ನಿರ್ಭಯಾ ಅತ್ಯಾಚಾರ: ಕೇಂದ್ರ ಸರ್ಕಾರದ ಅರ್ಜಿ ತೀರ್ಪು ಬುಧವಾರ
ನವದೆಹಲಿ, ಫೆಬ್ರವರಿ 4: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳ ಗಲ್ಲುಶಿಕ್ಷೆ ಜಾರಿ ಮಾಡಲು ತಡೆ ನೀಡಿರುವುದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಆದೇಶ ಪ್ರಕಟಿಸಲಿದೆ.
2012ರಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕ್ರೂರ ಹತ್ಯೆಯ ನಾಲ್ವರು ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆ ಇದುವರೆಗೂ ಜಾರಿಯಾಗಿಲ್ಲ. ಅಲ್ಲದೆ, ಗಲ್ಲುಶಿಕ್ಷೆಯ ದಿನಾಂಕವನ್ನು ಎರಡು ಬಾರಿ ಮುಂದೂಡಲಾಗಿದೆ. ಈಗ ಗಲ್ಲುಶಿಕ್ಷೆ ಜಾರಿಗೆ ದೆಹಲಿ ವಿಚಾರಣಾ ನ್ಯಾಯಾಲಯ ತಡೆ ನೀಡಿ, ಅದನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಈ ಕ್ರಮವನ್ನು ಕೇಂದ್ರ ಸರ್ಕಾರ ಹೈಕೋರ್ಟ್ನಲ್ಲಿ ಪ್ರಶ್ನಿಸಿದೆ.
ಕೇಂದ್ರದ ಅರ್ಜಿಯನ್ನು ಶನಿವಾರ ಮತ್ತು ಭಾನುವಾರ ವಿಶೇಷ ವಿಚಾರಣೆಗೆ ಒಳಪಡಿಸಿದ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್, ಫೆ. 2ರಂದು ಆದೇಶ ಕಾಯ್ದಿರಿಸಿದ್ದರು.

ಮುಕೇಶ್ ಕುಮಾರ್ ಸಿಂಗ್, ಪವನ್ ಗುಪ್ತಾ, ವಿನಯ್ ಕುಮಾರ್ ಶರ್ಮಾ ಮತ್ತು ಅಕ್ಷಯ್ ಕುಮಾರ್ ತಿಹಾರ್ ಜೈಲಿನಲ್ಲಿದ್ದು, ಗಲ್ಲುಶಿಕ್ಷೆ ಎದುರಿಸುತ್ತಿದ್ದಾರೆ. ಅಪರಾಧಿಗಳ ಪೈಕಿ ವಿನಯ್ ಶರ್ಮಾ ಮತ್ತು ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನದ ಅರ್ಜಿಗಳನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ತಿರಸ್ಕರಿಸಿದ್ದು, ಅಕ್ಷಯ್ ಕುಮಾರ್ ಅರ್ಜಿ ಪರಿಶೀಲನೆಗೆ ಬಾಕಿ ಇದೆ. ಮತ್ತೊಬ್ಬ ಅಪರಾಧಿ ಪವನ್ ಗುಪ್ತಾ, ಇನ್ನೂ ಕ್ಯುರೇಟಿವ್ ಅರ್ಜಿ ಮತ್ತು ಕ್ಷಮಾದಾನದ ಅರ್ಜಿ ಸಲ್ಲಿಸಲು ಅವಕಾಶವಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications