗುಪ್ತಾ ಕ್ಷಮಾಧಾನ ಕೋರಿ ರಾಷ್ಟ್ರಪತಿಗೆ ಅರ್ಜಿ
ನವದೆಹಲಿ, ಮಾರ್ಚ್ 2: ಕ್ಷಮಾಧಾನಕೋರಿ ನಿರ್ಭಯಾ ಅಪರಾಧಿ ಪವನ್‌ಗುಪ್ತಾ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದಾರೆ.
ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದು, ಇದೀಗ ಪ್ರಕರಣದ ಮತ್ತೋರ್ವ ಅಪರಾಧಿ ಪವನ್ ಗುಪ್ತಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಈ ಕುರಿತಂತೆ ಅಪರಾಧಿ ಪವನ್ ಗುಪ್ತಾ ಪರ ವಕೀಲ ಎಪಿ ಸಿಂಗ್ ಅವರು ಇಂದು ದೆಹಲಿಯ ಪಾಟಿಯಾಲಾ ಕೋರ್ಟ್ ಗೆ ಮಾಹಿತಿ ನೀಡಿದ್ದು, ತಮ್ಮ ಕಕ್ಷೀದಾರ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಈ ಅರ್ಜಿಯ ಇತ್ಯರ್ಥವಾಗುವವರೆಗೂ ಗಲ್ಲು ಶಿಕ್ಷೆಜಾರಿ ಮುಂದೂಡುವಂತೆ ಮನವಿ ಮಾಡಿದ್ದರು.

ಪವನ್ ಗುಪ್ತಾ ಸಲ್ಲಿಸಿದ್ದ ಈ ಕ್ಯುರೇಟಿವ್ ಅರ್ಜಿಯನ್ನು ಸೆಷನ್ಸ್ ಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾದ ಧರ್ಮೇಂದ್ರ ರಾಣಾ ಅವರು ವಜಾಗೊಳಿಸಿದ್ದಾರೆ. ಈ ಹಿಂದೆ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನೂ ವಜಾಗೊಳಿಸಲಾಗಿತ್ತು.
ಪ್ರಕರಣ ನಡೆದಾಗ ಪವನ್ ಗುಪ್ತಾ ಅಪ್ರಾಪ್ತ: 2012ರಲ್ಲಿ ಈ ಪ್ರಕರಣ ನಡೆದಾಗ ಪವನ್ ಗುಪ್ತಾ ಅಪ್ರಾಪ್ತನಾಗಿದ್ದ. ಈ ಅಂಶವನ್ನು ಪರಿಗಣಿಸದೇ ಕೋರ್ಟ್ ಗಲ್ಲು ಶಿಕ್ಷೆ ಜಾರಿ ಮಾಡಿತ್ತು.
ಹೀಗಾಗಿ ಇದೀಗ ಈ ಎಲ್ಲ ಅಂಶಗಳನ್ನು ಸೇರಿಸಿ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಹೀಗಾಗಿ ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ವಕೀಲ ಎಪಿ ಸಿಂಗ್ ಹೇಳಿದ್ದಾರೆ.












Click it and Unblock the Notifications