ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿರ್ಭಯ ಹಂತಕರಿಗೆ ಗಲ್ಲು; ದೆಹಲಿ ಹೈಕೋರ್ಟ್‌ಗೆ ತುರ್ತು ಅರ್ಜಿ

|
Google Oneindia Kannada News

ನವದೆಹಲಿ, ಮಾರ್ಚ್ 19 : ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರ ಮುಂಜಾನೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಗೆ ಸಿದ್ಧತೆ ನಡೆದಿದೆ.

ಅಪರಾಧಿಗಳು ಸಲ್ಲಿಸಿರುವ ಎಲ್ಲಾ ಅರ್ಜಿಗಳು ಗುರುವಾರ ತಿರಸ್ಕಾರಗೊಂಡಿದೆ. ಪಟಿಯಾಲ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್‌ನಂತೆ ಶುಕ್ರವಾರ ಮುಂಜಾನೆ 5.30ಕ್ಕೆ ನಾಲ್ವರನ್ನು ಗಲ್ಲಿಗೇರಿಸಬೇಕಿದೆ.

ಎಲ್ಲಾ ಅರ್ಜಿ ತಿರಸ್ಕೃತ; ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಖಚಿತ ಎಲ್ಲಾ ಅರ್ಜಿ ತಿರಸ್ಕೃತ; ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಖಚಿತ

ಗುರುವಾರ ರಾತ್ರಿ ಅಪರಾಧಿಗಳು ದೆಹಲಿ ಹೈಕೋರ್ಟ್‌ಗೆ ತುರ್ತು ಅರ್ಜಿಯನ್ನು ಸಲ್ಲಿಸಿದ್ದಾರೆ. ತಕ್ಷಣವೇ ಅರ್ಜಿ ವಿಚಾರಣೆ ನಡೆಸಬೇಕು. ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದರೆ ಪವನ್‌ಗೆ ಎಷ್ಟು ಸಿಗುತ್ತೆ? ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದರೆ ಪವನ್‌ಗೆ ಎಷ್ಟು ಸಿಗುತ್ತೆ?

Nirbhaya Case Convicts Plea To Delhi High Court Hours Before Execution

ಪ್ರಕರಣದ ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ (31) ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ಅರ್ಜಿ ಹಾಕಿದ್ದಾರೆ.

ನಿರ್ಭಯ ಪ್ರಕರಣ; ಸಾವು ತಪ್ಪಿಸಿಕೊಳ್ಳಲು ಅಪರಾಧಿಗಳ ಕೊನೆ ಪ್ರಯತ್ನನಿರ್ಭಯ ಪ್ರಕರಣ; ಸಾವು ತಪ್ಪಿಸಿಕೊಳ್ಳಲು ಅಪರಾಧಿಗಳ ಕೊನೆ ಪ್ರಯತ್ನ

ನಾಲ್ವರು ಅಪರಾಧಿಗಳ ಪರವಾಗಿ ಅರ್ಜಿಯನ್ನು ಸಲ್ಲಿಸಿರುವ ವಕೀಲ ಎ. ಪಿ. ಸಿಂಗ್ ಕಳ ಹಂತದ ನ್ಯಾಯಾಲಯ ಗಲ್ಲು ಶಿಕ್ಷೆಗೆ ತಡೆ ನೀಡದಿರುವ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ನ್ಯಾಯಾಲಯ ಅರ್ಜಿಯ ವಿಚಾರಣೆಗೆ ಒಪ್ಪಿಗೆ ನೀಡಲಿದೆಯೇ? ಕಾದು ನೋಡಬೇಕು. ನಾಲ್ವರು ಅಪರಾಧಿಗಳು ದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಜೈಲಿನಲ್ಲಿ ಗಲ್ಲು ಶಿಕ್ಷೆ ಜಾರಿಗೆ ಸಿದ್ಧತೆಗಳು ನಡೆದಿವೆ.

ಇದುವರೆಗೂ ಪ್ರಕರಣದಲ್ಲಿ 3 ಡೆತ್ ವಾರೆಂಟ್ ಜಾರಿಯಾಗಿತ್ತು. ವಿವಿಧ ಕಾರಣಗಳಿಗಾಗಿ ಗಲ್ಲು ಶಿಕ್ಷೆ ಮುಂದಕ್ಕೆ ಹೋಗಿತ್ತು. ಅಪರಾಧಿಗಳನ್ನು ಗಲ್ಲಿಗೇರಿಸಲು ಈಗ 4ನೇ ಡೆತ್ ವಾರೆಂಟ್ ಜಾರಿಗೊಂಡಿದೆ.

English summary
2012 Delhi Nirbhaya case convicts moved Delhi high court hours before execution seeking stay for execution. Delhi high court to hear plea shortly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X