ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲಾ ಅರ್ಜಿ ತಿರಸ್ಕೃತ; ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಖಚಿತ

|
Google Oneindia Kannada News

ನವದೆಹಲಿ, ಮಾರ್ಚ್ 19 : ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ಸಲ್ಲಿಸಿದ್ದ ಎಲ್ಲಾ ಅರ್ಜಿಗಳು ಗುರುವಾರ ತಿರಸ್ಕಾರಗೊಂಡಿದೆ. ಪಟಿಯಾಲ ಹೌಸ್ ಕೋರ್ಟ್ ನ್ಯಾಯಾಲಯದ ಡೆತ್ ವಾರೆಂಟ್‌ನಂತೆ ಶುಕ್ರವಾರ ಮುಂಜಾನೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗುವುದು ಖಚಿತವಾಗಿದೆ.

ಪ್ರಕರಣದ ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ (31) ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಯನ್ನು ಗುರುವಾರ ಪಟಿಯಾಲಾ ಹೌಸ್ ನ್ಯಾಯಾಲಯ ವಜಾಗೊಳಿಸಿತು.

ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದರೆ ಪವನ್‌ಗೆ ಎಷ್ಟು ಸಿಗುತ್ತೆ? ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದರೆ ಪವನ್‌ಗೆ ಎಷ್ಟು ಸಿಗುತ್ತೆ?

ತಾನು ಬಾಲಾಪರಾಧಿ ಎಂದು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅಪರಾಧಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಗುರುವಾರ ಬೆಳಗ್ಗೆ ವಜಾಗೊಳಿಸಿತ್ತು.

ನಿರ್ಭಯ ಅತ್ಯಾಚಾರಿಗಳ ಗಲ್ಲು ಶಿಕ್ಷೆಗೆ ಮತ್ತೊಂದು ವಿಘ್ನ? ನಿರ್ಭಯ ಅತ್ಯಾಚಾರಿಗಳ ಗಲ್ಲು ಶಿಕ್ಷೆಗೆ ಮತ್ತೊಂದು ವಿಘ್ನ?

Nirbhaya Case Convicts Plea Seeking Stay On Execution Dismissed

ಪಟಿಯಾಲಾ ಹೌಸ್ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ಬಳಿಕ ಮಾತನಾಡಿದ ನಿರ್ಭಯ ತಾಯಿ ಪರ ವಕೀಲೆ ಸೀಮಾ ಕುಶ್ವಾ, "ಶುಕ್ರವಾರ ಬೆಳಗ್ಗೆ 5.30ಕ್ಕೆ ಎಲ್ಲಾ ಅಪರಾಧಿಗಳನ್ನು ಗಲ್ಲಿಗೇರಿಸುವ ವಿಶ್ವಾಸವಿದೆ" ಎಂದು ಹೇಳಿದ್ದಾರೆ.

ನಿರ್ಭಯ ಪ್ರಕರಣ; ಸಾವು ತಪ್ಪಿಸಿಕೊಳ್ಳಲು ಅಪರಾಧಿಗಳ ಕೊನೆ ಪ್ರಯತ್ನನಿರ್ಭಯ ಪ್ರಕರಣ; ಸಾವು ತಪ್ಪಿಸಿಕೊಳ್ಳಲು ಅಪರಾಧಿಗಳ ಕೊನೆ ಪ್ರಯತ್ನ

ಮರಣದಂಡನೆ ಶಿಕ್ಷೆಯನ್ನು ಪುನರ್ ಪರಿಶೀಲಿಸಬೇಕು ಎಂದು ಸಲ್ಲಿಸಿದ್ದ ಕ್ಯುರೆಟೀವ್ ಅರ್ಜಿ ವಜಾಗೊಂಡಿದೆ. ಎಲ್ಲಾ ಅಪರಾಧಿಗಳ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ. ಅಪರಾಧಿಗಳ ಮುಂದೆ ಯಾವುದೇ ಕಾನೂನಿನ ಆಯ್ಕೆ ಉಳಿದಿಲ್ಲ.

ಎಲ್ಲಾ ಅಪರಾಧಿಗಳು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅಲ್ಲಿಯೇ ಗಲ್ಲು ಶಿಕ್ಷೆ ಜಾರಿಗೆ ಸಕಲ ಸಿದ್ಧತೆ ನಡೆದಿದೆ. ಪವನ್ ಜಲ್ಲಾದ್ ಎಲ್ಲಾ ಆರೋಪಿಗಳನ್ನು ಗಲ್ಲಿಗೇರಿಸುವ ಪ್ರಕ್ರಿಯೆ ನಡೆಸಲಿದ್ದಾರೆ. ಒಬ್ಬ ಅಪರಾಧಿಗೆ 20 ಸಾವಿರ ರೂ. ನಂತೆ ಅವರಿಗೆ 80 ಸಾವಿರ ರೂ. ಸಿಗಲಿದೆ.

English summary
One day before the execution Delhi's Patiala House Court dismisses the plea of 2012 Delhi gangrape convicts seeking a stay on execution. Nirbhaya's lawyer Seema Kushwaha said that she is sure that all four convicts will be hanged at 5.30 am on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X